Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ಎತ್ತಿನ ಗಾಡಿಯೊಂದಿಗೆ ಕಳೆಗಟ್ಟಿದ ಸಂಕ್ರಾಂತಿ ಸಂಭ್ರಮ* 
ಇತ್ತೀಚಿನ ಸುದ್ದಿಗಳು

*ಕೂಡುಮಂಗಳೂರು ಪ್ರೌಢಶಾಲೆಯಲ್ಲಿ ಎತ್ತಿನ ಗಾಡಿಯೊಂದಿಗೆ ಕಳೆಗಟ್ಟಿದ ಸಂಕ್ರಾಂತಿ ಸಂಭ್ರಮ* 

January 15, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ಜ.15 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಮೀಣ ಜನಪದ ಸೊಗಡಿನ ಪ್ರತೀಕವಾದ ರೈತರ ಸುಗ್ಗಿ ಹಬ್ಬವಾದ ಸಂಕ್ರಾಂತಿ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಪೂಜೆ ನೆರವೇರಿಸುವ ಮೂಲಕ ಶಾಲೆಯ ವಿದ್ಯಾರ್ಥಿಗಳು ಗ್ರಾಮೀಣ ಸೊಗಡಿನ ಸಂಕ್ರಾಂತಿ ಹಬ್ಬದ ಸಂಸ್ಕೃತಿ ಬಿಂಬಿಸುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಅಲಂಕೃತ ಎತ್ತಿನ ಗಾಡಿ ಜತೆಗೆ ಎತ್ತುಗಳೊಂದಿಗೆ ಕೃಷಿ ಸಲಕರಣೆಗಳು ಮತ್ತು ಧಾನ್ಯಗಳ ರಾಶಿ ಹಾಗೂ ಗೋ ಪೂಜೆ ಮಾಡಿ ವಿದ್ಯಾರ್ಥಿಗಳು ಖುಷಿಪಟ್ಟು ಅನ್ನದಾತರ ಅರಿವು ಮೂಡಿಸುವ ಸುಗ್ಗಿ ಸಂಭ್ರಮದಲ್ಲಿ ಭಾಗಿಯಾದರು. ವಿದ್ಯಾರ್ಥಿಗಳು ರಂಗೋಲಿ ಚಿತ್ತಾರದೊಂದಿಗೆ ಎಳ್ಳು ಬೆಲ್ಲ ಕಬ್ಬು, ಹಣ್ಣು‌ ಹಂಚಿಕೆ, ಸಾಂಪ್ರದಾಯಿಕ ಉಡುಪು, ಕುಣಿತದೊಂದಿಗೆ ಸಂಭ್ರಮಿಸಿದರು. ಶಾಲಾವರಣದಲ್ಲಿ ನಡೆದ ಸಂಕ್ರಾಂತಿ ಸಂಭ್ರಮ ಕಳೆಗಟ್ಟಿತ್ತು. ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವ ರೀತಿ ಓದುವ ವಿದ್ಯಾರ್ಥಿಗಳಲ್ಲಿ ಹಬ್ಬ ಹರಿದಿನ, ಸಂಪ್ರದಾಯ, ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸಲು ಶಾಲೆಯ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) ಘಟಕ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಘಟಕದಿಂದ
ಆಯೋಜಿಸಲಾಗಿದ್ದ ಈ ಕಾರ್ಯಕ್ರಮ ಮಕ್ಕಳು ಮತ್ತು ಗ್ರಾಮಸ್ಥರ ಮನಸೂರೆಗೊಂಡಿತು. ಸಂಕ್ರಾಂತಿ ಹಬ್ಬದ ಕುರಿತು ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಬೆಳೆಗಳು ರೈತರ ಕೈ ಸೇರಿದ ಖಷಿಯಲ್ಲಿ ಎಲ್ಲರೂ ಸಾಮೂಹಿಕವಾಗಿ ತಮ್ಮ ತಮ್ಮ ಹೊಲ, ಗದ್ದೆಗಳಲ್ಲಿ ನವ ಧಾನ್ಯಗಳನ್ನು ರಾಶಿ ಹಾಕಿ ಪೂಜೆ ಮಾಡುತ್ತಿದ್ದು, ಇದನ್ನು ಯುವ ಪೀಳಿಗೆಗೆ ಪರಿಚಯಿಸಿ ಮುಂದುವರೆಸಿಕೊಂಡು ಹೋಗುವಂತೆ ಪ್ರೇರೇಪಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು. ಸಂಕ್ರಾಂತಿ ಹಬ್ಬದ‌ ಮಹತ್ವ‌ ಕುರಿತು ಮಾತನಾಡಿದ ಕನ್ನಡ ಭಾಷಾ ಶಿಕ್ಷಕ ಕೆ.ಗೋಪಾಲಕೃಷ್ಣ,
