Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಾರ್ವಜನಿಕರಿಗೆ ಹಾಗೂ ಆಟೋ ಚಾಲಕರಿಗೆ ಆಟೋಟ ಸ್ಪರ್ಧೆ ಮತ್ತು ಡ್ಯಾನ್ಸ್ ಮೇಳ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಾರ್ವಜನಿಕರಿಗೆ ಹಾಗೂ ಆಟೋ ಚಾಲಕರಿಗೆ ಆಟೋಟ ಸ್ಪರ್ಧೆ ಮತ್ತು ಡ್ಯಾನ್ಸ್ ಮೇಳ*

ಜನವರಿ 19, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.19 NEWS DESK : ಆಟೋ ಮಾಲೀಕ ಚಾಲಕರ ಸಂಘದ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಸಂಘದ ಸದಸ್ಯರಿಗೆ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಏ.5ರಿಂದ 7ರವರೆಗೆ ನಗರದಲ್ಲಿ ಆಯೋಜಿಸಲಾಗಿದ್ದು, ಏ.12ರಂದು ಸಾರ್ವಜನಿಕರಿಗೆ ಹಾಗೂ ಆಟೋ ಚಾಲಕರಿಗೆ ಆಟೋಟ ಸ್ಪರ್ಧೆ ಮತ್ತು ಡ್ಯಾನ್ಸ್ ಮೇಳವನ್ನು ಆಯೋಜಿಸಲಾಗಿದೆಯೆಂದು ಸಂಘದ ಜಿಲ್ಲಾಧ್ಯಕ್ಷ ಡಿ.ಹೆಚ್. ಮೇದಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿ ಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲಾ ವ್ಯಾಪ್ತಿಯಲ್ಲಿ ಆಟೋ ಮಾಲೀಕ ಚಾಲಕರ ಸಂಘದೊಂದಿಗೆ ನೋಂದಾಯಿಸಿಕೊಂಡ 37 ಸ್ಥಾನೀಯ ಸಮಿತಿಗಳಿವೆ. ಈ ಸಮಿತಿಗಳಲ್ಲಿ ಸದಸ್ಯರಾಗಿರುವ ಆಟೋ ಚಾಲಕರಿಗಾಗಿ ಏ.5ರಿಂದ ಮೂರು ದಿನಗಳ ಕಾಲ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆಯೆಂದು ತಿಳಿಸಿದರು. ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ 25 ರಿಂದ 30 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿಚ್ಛಿಸುವ ತಂಡಗಳಿಗೆ 5ಸಾವಿರ ರೂ. ಮೈದಾನ ಶುಲ್ಕವನ್ನು ನಿಗದಿಪಡಿಸಲಾಗಿದೆ. ಆಸಕ್ತ ತಂಡಗಳು ಮಾ.25ರ ಒಳಗಾಗಿ ತಮ್ಮ ತಂಡದ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ತಂಡಗಳಿಗೆ ಜೆರ್ಸಿಯನ್ನು ಕಡ್ಡಾಯಗೊಳಿಸಿರುವುದಾಗಿ ಮಾಹಿತಿ ನೀಡಿದರು. ಪಂದ್ಯಾವಳಿ ವಿಜೇತ ತಂಡಕ್ಕೆ 30 ಸಾವಿರ ರೂ. ನಗದು ಬಹುಮಾನ ಮತ್ತು ರನ್ನರ್ಸ್ ಅಪ್ ತಂಡಕ್ಕೆ 20 ಸಾವಿರ ನಗದು ಬಹುಮಾನವನ್ನು ನೀಡಲಾಗುತ್ತದೆಂದು ತಿಳಿಸಿದರು. :: ಡ್ಯಾನ್ಸ್ ಮೇಳ-ಆಟೋಟ ಸ್ಪರ್ಧೆ :: ಏ.12ರಂದು ನಗರದ ಗಾಂಧಿ ಮೈದಾನದಲ್ಲಿ ಮಹಿಳೆಯರು, ಮಕ್ಕಳು, ಸಾರ್ವಜನಿಕರು ಹಾಗೂ ಆಟೋ ಚಾಲಕರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅಂದು ಸಂಜೆ 6 ಗಂಟೆಯ ನಂತರ ‘ಡ್ಯಾನ್ಸ್ ಮೇಳ’ವನ್ನು ಆಯೋಜಿಸಲಾಗಿದೆ. ಇದರಲ್ಲಿ 5 ರಿಂದ 6 ಮಂದಿಯನ್ನು ಒಳಗೊಂಡ ತಂಡಗಳು ಇಲ್ಲವೆ ವೈಯಕ್ತಿಕವಾಗಿಯೂ ಪಾಲ್ಗೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ.ಈ ಡ್ಯಾನ್ಸ್ ಮೇಳ ಸಾರ್ವಜನಿಕರಿಗೆ ಮುಕ್ತವಾಗಿದೆ. ಆಸಕ್ತರು ಏ.5ರ ಒಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು. :: ದೇಣಿಗೆ ಪುಸ್ತಕ ಬಿಡುಗಡೆ :: ಸಂಘದಿಂದ ಆಯೋಜಿಸುವ ಕಾರ್ಯಕ್ರಮಕ್ಕೆ ದೇಣಿಗೆ ಸಂಗ್ರಹಿಸುವ ನಿಟ್ಟಿನಲ್ಲಿ ದೇಣಿಗೆ ಪುಸ್ತಕದ ಉದ್ಘಾಟನಾ ಕಾರ್ಯಕ್ರಮವನ್ನು ಜ.20 ರಂದು ನಗರದ ಬಾಲ ಭವನದಲ್ಲಿ ಬೆ.11 ಗಂಟೆಗೆ ಆಯೋಜಿಸಲಾಗಿದೆಯೆಂದು ಡಿ.ಹೆಚ್.ಮೇದಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಆಟೋ ಮಾಲೀಕ ಚಾಲಕರ ಸಂಘದ ಮಡಿಕೇರಿ ನಗರಾಧ್ಯಕ್ಷ ಎ.ಸಮ್ಮದ್, ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಬಾರನ, ಖಜಾಂಚಿ ಹೆಚ್.ಎಸ್.ನಾಗರಾಜು, ಸಂಘಟನಾ ಕಾರ್ಯದರ್ಶಿಗಳಾದ ಪ್ರವೀಣ್ ಮುದ್ದಿಯನ ಮತ್ತು ಕೆ.ಕೆ.ಸುಕುಮಾರ್ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.