Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ.18 ರಂದು ಮಡಿಕೇರಿಯಲ್ಲಿ ಪತ್ರಕರ್ತರ ಸಂಕ್ರಾಂತಿ ಕ್ರಿಕೆಟ್ ಸಂಭ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ.18 ರಂದು ಮಡಿಕೇರಿಯಲ್ಲಿ ಪತ್ರಕರ್ತರ ಸಂಕ್ರಾಂತಿ ಕ್ರಿಕೆಟ್ ಸಂಭ್ರಮ*

ಜನವರಿ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.15 NEWS DESK : ಕೊಡಗು ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕ್ಷೇಮ ನಿಧಿಯನ್ನು ಕ್ರೋಢೀಕರಿಸುವ ಮಹತ್ವದ ಚಿಂತನೆಗಳ ಹಿನ್ನೆಲೆಯಲ್ಲಿ ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಮಿತಿಯಿಂದ ಜ.18ರಂದು ನಗರದಲ್ಲಿ ‘ಪತ್ರಕರ್ತರ ಸಂಕ್ರಾಂತಿ ಕ್ರಿಕೆಟ್ ಸಂಭ್ರಮ-2026’ ಆಯೋಜಿತವಾಗಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕೊಡಗು ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಯ ಅಧ್ಯಕ್ಷರಾದ ಜಿ.ವಿ.ರವಿ ಕುಮಾರ್, ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ, ಸರ್ಕಾರದ ಅಧಿಕೃತ ಮಾನ್ಯತೆ ಪಡೆದ ಕೆಲವೇ ಕೆಲವು ಪತ್ರಕರ್ತರಿಗೆ ಮಾತ್ರ ಸರ್ಕಾರದ ಸೌಲಭ್ಯಗಳು ತಲುಪುತ್ತಿದೆ. ಗ್ರಾಮೀಣ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಸೌಲಭ್ಯಗಳಿಂದ ವಂಚಿತರಾಗಿ, ಸಂಕಷ್ಟದ ಸಂದರ್ಭಗಳಲ್ಲಿ ತೊಂದರೆಗೆ ಸಿಲುಕುತ್ತಿದ್ದಾರೆ. ಈ ಹಿನ್ನೆಲೆ ಸಂಪನ್ಮೂಲ ಕ್ರೋಢೀಕರಣಕ್ಕಾಗಿ ಎಂ ಅಂಡ್ ಎಂ ಹಾಗೂ ಲೀಡಿಂಗ್ ಎಡ್ಜ್ ಪ್ರಾಯೋಜಿತ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯನ್ನು ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿರುವುದಾಗಿ ತಿಳಿಸಿದರು. :: ಸಂಭ್ರಮದ ಕ್ರಿಕೆಟ್ ಪಂದ್ಯಾವಳಿ :: ಸಂಕ್ರಾಂತಿ ಕ್ರಿಕೆಟ್ ಸಂಭ್ರಮ ಪಂದ್ಯಾವಳಿಯಲ್ಲಿ ರಾಜಕಾರಣಿಗಳು ಮತ್ತು ಅಧಿಕಾರಿಗಳ ತಂಡದ ನಡುವೆ ಅಂದು ಬೆಳಗ್ಗೆ 9 ಗಂಟೆಗೆ ಸೌಹಾರ್ದ ಪಂದ್ಯ ನಡೆಯಲಿದೆ. ಬಳಿಕ ಪತ್ರಕರ್ತರ ನಾಲ್ಕು ತಂಡಗಳಾದ ಸಿರಿ, ಸಮೃದ್ಧಿ, ಹೊನ್ನು ಮತ್ತು ಸುಗ್ಗಿ ನಡುವೆ ಪಂದ್ಯಗಳು ನಡೆಯಲಿದೆಯೆಂದು ತಿಳಿಸಿದರು. ಪಂದ್ಯಾವಳಿಯನ್ನು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಹಾಗೂ ಎಂಎಲ್‍ಸಿ ಎಂ.ಪಿ. ಸುಜಾ ಕುಶಾಲಪ್ಪ ಅವರು ಉದ್ಘಾಟಿಸಲಿದ್ದಾರೆ. ಸಭಾ ಕಾರ್ಯಕ್ರವನ್ನು ಉದ್ಯಮಿಗಳು, ಸಮಾಜ ಸೇವಕರಾದ ನಾಪಂಡ ಮುತ್ತಪ್ಪ, ನಾಪಂಡ ಮುದ್ದಪ್ಪ ಉದ್ಘಾಟಿಸಲಿದ್ದಾರೆ. ಕ್ರೀಡಾ ಪಟುಗಳ ಜೆರ್ಸಿಗಳನ್ನು ಉದ್ಯಮಿಗಳು ಹಾಗೂ ಸಮಾಜ ಸೇವಕರಾದ ಎಡಿಕೇರಿ ಪ್ರಸನ್ನ ಅವರು ಅನಾವರಣಗೊಳಿಸಿದ್ದಾರೆ.