ಸಂಕ್ರಾಂತಿ ಎಂದರೆ ರೈತರಿಗೆ ಸುಗ್ಗಿಯ ಹಬ್ಬ. ವರ್ಷವಿಡೀ ಕಷ್ಟಪಟ್ಟು ದುಡಿಯುವ ರೈತರು ಸಂಕ್ರಾಂತಿ ಬಂದರೆ ಸಾಕು ಬೆಳೆದ ಬೆಳೆ, ಜಾನುವಾರು, ಕುಟುಂಬ, ಬಂಧು-ಬಳಗದ ಜೊತೆ ಸುಗ್ಗಿಯನ್ನು ಹುಗ್ಗಿಯನ್ನಾಗಿ ಸಂಭ್ರಮಿಸುವ ಕಾಲವಿದು. ಇದು ಗ್ರಾಮೀಣ ಜನಪದ ಸಂಸ್ಕೃತಿಯ ಪ್ರತೀಕವಾಗಿದೆ ಎಂದರು. ನವಧಾನ್ಯಗಳ ರಾಶಿಗೆ ಪೂಜೆ ಸಲ್ಲಿಸಿದ ಗ್ರಾಮದ ಹಿರಿಯ ಕೃಷಿಕ ಕೆ.ಎಸ್.ರಾಜಾಚಾರಿ ಮಾತನಾಡಿ, ಸಂಕ್ರಾಂತಿ ಹಬ್ಬವನ್ನು ಹಳ್ಳಿಗಳಲ್ಲಿ ಸಾಂಪ್ರದಾಯಿಕವಾಗಿ ಹಿಂದಿನಿಂದಲೂ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಸಂಕ್ರಾಂತಿ ಶುಭಾಶಯಗಳನ್ನು ತಿಳಿಸಿದರು. ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಬಿ.ಡಿ.ರಮ್ಯ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ,
ಎನ್ನೆಸ್ಸೆಸ್ ಅಧಿಕಾರಿ ಕೆ.ಟಿ.ಸೌಮ್ಯ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಎಚ್.ಎಸ್.ಸುಜಾತ, ಕಛೇರಿ ಸಿಬ್ಬಂದಿ ಎಂ.ಉಷಾ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು‌ ಮತ್ತು ವಿದ್ಯಾರ್ಥಿಗಳು ಸಂಕ್ರಾಂತಿ ಸಂಭ್ರಮಕ್ಕೆ ಸಾಕ್ಷಿಯಾದರು. ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪರಸ್ಪರ ಎಳ್ಳು ಬೆಲ್ಲ ಹಂಚಿ ಕುಣಿದು ಸಂಭ್ರಮಿಸಿದರು. ಮಕ್ಕಳ ಸಂಭ್ರಮಕ್ಕೆ ಶಿಕ್ಷಕರು ಸಾಥ್ ನೀಡಿದರು. ನಂತರ ಕೂಡ್ಲೂರು ಗ್ರಾಮದ ಕೃಷಿಕ ಕೆ.ಆರ್.ನಾಗರಾಜ್ ಅವರ ಎತ್ತಿನ ಗಾಡಿಗೆ‌ ಏರಿದ ವಿದ್ಯಾರ್ಥಿಗಳು ಗಾಡಿಯಲ್ಲಿ ಸಂಚರಿಸಿ ಸಂತಸಪಟ್ಟರು. ಕೃಷಿಕ‌ ದಂಪತಿ ಕೆ.ಆರ್.ನಾಗರಾಜ್ ಮತ್ತು ರಜನಿ ಹಾಗೂ ಅವರ ಮಗಳು ಕೆ.ಎನ್.ಪುಣ್ಯ, ಸಂಕ್ರಾಂತಿಯ ಹಬ್ಬದ ಆಚರಣೆಗಳನ್ನು ನಡೆಸಿಕೊಟ್ಟರು. ಶಾಲಾ ಅಂಗಳದಲ್ಲಿ ತೋಳೂರು ಶೆಟ್ಟಳ್ಳಿ ಡಾ ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿನಿ‌ ಕೆ.ಎನ್.ಪುಣ್ಯ, ಬಿಡಿಸಿದ್ದ ಸಂಕ್ರಾಂತಿ ಹಬ್ಬ ಪ್ರತಿಬಿಂಬಿಸುವ ಬಣ್ಣಬಣ್ಣದ ರಂಗೋಲಿ ಚಿತ್ರ‌ಗಮನ ಸೆಳೆಯಿತು. ಸಂಕ್ರಾಂತಿ ಹಬ್ಬವನ್ನು ಗ್ರಾಮೀಷ ಪ್ರದೇಶದಲ್ಲಿ ರೈತರು ತಾವು ವರ್ಷ ಪೂರ್ತಿ ವ್ಯವಸಾಯ ಮಾಡಿ ಬೆಳೆದ ಬೆಳೆಗಳನ್ನು ರಾಶಿ ಹಾಕಿ ಅವುಗಳಿಗೆ ಪೂಜೆ ಸಲ್ಲಿಸಿ ಸುಗ್ಗಿ ಹಬ್ಬವಾಗಿ ಆಚರಿಸುವುದು, ರೈತರಿಗೆ ವ್ಯವಸಾಯದಲ್ಲಿ ಪೂರಕವಾಗಿ ಸಹಕಾರ ನೀಡಿದ ವ್ಯವಸಾಯ ಸಲಕರಣೆಗಳು, ಹಸು, ಕರು, ದನಗಳನ್ನು ಪೂಜಿಸುವುದು ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿಯಾಗಿದೆ.

Share. Facebook Twitter Pinterest LinkedIn Tumblr Email WhatsApp
Previous Article*ಕುಶಾಲನಗರದಲ್ಲಿ ಹಿರಿಯ ಸಹಕಾರಿ ಕೊಮಾರಪ್ಪ ಅವರಿಗೆ ಶ್ರದ್ದಾಂಜಲಿ*
Next Article *ಅಬಾಕಸ್ ಅಕಾಡೆಮಿಯಿಂದ ಪ್ರತಿಭಾ ಪರೀಕ್ಷೆ : ಏಷ್ಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ವಿದ್ಯಾರ್ಥಿಗಳ ಸಾಧನೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.