Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಜಿಲ್ಲಾ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘದ ಮಹಾಸಭೆ : ದೈವ ನಿಂದನೆ ವಿರುದ್ಧ ಕ್ರಮಕ್ಕೆ ಒತ್ತಾಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ಜಿಲ್ಲಾ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘದ ಮಹಾಸಭೆ : ದೈವ ನಿಂದನೆ ವಿರುದ್ಧ ಕ್ರಮಕ್ಕೆ ಒತ್ತಾಯ

ಜನವರಿ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.17 NEWS DESK : ದೈವ ನಿಂದನೆ, ಅವಮಾನ, ಅಪಹಾಸ್ಯ, ಕಾರ್ಯಕ್ರಮಗಳಲ್ಲಿ ದೈವ ನರ್ತನಗಳ ಬಳಕೆಯನ್ನು ತೀವ್ರವಾಗಿ ವಿರೋಧಿಸಲಾಗುವುದು ಮತ್ತು ಇದರ ವಿರುದ್ಧ ಸರಕಾರದ ಮಟ್ಟದಲ್ಲಿ ಕ್ರಮಕ್ಕಾಗಿ ಒತ್ತಾಯಿಸಲಾಗುವುದು ಎಂದು ಕೊಡಗು ಜಿಲ್ಲಾ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘದ ಮಹಾಸಭೆ ನಿರ್ಣಯ ಕೈಗೊಂಡಿದೆ. ಮಡಿಕೇರಿಯ ಬಾಲಭವನದ ಸಭಾಂಗಣದಲ್ಲಿ ನಡೆದ ಮಹಾಸಭೆಯಲ್ಲಿ ಪಾಲ್ಗೊಂಡ ದೈವ ಆರಾಧಕರು ಹಾಗೂ ದೈವ ನರ್ತಕರು ಇತ್ತೀಚಿನ ದಿನಗಳಲ್ಲಿ ತಮ್ಮ ಭಾವನೆಗೆ ದಕ್ಕೆಯಾಗುತ್ತಿರುವುದನ್ನು ಪ್ರಸ್ತಾಪಿಸಿ ಬೇಸರ ವ್ಯಕ್ತಪಡಿಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘದ ಜಿಲ್ಲಾಧ್ಯಕ್ಷ ಸದಾಶಿವ ರೈ ಅವರು ದೈವಾರಾಧನೆಯ ಆಚಾರ, ವಿಚಾರವನ್ನು ಕ್ರಮಬದ್ಧವಾಗಿ ಮಾಡುವಂತಾಗಬೇಕು. ಮುಂದಿನ ದಿನಗಳಲ್ಲಿ ಶಾಲಾ, ಕಾಲೇಜು ಹಾಗೂ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ದೈವ ನರ್ತನ ಬಳಕೆಯಾಗದಂತೆ ಮತ್ತು ದೈವವನ್ನು ಅನುಕರಣೆ ಮಾಡದಂತೆ ನೋಡಿಕೊಳ್ಳಬೇಕು. ಎಂದರು. ಇತ್ತೀಚಿನ ವರ್ಷಗಳಲ್ಲಿ ಹೆಚ್ಚಾಗಿ ದೈವ ನರ್ತನದ ಕಾರ್ಯಕ್ರಮಗಳೇ ನಡೆಯುತ್ತಿದ್ದು, ದೈವಕ್ಕೆ ಅಪಹಾಸ್ಯ ಮಾಡಿದಂತಾಗುತ್ತಿದೆ. ಅಲ್ಲದೆ ದೈವ ಆರಾಧಾಕರ ಭಾವನೆಗೆ ದಕ್ಕೆಯಾಗುತ್ತಿದೆ. ಆದ್ದರಿಂದ ಸರಕಾರದ ಮಟ್ಟದಲ್ಲಿ ಈ ವಿಚಾರವನ್ನು ಪಸ್ತಾಪಿಸಿ ದೈವ ನಂಬಿಕೆಗೆ ವಿರುದ್ಧವಾದ ಕಾರ್ಯಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು. ಕೊಡಗು ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ದೈವಸ್ಥಾನಗಳಿದ್ದು, ದೈವ ಆರಾಧಕರುಗಳು ಸಂಘದ ಸದಸ್ಯತ್ವವನ್ನು ಪಡೆದುಕೊಳ್ಳುವಂತೆ ಸದಾಶಿವ ರೈ ಮನವಿ ಮಾಡಿದರು. ಸಂಘದ ಸ್ಥಾಪಕಾಧ್ಯಕ್ಷ ಪಿ.