
ಮಡಿಕೇರಿ ಜ.19 NEWS DESK : ವಿರಾಜಪೇಟೆ ಪುರಸಭಾ ವ್ಯಾಪ್ತಿಯ ವಿದ್ಯಾನಗರದಲ್ಲಿ 15ಲಕ್ಷ ವೆಚ್ಚದಲ್ಲಿ ಪೂರ್ಣಗೊಂಡ ನೂತನ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಉದ್ಘಾಟಿಸಿದರು. ಈ ಹಿಂದೆ ವಿದ್ಯಾನಗರದ ನಿವಾಸಿಗಳ ಬೇಡಿಕೆಗೆ ಸ್ಪಂದಿಸಿದ ಶಾಸಕರು, ತಮ್ಮ ಅನುದಾನದಲ್ಲಿ ಈ ಭಾಗದಲ್ಲಿ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲು ಸೂಚನೆ ನೀಡಿದ್ದರು. ಅದರಂತೆ ಈಗ ಕಾಮಗಾರಿ ಮುಕ್ತಾಯಗೊಂಡ ಬಳಿಕ ಸಾರ್ವಜನಿಕರ ಉಪಯೋಗಕ್ಕೆ ರಸ್ತೆಯನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಬಗರ್ ಹುಕುಂ ತಾಲೂಕು ಅಧ್ಯಕ್ಷರು ಸಲಾಂ, ಪುರಸಭೆ ಮಾಜಿ ಉಪಾಧ್ಯಕ್ಷರು ಫಸಿಯಾ ತಬ್ಸುಂ, ವಿರಾಜಪೇಟೆ ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರು ಮತೀನ್, ಪುರಸಭೆ ಮಾಜಿ ಸದಸ್ಯರು ರಾಫಿ, ಅತಿಫ್ ಮನ್ನ, ಸ್ಥಾಯಿ ಸಮಿತಿಯ ಅಧ್ಯಕ್ಷರು ಜಲಿಲ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರು ಹನೀಫ್, ತಾಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು ರಫೀಕ್, ಪಕ್ಷದ ಮುಖಂಡರು ಮೊಯಿದು, ಜಾಫರ್, ಜೋಕಿಮ್, ಚೆಕು, ಮಂಜು ಕುಂಡಚ್ಚಿರ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರು ಅಯೂಬ್, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.









