Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬೆಂಗಳೂರು ಹಬ್ಬ ಉದ್ಘಾಟನೆ : ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಬೆಂಗಳೂರು ಹಬ್ಬ ಉದ್ಘಾಟನೆ : ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಜನವರಿ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಜ.17  NEWS DESK :  ಬೆಂಗಳೂರು ಹಬ್ಬದಲ್ಲಿ 30 ಕ್ಕೂ ಹೆಚ್ಚು ಪ್ರದೇಶಗಳಲ್ಲಿ 350 ಕ್ಕೂ ಹೆಚ್ಚು ಕಾರ್ಯಕ್ರಮಗಳು ನಡೆಯಲಿದ್ದು, ಬೆಂಗಳೂರಿನ ನಾಗರಿಕರಿಗೆ ಇದೊಂದು ಸುಸಂದರ್ಭ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗ ಆಯೋಜಿಸಿದ್ದ “ಬೆಂಗಳೂರು ಹಬ್ಬ 2026 ಅನ್ನು ಉದ್ಘಾಟನೆ ಮಾಡಿ, ಜನಪದ ಕಲಾ ತಂಡಗಳ ಮೆರವಣಿಗೆಗೆ ಚಾಲನೆ  ನೀಡಿ ಅವರು ಮಾತನಾಡಿದರು. ಸಾಹಿತ್ಯ, ಕಲೆ, ಸಂಸ್ಕೃತಿಗಳನ್ನು ಬೇರೆ ರಾಜ್ಯದಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಮತ್ತು ಯುವ ಜನಾಂಗಕ್ಕೆ ತಲುಪಿಸುವುದು ಇದರ ಉದ್ದೇಶ. ಎಲ್ಲ ಊರುಗಳಲ್ಲಿ ಹಮ್ಮಿಕೊಳ್ಳುವ ಜಾತ್ರೆ, ಉತ್ಸವಗಳು ಜಾತಿ, ಧರ್ಮಗಳನ್ನು ಮರೆತು ಮನುಷ್ಯರಾಗಬೇಕು ಎನ್ನುವ ಸಂದೇಶವನ್ನು ಸಾರುತ್ತದೆ. ಮನುಷ್ಯರು ಪರಸ್ಪರ ಪ್ರೀತಿಸಬೇಕೆ ಹೊರತು ದ್ವೇಷಿಸಬಾರದು. ಯಾವುದೇ ಧರ್ಮವು ದ್ವೇಷಿಸಲು ಹೇಳುವುದಿಲ್ಲ ಎಂದರು. ಕನ್ನಡ ನಾಡಿನಲ್ಲಿ ಬಸವಣ್ಣ, ಕನಕದಾಸರು, ನಾರಾಯಣಗುರುಗಳು ಸೇರಿದಂತೆ ಅನೇಕರು ಬಾಳಿ ಹೋಗಿದ್ದಾರೆ. ಇವರೆಲ್ಲರೂ ನಾವೆಲ್ಲ ಮನುಷ್ಯರೇ ಎಂದು ಸಾರಿ ಸಾರಿ ಹೇಳಿದವರು. ಬಸವಣ್ಣ ಜಾತಿ, ಧರ್ಮ, ವರ್ಗ, ಕಂದಾಚಾರ, ಮೌಢ್ಯಗಳು ತೊಲಗಬೇಕು ಎಂದು ಕರೆ ನೀಡಿದ್ದರು. ಹುಟ್ಟು ಮತ್ತು ಸಾವು ಇವೆರಡರ ಮಧ್ಯೆ ನಾವೇನು ಮಾಡುತ್ತೇವೆ ಎನ್ನುವುದು ಮುಖ್ಯ. ಏನು ಸಾಧಿಸಿದೆವು, ಸಮಾಜಕ್ಕೆ ಏನು ಬಿಟ್ಟುಹೋಗಿದ್ದೇವೆ ಎನ್ನುವುದು ಮುಖ್ಯ ಎಂದು ಹೇಳಿದರು. ಬೇರೆಯವರು ಅನುಸರಿಸುವ ರೀತಿಯಲ್ಲಿ ನಮ್ಮ ಹೆಜ್ಜೆ ಗುರುತುಗಳು ಇರಬೇಕೇ ಹೊರತು, ಅದನ್ನು ವಿರೋಧಿಸುವಂತಿರಬಾರದು. ಭವ್ಯವಾದ ನಮ್ಮ ಸಂಸ್ಕೃತಿ, ಸಾಹಿತ್ಯ, ಕಲೆಯನ್ನು ನಾವು ಮರೆಯಬಾರದು. ನಾವೆಲ್ಲರೂ ಒಂದೇ ಎಂದು ಬಾಳಬೇಕಿರುವುದು ಅವಶ್ಯ.  ಪದ್ಮಿನಿ ರವಿ ಹಾಗೂ ನಂದಿನಿ ಆಳ್ವ ಅವರು ಪ್ರಾರಂಭಿಸಿದ ಬೆಂಗಳೂರು ಹಬ್ಬವನ್ನು ರವಿಚಂದರ್ ಮತ್ತು ಪ್ರಶಾಂತ್ ಪ್ರಕಾಶ್ ಮುಂದುವರೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದರು. ಕನ್ನಡ ನಾಡಿನವರು ಕನ್ನಡ ಭಾಷೆಯನ್ನು ಕಲಿಯಬೇಕು. ಕನ್ನಡವನ್ನು ವ್ಯಾವಹಾರಿಕ ಭಾಷೆಯನ್ನಾಗಿಸಬೇಕು ಹಾಗೂ ಕನ್ನಡದ ವಾತಾವರಣ ನಿರ್ಮಾಣ ಮಾಡುವುದು ಕನ್ನಡಿಗರ ಜವಾಬ್ದಾರಿ. ಯಾವುದೇ ರಾಜ್ಯದಿಂದ ಜನ ವಾಸಿಸಲು ಬಂದರೂ ಕನ್ನಡ ಕಲಿತು ಕನ್ನಡಿಗರಾಗಿ ಬಾಳಬೇಕು. ಕನ್ನಡ ನಮ್ಮ ಮಾತೃಭಾಷೆಯಾಗಿದ್ದು, ಕನ್ನಡತನವನ್ನು ಬೆಳೆಸೋಣ. ಬೆಂಗಳೂರು ಹಬ್ಬ ಎಲ್ಲರನ್ನೂ ಒಂದುಗೂಡಿಸಲಿ ಎಂದು ಹಾರೈಸುತ್ತೇನೆ. ಬೆಂಗಳೂರಿನಲ್ಲಿ 1.40 ಕೋಟಿ ಜನ ನೆಲೆಸಿದ್ದಾರೆ. ನಾವೆಲ್ಲರೂ ಒಂದಾಗಿ ಬಾಳೋಣ, ಮನುಷ್ಯರಾಗೋಣ ಎಂದು ಕರೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿಧಾನಸಭೆ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ಚಲನಚಿತ್ರ ನಟ ಶಿವರಾಜ್ ಕುಮಾರ್, ಹಿರಿಯ ನಟಿ ಜಯಮಾಲಾ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ, ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯರು ಆದ ಕೆ.ಗೋವಿಂದರಾಜು ಸೇರಿದಂತೆ ನಾಡಿನ ಹಲವು ಗಣ್ಯರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.