Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಿದ್ದರಾಮೇಶ್ವರರ ಜೀವನಾದರ್ಶಗಳನ್ನು ಎಲ್ಲರೂ ಪಾಲಿಸಿ : ತಹಶೀಲ್ದಾರ್ ಶ್ರೀಧರ ಸಲಹೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಿದ್ದರಾಮೇಶ್ವರರ ಜೀವನಾದರ್ಶಗಳನ್ನು ಎಲ್ಲರೂ ಪಾಲಿಸಿ : ತಹಶೀಲ್ದಾರ್ ಶ್ರೀಧರ ಸಲಹೆ* 

ಜನವರಿ 14, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.14 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಆಚರಿಸಲಾಯಿತು. ನಗರದ ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ತಹಶೀಲ್ದಾರರಾದ ಶ್ರೀಧರ ಅವರು ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ತಹಶೀಲ್ದಾರರು, ಶಿವಯೋಗಿ ಸಿದ್ದರಾಮೇಶ್ವರರ ವೈಚಾರಿಕ ಪೂರ್ಣ ವಿಚಾರಗಳನ್ನು ಇಂದು ನಾವು ಅರಿಯುವ ಅಗತ್ಯವಿದೆ ಎಂದರು. ಸಿದ್ದರಾಮೇಶ್ವರರ ಜೀವನಾದರ್ಶಗಳನ್ನು ಜನರಿಗೆ ತಲುಪಿಸಬೇಕಿದೆ. ಸಿದ್ದರಾಮೇಶ್ವರರು ಜನಾಂಗವೊಂದಕ್ಕೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ಆದರ್ಶನೀಯರು ಎಂದು ನುಡಿದರು. ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರಾದ ಉಷಾರಾಣಿ ಅವರು ಮಾತನಾಡಿ ಶಿವಯೋಗಿ ಸಿದ್ದರಾಮೇಶ್ವರರು ಜಗತ್ತಿಗೆ ಬೇಕಾದ ಒಬ್ಬ ಶ್ರೇಷ್ಠ ಸಂತ. ಯುವ ಜನಾಂಗದವರು ಇವರ ಆದರ್ಶನೀಯ, ಕಾಯಕಪೂರ್ಣ ಜೀವನವನ್ನು ಪಾಲಿಸುವಂತಾಗಬೇಕು ಎಂದರು. ಸಿದ್ದರಾಮೇಶ್ವರರು ಕೆರೆ-ಕಟ್ಟೆಗಳನ್ನು ನಿರ್ಮಿಸಿ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ. ವಚನಗಳ ಮೂಲಕ ಸಮಾಜವನ್ನು ಅಂದೇ ತಿದ್ದುವ ಕಾರ್ಯವನ್ನೂ ಸಹ ಮಾಡಿದ್ದಾರೆ ಎಂದು ನುಡಿದರು. ಶಿವಯೋಗಿ ಸಿದ್ದರಾಮೇಶ್ವರ 12ನೇ ಶತಮಾನದಲ್ಲಿ ನಡೆದ ಸಾಮಾಜಿಕ ಕ್ರಾಂತಿಗೆ ಭದ್ರ ಬುನಾದಿಯನ್ನು  ಹಾಕಿದವರಲ್ಲಿ ಒಬ್ಬರು ಎಂದರು.  ಸಿದ್ದರಾಮೇಶ್ವರರ ಚಿಂತನೆ, ಸಾಮಾಜಿಕ ಚಟುವಟಿಕೆಗಳನ್ನು ಅವರು ಬೆಳೆಸಿದರು. ಖುದ್ದು ಅಲ್ಲಮ ಪ್ರಭುವೇ ಸಿದ್ದರಾಮೇಶ್ವರರ ಬಗ್ಗೆ ಅರಿಯಲು ಅವರನ್ನು ಹುಡುಕಿಕೊಂಡು ಹೋಗಿ ಭೇಟಿಯಾಗಿದ್ದರು. ಅಷ್ಟರ ಮಟ್ಟಿಗಿನ ಪ್ರಭಾವ ಅವರ ವಚನಗಳಿಗಿತ್ತು ಎಂದು ತಿಳಿಸಿದರು.  ಭೋವಿ ಮಹಾಸಭಾದ ಜಿಲ್ಲಾಧ್ಯಕ್ಷರಾದ ಡಿ.ಸುಜಿತ್ ಅವರು ಮಾತನಾಡಿ ಶಿವಯೋಗಿ ಸಿದ್ದರಾಮೇಶ್ವರರ ಆದರ್ಶ ಮತ್ತು ತತ್ವಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು.  ಶಿವಯೋಗಿ ಸಿದ್ದರಾಮೇಶ್ವರರು ಕಾಯಕಕ್ಕೆ ಹೆಚ್ಚಿನ ಒತ್ತು ನೀಡಿ ಬಡವರ ಕಲ್ಯಾಣಕ್ಕಾಗಿ ದುಡಿದರು. ಬಹಳ ಹಿಂದೆಯೇ ಸ್ತ್ರೀ-ಪುರುಷರು ಸಮಾನರು ಎಂಬ ಸಂದೇಶವನ್ನು ಸಾರಿದರು. ಜೊತೆಗೆ ಸಾಮೂಹಿಕ ವಿವಾಹಗಳ ಮೂಲಕ ಕುಲದ ಭೇದವನ್ನು ಹೋಗಲಾಡಿಸುವ ಪ್ರಯತ್ನ ಮಾಡಿದರು ಎಂದು ತಿಳಿಸಿದರು.  ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು, ಮಣಜೂರು ಮಂಜುನಾಥ್ ಅವರು ನಿರೂಪಿಸಿ, ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.