Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೇಟೋಳಿ-ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಮಕರ ಜ್ಯೋತಿ ಪೂಜೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬೇಟೋಳಿ-ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಮಕರ ಜ್ಯೋತಿ ಪೂಜೆ

ಜನವರಿ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜ.15 NEWS DESK :  ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ  ಶ್ರೀ ಅಯ್ಯಪ್ಪ ಮಹೋತ್ಸವ ಹಾಗೂ ಮಕರ ಜ್ಯೋತಿ ಪೂಜಾ ಪೂಜೆ ಶ್ರದ್ಧಾಭಕ್ತಿಯಿಂದ ಜರುಗಿತು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅರ್ಚಕರಾದ ಪ್ರವೀಣ್ ಭಟ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿತು. ಶ್ರೀ ಅಯ್ಯಪ್ಪ ಉತ್ಸವದ ಪ್ರಯುಕ್ತ ದೇವಾಲಯದಲ್ಲಿ ದೇವತಾ ಪ್ರಾರ್ಥನೆ, ಗಣಪತಿ ಹೋಮ ನೆರವೇರಿತು. ಶ್ರೀ ಅಯ್ಯಪ್ಪ ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಮಹಾಗಣಪತಿ, ಶ್ರೀ ನಾಗ, ಶ್ರೀ ವನದುರ್ಗೆ ದೇವರುಗಳ ಗುಡಿಯಲ್ಲಿ ಪೂಜೆಯನ್ನು ಸಲ್ಲಿಸಲಾಯಿತು. ನಂತರ ಅರ್ಚಕರು ಶ್ರೀ ಅಯ್ಯಪ್ಪ ಸ್ವಾಮಿಗೆ ಹೂವಿನ ಅಲಂಕಾರ ಪೂಜೆ ಸಲ್ಲಿಸಿದರು. ದೇವಸ್ಥಾನದ ಒಳ ಆವರಣದಲ್ಲಿ ನಿರ್ಮಿಸಲಾಗಿದ್ದ ಹದಿನೆಂಟು ಮೆಟ್ಟಿಲುಗಳುಳ್ಳ ಮಂಟಪದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಅರ್ಚಕರು ಹಾಲಿನ ಅಭಿಷೇಕ, ತುಪ್ಪದ ಅಭಿಷೇಕ, ಸೀಯಾಳದ ಅಭಿಷೇಕ ಹಾಗೂ ಪಂಚಾಮೃತ ಅಭಿಷೇಕ, ಮಹಾ ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಿತು. ಸಂಜೆ ಶಬರಿಮಲೆಯಲ್ಲಿ ಮಕರ ಜ್ಯೋತಿಯ ದರ್ಶನ ಬಳಿಕ ಪುದುಪಾಡಿ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿ ಮಕರ ಜ್ಯೋತಿ ಪೂಜೆಯು ಶಾಸ್ತ್ರೋಕ್ತವಾಗಿ ಜರುಗಿತು. ಈ ಸಂದರ್ಭ ಶ್ರೀ ಅಯ್ಯಪ್ಪ ಮೂರ್ತಿಯ ಮಂಟಪದ ಎದುರು ಪಡಿ ಪೂಜೆ ನೆರವೇರಿತು. ಅರ್ಚಕರು ಅಯ್ಯಪ್ಪ ಸ್ವಾಮಿಗೆ ಸಂಕಲ್ಪವನ್ನು ಸಲ್ಲಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಮಹಿಳಾ ಭಜನಾ ಮಂಡಳಿಯ ವತಿಯಿಂದ ಭಜನಾವಳಿ, ಸ್ಥಳೀಯ ಶಾಲಾ ಮಕ್ಕಳಿಂದ ಕುಣಿತ ಭಜನೆ ನಡೆಯಿತು. ಶ್ರೀ ಅಯ್ಯಪ್ಪ ಮಹೋತ್ಸವದ ಪ್ರಯುಕ್ತ ಮಧ್ಯಾಹ್ನ ಹಾಗೂ ರಾತ್ರಿ ಭಕ್ತಾದಿಗಳಿಗೆ ಅನ್ನದಾನ ನೆರವೇರಿತು. ಸ್ಥಳೀಯ ಚಿತ್ರಕಲಾ ಕಲಾವಿದರಾದ ಸುನಾದ್ ಭಾರದ್ವಾಜ್ ಶ್ರೀ ಅಯ್ಯಪ್ಪ ಸಭಾಭವನಕ್ಕೆ ಕ್ಯಾನ್ವಾಸ್ ಪೇಂಟಿಂಗ್ ನಲ್ಲಿ ರಚಿಸಿದ ಗಣಪತಿ ಹಾಗೂ ಅಯ್ಯಪ್ಪ ಸ್ವಾಮಿ ದೇವರುಗಳ ಚಿತ್ರ ಕಲಾಕೃತಿಗಳನ್ನು ದೇವಸ್ಥಾನದ ಆಡಳಿತ ಮಂಡಳಿಯವರಿಗೆ ಹಸ್ತಾಂತರಿಸಿದರು. :: ಮಹಾಗಣಪತಿ ದೇವರಿಗೆ ಬೆಳ್ಳಿಯ ಮುಖ ಕವಚದ ಸಮರ್ಪಣೆ ::  ಶ್ರೀ ಅಯ್ಯಪ್ಪ ಮಹೋತ್ಸವದ ಸಂದರ್ಭದಲ್ಲಿ  ತಮ್ಮ ಮನದ ಇಷ್ಟಾರ್ಥಗಳು ಈಡೇರಿದ ಫಲವಾಗಿ ದಾನಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಬಿ.ಜಿ.ನಂದ ಬೋರ್ಕರ್, ಗೀತಾ ಬೋರ್ಕರ್ ದಂಪತಿಗಳು ಹಾಗೂ ಬೆಂಗಳೂರಿನ ದಾನಿಗಳಾದ ಪದ್ಮನಾಭ ಮಡ್ಕೇಕರ್, ಜಯ ದಂಪತಿಗಳು ದೇವಸ್ಥಾನದ ಒಳ ಆವರಣದಲ್ಲಿರುವ ಶ್ರೀ ಮಹಾಗಣಪತಿ ದೇವರಿಗೆ ಬೆಳ್ಳಿಯ ಮುಖ ಕವಚ ಹಾಗೂ ಶ್ರೀ ನಾಗದೇವರಿಗೆ ಹಿತ್ತಾಳೆಯ ಮುಖ ಕವಚವನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಸಂತೋಷ್, ಉಪಾಧ್ಯಕ್ಷರುಗಳಾದ ನಂದ ಬೋರ್ಕರ್, ಶೈಲೇಶ್ ಕಾಮತ್, ಕಾರ್ಯದರ್ಶಿ ಶಾಂತಿಭೂಷಣ್, ಸದಸ್ಯರುಗಳಾದ ರಾಮಶರ್ಮ, ವಾಸುದೇವ ಬಿ.ಆರ್., ಶ್ರೀಕಾಂತ್ ರಾವ್, ವೀಣಾ, ತೀರ್ಥರಾಮ್, ಸುಮನ ಬಿ.ಪಿ., ದಿನೇಶ್, ಸೀತಮ್ಮ ಹಾಗೂ ಭಕ್ತಾದಿಗಳು ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.