Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*
  • *ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*
  • ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ
  • *ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*
  • *ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*
  • *ಕಸ್ತೂರಿ ರಂಗನ್ ವರದಿ : ರಾಜ್ಯ ಸರಕಾರ ರಾಜಕೀಯ ಮಾಡುವುದನ್ನು ಮೊದಲು ನಿಲ್ಲಿಸಲಿ : ಚೆಪ್ಪುಡಿರ ರಾಕೇಶ್ ದೇವಯ್ಯ ಒತ್ತಾಯ*
  • *ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*
  • *ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*
  • *ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*
  • *ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಮ್ಮಾಬಾಣೆ ಸಮಸ್ಯೆ : ಉಚ್ಚ ನ್ಯಾಯಾಲಯದ ತೀರ್ಪನ್ನು ಅನುಷ್ಠಾನಗೊಳಿಸಲು ಕೊಡಗು ಬಿಜೆಪಿ ಆಗ್ರಹ : ಸವಾಲನ್ನು ವಿನಯದಿಂದ ಸ್ವೀಕರಿಸುವುದಾಗಿ ಹೇಳಿದ ಮಾಜಿ ಶಾಸಕರು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಮ್ಮಾಬಾಣೆ ಸಮಸ್ಯೆ : ಉಚ್ಚ ನ್ಯಾಯಾಲಯದ ತೀರ್ಪನ್ನು ಅನುಷ್ಠಾನಗೊಳಿಸಲು ಕೊಡಗು ಬಿಜೆಪಿ ಆಗ್ರಹ : ಸವಾಲನ್ನು ವಿನಯದಿಂದ ಸ್ವೀಕರಿಸುವುದಾಗಿ ಹೇಳಿದ ಮಾಜಿ ಶಾಸಕರು*

ಜನವರಿ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.17 NEWS DESK : ಕೊಡಗಿನ ಜಮ್ಮಾಬಾಣೆಯ ಸಮಸ್ಯೆಯನ್ನು ಬಗೆಹರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ಉಚ್ಚ ನ್ಯಾಯಾಲಯವು ನೀಡಿದ ತೀರ್ಪನ್ನು ತಕ್ಷಣ ಅನುಷ್ಠಾನಗೊಳಿಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಆಗ್ರಹಿಸಿದೆ. ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದ ಬಿಜೆಪಿಯ ಪ್ರಮುಖರು, ನ್ಯಾಯಾಲಯ ತೀರ್ಪಿನಲ್ಲಿ ಆದೇಶಿಸಿರುವಂತೆ ಕ್ರಮ ಕೈಗೊಳ್ಳಬೇಕು, ತಪ್ಪಿದಲ್ಲಿ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸುದಾಗಿ ಎಚ್ಚರಿಕೆ ನೀಡಿದರು. 2011 ರಲ್ಲಿ ಅಂದಿನ ಬಿಜೆಪಿ ಸರಕಾರವು ಕೊಡಗಿನ ಜ್ವಲಂತ ಸಮಸ್ಯೆಯಾದ ಜಮ್ಮಾ ಬಾಣೆಯ ಸಮಸ್ಯೆಯನ್ನು ಬಗೆಹರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ನಿಯಮ 2(20) ಮತ್ತು ನಿಯಮ 80ಕ್ಕೆ ತಿದ್ದುಪಡಿ ತಂದಿದ್ದು, ಇದು ರಾಜ್ಯ ಸರಕಾರದ ಪತ್ರದಲ್ಲಿ ಪ್ರಕಟಣೆಗೊಂಡಿದೆ. ಇದನ್ನು ಪ್ರಶ್ನಿಸಿ ಕೆಲವರು ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ರಿಟ್ ಅರ್ಜಿಗಳ ಬಗ್ಗೆ ಸುದೀರ್ಘವಾದ ವಾದ ವಿವಾದಗಳು ನಡೆದು ಉಚ್ಚ ನ್ಯಾಯಾಲಯವು ಜುಲೈ 2024 ರಲ್ಲಿ ಸುದೀರ್ಘವಾದ ತೀರ್ಪನ್ನು ನೀಡಿ ರಿಟ್ ಪಿಟಿಷನ್ ಅನ್ನು ವಜಾಗೊಳಿಸಿದೆ. ಅಲ್ಲದೆ ಕರ್ನಾಟಕ ಭೂ ಕಂದಾಯ ಕಾಯ್ದೆಗೆ 2011ರಲ್ಲಿ ತಂದ ತಿದ್ದುಪಡಿಯು ಸಂವಿಧಾನಾತ್ಮಕವಾಗಿಯೇ ಇದೆ ಮತ್ತು ತಿದ್ದುಪಡಿಯನ್ನು ಜಿಲ್ಲಾಡಳಿತ, ಕಂದಾಯ ಇಲಾಖೆ ಈ ತೀರ್ಪಿನ ಪ್ರತಿ ಸಿಕ್ಕಿದ 30 ದಿನಗೊಳಗಾಗಿ ಅನುಷ್ಠಾನ ಮಾಡಬೇಕು ಎಂದು ಆದೇಶಿಸಿದೆ. ಆದರೆ ತೀರ್ಪು ಪ್ರಕಟವಾಗಿ ಒಂದೂವರೆ ವರ್ಷ ಕಳೆದರೂ ಜಿಲ್ಲಾಡಳಿತ ಮತ್ತು ಕಂದಾಯ ಇಲಾಖೆ ಈ ತಿದ್ದುಪಡಿಯನ್ನು ಜಾರಿಗೆ ತರಲು ಕ್ರಮ ಕೈಗೊಂಡಿಲ್ಲ. ಇದು ನ್ಯಾಯಾಲಯದ ಆದೇಶ ಉಲ್ಲಂಘನೆ ಮತ್ತು ನಿಂದನೆಯಾಗಿದೆ ಎಂದು ಬಿಜೆಪಿ ಮುಖಂಡರು ಮನವಿ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
*ಸವಾಲು ಸ್ವೀಕಾರ* ಮಾಜಿ ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ನ್ಯಾಯಾಲಯ ನೀಡಿದ ತೀರ್ಪನ್ನು ಅನುಷ್ಠಾನಗೊಳಿಸದ ಕಾಂಗ್ರೆಸ್ ಸರಕಾರ ಇದೀಗ ಸಮಿತಿಯನ್ನು ರಚಿಸಿ ಕಾಯ್ದೆಗೆ ತಿದ್ದುಪಡಿ ತಂದಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ಜಮ್ಮಾಬಾಣೆ ಸಮಸ್ಯೆ ಕುರಿತು ಚರ್ಚೆಗೆ ಬನ್ನಿ ಎಂದು ಶಾಸಕರು ಸವಾಲು ಹಾಕಿರುವುದನ್ನು ಅತ್ಯಂತ ವಿನಯದಿಂದ ಸ್ವೀಕರಿಸುತ್ತೇವೆ, ಅವರು ಚರ್ಚೆಗೆ ವೇದಿಕೆ ಸಿದ್ದಪಡಿಸಲಿ ಎಂದರು. ಮನವಿ ಸಲ್ಲಿಸುವ ಸಂದರ್ಭ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ.ಲೋಕೇಶ್, ಉಪಾಧ್ಯಕ್ಷ ಮನು ಮಂಜುನಾಥ್, ವಕ್ತಾರ ಬಿ.ಕೆ.ಅರುಣ್ ಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ನಗರಸಭೆ ಸದಸ್ಯ ಅರುಣ್ ಶೆಟ್ಟಿ, ಪ್ರಮುಖರಾದ ಕನ್ನಿಕೆ ಮತ್ತಿತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿರಾಜಪೇಟೆಯ ಶಿವಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವರಮಹಾಲಕ್ಷ್ಮಿ ಪೂಜಾ ಮಹೋತ್ಸವ*