ದಾನಿಗಳಿಂದ ಸಂಗ್ರಹವಾದ ಹಣವನ್ನು ಪತ್ರಕರ್ತರ ಸಂಘದ ಸದಸ್ಯರ ಕ್ಷೇಮಾಭಿವೃದ್ಧಿಗಾಗಿ ಬಳಸಲಾಗುತ್ತದೆ. ಸಂಜೆ 5 ಗಂಟೆಗೆ ಸಮಾರೋಪ ನಡೆಯಲಿದೆಯೆಂದು ತಿಳಿಸಿದರು. :: ಆಹ್ವಾನ ಪತ್ರಿಕೆ ಬಿಡುಗಡೆ :: ಪತ್ರಕರ್ತರ ಸಂಕ್ರಾಂತಿ ಸಂಭ್ರಮ ಕ್ರಿಕೆಟ್ ಪಂದ್ಯಾವಳಿಯ ಆಹ್ವಾನ ಪತ್ರಿಕೆಯನ್ನು ಇದೇ ಸಂದರ್ಭ ಅನಾವರಣಗೊಳಿಸಲಾಯಿತು. ಕೊಡಗು ಪತ್ರ್ರಕರ್ತರ ಸಂಘದ ಅಧ್ಯಕ್ಷರಾದ ಅನಿಲ್ ಎಚ್.ಟಿ. ಮಾತನಾಡಿ, ಕೊಡಗು ಪತ್ರಕರ್ತರ ಸಂಘದ ಅಸ್ತಿತ್ವಕ್ಕೆ ಬಂದ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ತನ್ನ ಧ್ಯೇಯ ವಾಕ್ಯವಾದ ‘ಸ್ವಾಸ್ಥ್ಯ-ಸುಂದರ-ಸದೃಢ ಸಮಾಜ ನಿರ್ಮಾಣ’ಕ್ಕಾಗಿ ಹತ್ತಾರು ಜನಪರವಾದ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬಂದಿದೆ. ಇದೀಗ ಪತ್ರಕರ್ತರ ಹಿತ ಕಾಯುವ ನಿಟ್ಟಿನಲ್ಲಿ ಸಂಕ್ರಾಂತಿ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸುತ್ತಿರುವುದಗಿ ತಿಳಿಸಿದರು. ಸಂಘದ ಗೌರವ ಸಲಹೆಗಾರರಾದ ಟಿ.ಪಿ.ರಮೇಶ್ ಮಾತನಾಡಿ, ಸದಸ್ಯರ ಸಂಕಷ್ಟಗಳಿಗೆ ನೆರವಾಗುವ ನಿಟ್ಟಿನಲ್ಲಿ ಕ್ಷೇಮ ನಿಧಿ ಯಾವತ್ತೂ ಸಂಘಕ್ಕೆ ಪೂರಕವಾದುದು.ಪತ್ರಕರ್ತರು ಕರ್ತವ್ಯದ ಸಂದರ್ಭ ಅನಿರೀಕ್ಷಿತವಾಗಿ ಆರೋಗ್ಯ ಸಮಸ್ಯೆಗಳಿಗೆ ತುತ್ತಾದ ಸಂದರ್ಭ, ಅವರಿಗೆ ಸ್ಪಂದಿಸುವ ಕೆಲಸ ಸಂಘದಿಂದ ಯಾವತ್ತೂ ನಡೆಯಬೇಕಾಗಿದೆ. ಈ ನಿಟ್ಟಿನಲ್ಲಿ ಕ್ಷೇಮ ನಿಧಿ ಸಂಘ್ರಹ ಅತ್ಯಂತ ಮಹತ್ವದ್ದೆಂದು ತಿಳಿಸಿದರು. :: ಕ್ಷೇಮ ನಿಧಿಗೆ 50 ಲಕ್ಷ ರೂ. ನೀಡಲು ಸರ್ಕಾರ ಮುಂದಾಗಲಿ :: ಸಂಘದ ಗೌರವ ಸಲಹೆಗಾರರಾದ ಬಿ.ಜಿ.ಅನಂತಶಯನ ಅವರು ಮಾತನಾಡಿ, ಗುಪ್ತಗಾಮಿನಿಯಂತೆ ಸದಾ ಸಮಾಜಮುಖಿಯಾಗಿ ಕಾರ್ಯನಿರ್ವಹಿಸುವ ಪತ್ರಕರ್ತರ ಕೆಲಸ ಯಾವತ್ತೂ ಹೊರ ಜಗತ್ತಿಗೆ ಕಾಣಿಸುವುದೇ ಇಲ್ಲ. ಈ ಹಿನ್ನೆಲೆ ಸರ್ಕಾರವು ಪತ್ರಕರ್ತರಿಗೆ ಅಗತ್ಯ ಸೌಲಭ್ಯಗಳನ್ನು ನೀಡಲು ಮುಂದಾಗುವುದಿಲ್ಲ. ಇನ್ನಾದರು ಕೊಡಗಿನಲ್ಲಿ ಅಧಿಕೃತವಾಗಿ ನೋಂದಾಯಿತವಾದ ‘ಕೊಡಗು ಪತ್ರಕರ್ತರ ಸಂಘ’ಕ್ಕೆ 50 ಲಕ್ಷದ ದೊಡ್ಡ ಮೊತ್ತವನ್ನು ಮುಖ್ಯ ಮಂತ್ರಿಗಳ ಮೂಲಕ ಒದಗಿಸಲು ಸ್ಥಳೀಯ ಜನಪ್ರತಿನಿಧಿಗಳು ಮುಂದಾಗುವಂತೆ ಮನವಿ ಮಾಡಿದರು. ಗೋಷ್ಠಿಯಲ್ಲಿ ಕೊಡಗು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಅರುಣ್ ಕೂರ್ಗ್, ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.