ಎಂ.ರವಿ ಅವರು ಮಾತನಾಡಿ ನಮ್ಮ ಹಿರಿಯರು ಹಾಕಿ ಕೊಟ್ಟಿರುವ ಮೂಲ ನಂಬಿಕೆ, ಮೂಲ ಆಧಾರ ಮತ್ತು ಮೂಲ ಪದ್ಧತಿಯೇ ದೈವಾರಾಧನೆಯಾಗಿದೆ. ದೈವ ಆರಾಧನೆ ಪ್ರದರ್ಶನದ ಕಲೆಯಲ್ಲ ಮತ್ತು ಪ್ರಚಾರದ ಆಚರಣೆಯೂ ಅಲ್ಲ. ದೈವಾರಾಧನೆ ಉಳಿಯಬೇಕಾದರೆ ದೈವದ ಮೇಲೆ ನಂಬಿಕೆ ಗಟ್ಟಿಯಾಗಬೇಕಾಗಿದೆ ಎಂದರು. ದೈವಾರಾಧನೆಗೆ ಚ್ಯುತಿ ಬಾರದಂತೆ ಕ್ರಮಬದ್ಧವಾಗಿ ನಡೆಸುವಂತಾಗಬೇಕು, ಸಂಘದ ಮೂಲಕ ದೈವ ಸಂಸ್ಕøತಿಗೆ ಪೂರಕವಾದ ಕಾರ್ಯಚಟುವಟಿಕೆಗಳನ್ನು ರೂಪಿಸಬೇಕು, ದೈವಾರಾಧನೆಗೆ ಸಂಬಂಧಪಟ್ಟ ಪದ್ಧತಿ, ಪರಂಪರೆಯನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಪ್ರಸಿದ್ಧ ದೈವ ನರ್ತಕ ಬೊಳಿಮಜಲು ಜಯರಾಮ್ ಅವರು ಮಾತನಾಡಿ ದೈವಾರಾಧನೆ ಒಂದೊಂದು ಭಾಗದಲ್ಲಿ ಒಂದೊಂದು ರೀತಿಯಲ್ಲಿದ್ದು, ನಮ್ಮ ಹಿರಿಯರು ಹೇಳಿಕೊಟ್ಟಿರುವ ಪದ್ಧತಿಯನ್ನು ಮುಂದುವರೆಸಿಕೊಂಡು ಬಂದಿದ್ದೇವೆ. ಎಂದರು. ಎಲ್ಲಾ ದೈವ ನರ್ತಕರು ಕೊಡಗು ಜಿಲ್ಲಾ ಸಂಘದೊಂದಿಗೆ ಉತ್ತಮ ಸಂಪರ್ಕವನ್ನು ಇಟ್ಟುಕೊಳ್ಳಬೇಕೆಂದು ತಿಳಿಸಿದರು. ಪ್ರಮುಖರಾದ ಪವನ್ ಮೊಗೇರ, ಮಂಜುನಾಥ್ ಪೂಜಾರಿ, ಮಂಜುನಾಥ ಕತ್ತಲೆಕಾಡು, ರಾಜೀವ ಲೋಚನ್, ಹರೀಶ್ ಜಿ.ಆಚಾರ್ಯ, ಧರ್ಮಪ್ಪ ಅಡ್ಡಾನಪರೆ ಮತ್ತಿತರರು ಮಾತನಾಡಿ ಸಲಹೆಗಳನ್ನು ನೀಡಿದರು. ಸಂಘದ ಹಿರಿಯ ಸಲಹೆಗಾರರಾದ ಕೆ.ಕೆ.ದೇವಪ್ಪ, ವಿದ್ಯಾಶ್ರೀ ಪಡುಮಲೆ, ಹಿರಿಯ ಸದಸ್ಯ ರಾಜು ರೈ ಸುಂಟ್ಟಿಕೊಪ್ಪ, ಖಜಾಂಚಿ ಜನಾರ್ಧನ ಪೂಜಾರಿ, ದೈವ ಆರಾಧಕಿ ಸುಮ ಕೆದಮೂಳ್ಳುರು, ಲೀಲಾ ಶೇಷಮ್ಮ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾಶ್ರೀ ಪಡುಮಲೆ ನಿರೂಪಿಸಿದರು, ಪ್ರಧಾನ ಕಾರ್ಯದರ್ಶಿ ಪಿ.ಕೆ.ದಿನೇಶ್ ಪ್ರಾರ್ಥಿಸಿ, ವರದಿ ವಾಚಿಸಿದರು. ಸಹ ಕಾರ್ಯದರ್ಶಿ ದಿವೇಶ್ ರೈ ಸ್ವಾಗತಿಸಿ, ವಂದಿಸಿದರು. ಸುಳ್ಯ, ಸುಬ್ರಹ್ಮಣ್ಯ, ಹುಣಸೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳ ದೈವ ಆರಾಧಕರು ಹಾಗೂ ದೈವ ನರ್ತಕರು ಮಹಾಸಭೆಯಲ್ಲಿ ಪಾಲ್ಗೊಂಡಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ಪೂಜಾರಿರ ಮೊಣ್ಣಪ್ಪ ಅರೆಭಾಷಿಕ ಯುವ ಜನಾಂಗಕ್ಕೆ ಮಾದರಿ : ಡಾ.ಕಾವೇರಿಮನೆ ಬೋಜಪ್ಪ