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ಕಾನೂನು ಸುವ್ಯವಸ್ಥೆ ನಿರ್ವಹಣೆಯಲ್ಲಿ ಉತ್ತಮ ಕರ್ತವ್ಯ : ಆರು ಪೊಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ ಆ.28 NEWS DESK : ಕೊಡಗು ಜಿಲ್ಲೆಯಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿದ ಮೂವರು…

ಗೋಣಿಕೊಪ್ಪ ದಸರಾಕ್ಕೆ ₹1 ಕೋಟಿ ಅನುದಾನ : ದಶಮಂಟಪಗಳಿಗೆ ಹೆಚ್ಚಿನ ನೆರವಿನ ಭರವಸೆ

ಆಗಷ್ಟ್ 28, 2026

*ವಿರಾಜಪೇಟೆ ಬಿಲ್ಲವ ಸೇವಾ ಸಂಘದಿಂದ ನಾರಾಯಣ ಗುರು ಜಯಂತಿ*

ಆಗಷ್ಟ್ 28, 2026

*ಮಾನವ ವನ್ಯಜೀವಿ ಸಂಘರ್ಷ : ಸಾರ್ವಜನಿಕರ ಜತೆ ಸಮಾಲೋಚಿಸಿದ ಅರಣ್ಯ ಸಚಿವರು*

ಆಗಷ್ಟ್ 28, 2026

*ಮಡಿಕೇರಿಯಲ್ಲಿ ಬ್ರಹ್ಮರ್ಷಿ ಶ್ರೀ ನಾರಾಯಣ ಗುರು ಮತ್ತು ಕಾಯಕಯೋಗಿ ಶಿವಶರಣ ನುಲಿಯ ಚಂದಯ್ಯ ಜಯಂತಿ*

ಆಗಷ್ಟ್ 28, 2026

*ಶಾಸಕ ಪೊನ್ನಣ್ಣ ಅವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಸನ್ಮಾನ*

ಆಗಷ್ಟ್ 28, 2026

*ಪೇಟೆ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ : ಮಡಿಕೇರಿ ದಸರಾ ಜನೋತ್ಸವದ ಪೂರ್ವಭಾವಿ ತಯಾರಿ ಆರಂಭ*

ಆಗಷ್ಟ್ 28, 2026

*ಕಸ್ತೂರಿ ರಂಗನ್ ವರದಿಯನ್ನು ಸಂಪೂರ್ಣವಾಗಿ ನಿರಾಕರಿಸಿರುವುದು ಸರಿಯಲ್ಲ : ಕರ್ನಲ್ ಸಿ.ಪಿ.ಮುತ್ತಣ್ಣ*

ಆಗಷ್ಟ್ 28, 2026

*ಆ.29ರಂದು ಕೊಡಗು ಜಿಲ್ಲಾ ಮಟ್ಟದ ಎಸ್‌ಸಿ/ಎಸ್‌ಟಿ ಕುಂದುಕೊರತೆ ಸಭೆ*

ಆಗಷ್ಟ್ 28, 2026

*ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸರ್ಕಾರಿ ವಲಯ, ನಾಗರಿಕ ಸೇವೆಗಳಲ್ಲಿ ವೃತ್ತಿ ಅವಕಾಶಗಳ ಕುರಿತು ಕಾರ್ಯಾಗಾರ : ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗಳನ್ನು ಗುರುತಿಸಿಕೊಂಡು ಭವಿಷ್ಯವನ್ನು ರೂಪಿಸಿಕೊಳ್ಳಲು ಮೇಜರ್ ಪ್ರೊ. ರಾಘವ ಬಿ. ಕರೆ *

ಆಗಷ್ಟ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.