ಅಕ್ಟೋಬರ್ 12, 2026

ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ

ಅಕ್ಟೋಬರ್ 12, 2026

ಮಡಿಕೇರಿಯಲ್ಲಿ ಅ.19 ರಂದು ಮಹಿಳಾ ದಸರಾ : ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 12, 2026

ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ

ಅಕ್ಟೋಬರ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಅ.12 NEWS DESK : ಪತ್ರಕರ್ತರ ನಡುವೆ ಬಾಂಧವ್ಯ ವೃದ್ಧಿಸಿ, ಸಂಘಟನಾತ್ಮಕವಾಗಿ ಬಲವರ್ಧನೆಗೊಳ್ಳಲು ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ಮಡಿಕೇರಿ…

ಮಡಿಕೇರಿಯಲ್ಲಿ ಅ.19 ರಂದು ಮಹಿಳಾ ದಸರಾ : ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 12, 2026

ಬೇಂಗ್ ನಾಡ್ ಕೊಡವ ಸಮಾಜದಲ್ಲಿ ಕೈಲ್ ಪೋದ್ ಒತ್ತೋರ್ಮೆ ಕೂಟ; ಕೊಡವ ಸಂಸ್ಕೃತಿ, ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು: ಚಿರಿಯಪಂಡ ಸುರೇಶ್ ನಂಜಪ್ಪ

ಅಕ್ಟೋಬರ್ 12, 2026

ಸುಂಟಿಕೊಪ್ಪದಲ್ಲಿ ಅ.20ರಂದು 56ನೇ ವರ್ಷದ ಆಯುಧಪೂಜಾ ಸಮಾರಂಭ

ಅಕ್ಟೋಬರ್ 12, 2026

ಸುಂಟಿಕೊಪ್ಪದಲ್ಲಿ ಅ.15ರಂದು 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 12, 2026

ಕಂಬಿಬಾಣೆಯಲ್ಲಿ 71ನೇ ವರ್ಷದ ನವರಾತ್ರಿ ಉತ್ಸವಕ್ಕೆ ಚಾಲನೆ: ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

ಅಕ್ಟೋಬರ್ 12, 2026

ಮಡಿಕೇರಿ ದಸರಾದಲ್ಲಿ ಕಾಫಿ ಘಮ: 54 ಮಳಿಗೆಗಳಲ್ಲಿ ಕಾಫಿ ಲೋಕ ಅನಾವರಣ

ಅಕ್ಟೋಬರ್ 12, 2026

ವಿರಾಜಪೇಟೆ ಕಾವೇರಿ ಕಾಲೇಜಿನ ಬಾಲಕರ ತಂಡಕ್ಕೆ ರನ್ನರ್ಸ್ ಟ್ರೋಫಿ

ಅಕ್ಟೋಬರ್ 12, 2026

ಎಸ್‌ಐಆರ್ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆ

ಅಕ್ಟೋಬರ್ 12, 2026

ಬೆಂಗಳೂರಿನಿಂದ ಮೈಸೂರಿಗೆ ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆ

ಅಕ್ಟೋಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.