Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ನಾನು ಮತ್ತು ಪರೀಕ್ಷೆ ಕಾರ್ಯಾಗಾರ : ಆತ್ಮಸ್ಥೈರ್ಯ ಇದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯ : ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ಸಲಹೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ನಾನು ಮತ್ತು ಪರೀಕ್ಷೆ ಕಾರ್ಯಾಗಾರ : ಆತ್ಮಸ್ಥೈರ್ಯ ಇದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯ : ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ಸಲಹೆ

ಜನವರಿ 19, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.19 NEWS DESK : ಆತ್ಮಸ್ಥೈರ್ಯ ಇದ್ದರೆ ಮಾತ್ರ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೈಕೋರ್ಟಿನ ಹಿರಿಯ ವಕೀಲ ಹೆಚ್.ಎಸ್.ಚಂದ್ರಮೌಳಿ ಅವರು ಹೇಳಿದರು. ಶನಿವಾರಸಂತೆ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ಅಂಕನಹಳ್ಳಿ ತಪೋವನ ಕ್ಷೇತ್ರ ಮನೆಹಳ್ಳಿ ಮಠದ ಅನಘ ಪೌಂಡೇಶನ್ ಮತ್ತು ಕೊಡಗು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಸಿದ್ಧಗಂಗಾ ಶ್ರೀಗಳಾದ ಶಿವಕುಮಾರ ಸ್ವಾಮೀಜಿಯವರ ಸಂಸ್ಮರಣೆ ದಾಸೋಹ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿಯ ಶಾಲೆಗಳ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಕುರಿತು ನಾನು ಮತ್ತು ಪರೀಕ್ಷೆ ಎಂಬ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳಿಗೆ ಶಿಕ್ಷಣ ಕಲಿಕೆಯ ಜೊತೆಯಲ್ಲಿ ಕಷ್ಟ ನೋವಿನ ಅರಿವು ಇರಬೇಕು ಕೀಳೆರಿಮೆಯನ್ನು ಬಿಟ್ಟು ಆತ್ಮ ವಿಶ್ವಾಸದ ಮತ್ತು ಆತ್ಮಸ್ಥೈರ್ಯದ ಮನೋಭಾವನೆಯನ್ನು ಬೆಳೆಸಿಕೊಂಡರೆ ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದರು. ಇಂದಿನ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ಎಲ್ಲಾ ರೀತಿಯ ಅನುಕೂಲಗಳಿವೆ ಎಐ ಯಂತಹ ಆಧುನಿಕ ತಂತ್ರಜ್ಞಾನ ವ್ಯವಸ್ಥೆಗಳಿವೆ ಆದರೆ ಇವುಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ಮುಂದೆ ಸಮಾಜದಲ್ಲಿ ಜನರು ತಮ್ಮನ್ನು ಗುರುತಿಸುವಷ್ಟು ಮಟ್ಟಿಗೆ ಬೆಳೆಯಬೇಕು ಎಂದು ಕಿವಿಮಾತು ಹೇಳಿದರು. ಮನೆಹಳ್ಳಿ ಮಠದ ಮಠಾದೀಶ ಮತ್ತು ಅನಘ ಪೌಂಡೇಶನ್ ಅಧ್ಯಕ್ಷ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ ಕಾರ್ಯಗಾರದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿ-ಶಿಕ್ಷಣದಿಂದ ರಾಷ್ಟ್ರ ಅಭಿವೃದ್ದಿ ಹೊಂದುತ್ತದೆ. ಈ ದಿಸೆಯಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಪರಿಪೂರ್ಣರಾದ ವಿದ್ಯಾವಂತರಾಗಬೇಕು ಮತ್ತು ವಿದ್ಯಾರ್ಥಿಗಳಿಗೆ ಹತ್ತನೆ ತರಗತಿ ಪರೀಕ್ಷೆ ಶಿಕ್ಷಣ ಪ್ರಥಮ ಮೆಟ್ಟಿಲು ಆಗಿರುತ್ತದೆ ಯಾವುದೆ ಹಿಂಜರಿಕೆ ಇಲ್ಲದೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು ಎಂಬ ಉದ್ದೇಶದಿಂದ ಮಠದ ಮೂಲ ಗುರುಗಳ ಹೆಸರಿನಲ್ಲಿ ನಮ್ಮ ಭಾಗದ ಹತ್ತನೆ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ನಮ್ಮ ಮಠದ ವತಿಯಿಂದ ನಾನು ಮತ್ತು ಪರೀಕ್ಷೆ ಎಂಬ ಕಾರ್ಯಗಾರ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು. ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಮಾತನಾಡಿ-ವಿದ್ಯಾರ್ಥಿಗಳು ನಿರಂತರ ಅಭ್ಯಾಸಗಳತ್ತ ಗಮನ ಹರಿಸಬೇಕು ಕೀಳೆರಿಮೆ ಬಿಟ್ಟು ಮಾರ್ಗದರ್ಶಕರ ಮಾಹಿತಿ ಸಲಹೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಇದರಿಂದ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಲು ಸಾಧ್ಯವಾಗುತ್ತದೆ ಎಂದರು. ಕೊಡಗು ಜಿಲ್ಲೆಯಲ್ಲಿ ಸೋಮವಾರಪೇಟೆ ತಾಲೂಕು ಹತ್ತನೆ ತರಗತಿ ಪರೀಕ್ಷೆ ಉತ್ತಮ ಫಲಿತಾಂಶ ತಂದುಕೊಡುತ್ತಿದೆ. ಮುಂದಿನ ಸಾಲಿನಲ್ಲೂ ಮತ್ತಷ್ಟು ಫಲಿತಾಂಶ ತಂದುಕೊಡಬಹುದೆಂಬ ನಿರೀಕ್ಷೆಯನ್ನು ಶಿಕ್ಷಣ ಇಲಾಖೆ ಇಟ್ಟುಕೊಂಡಿದೆ ಎಂದರು. ಕಾರ್ಯಾಗಾರದಲ್ಲಿ ವಕೀಲ ಜಗದೀಶ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಎ.ಎಚ್.ಸಾಗರ್, ಗ್ಯಾರೆಂಟಿ ಅನುಸ್ಠಾನ ಸಮಿತಿ ತಾಲೂಕು ಅಧ್ಯಕ್ಷ ಜಿ.ಎಂ.ಕಾಂತರಾಜ್, ಪತ್ರಕರ್ತ ಎಸ್.ಮಹೇಶ್, ಶನಿವಾರಸಂತೆ ಕ್ಲಸ್ಟರ್ ಸಿಆರ್‍ಪಿ ಸಿ.ಕೆ.ದಿನೇಶ್, ಕೊಡ್ಲಿಪೇಟೆ ಕ್ಲಸ್ಟರ್ ಸಿಒಆರ್‍ಪಿ ರವೀಶ್, ಉಪನ್ಯಾಸಕ ಕೆ.ಪಿ.ಜಯಕುಮಾರ್, ಪ್ರಮುಖರಾದ ಎಸ್.ಸಿ.ಶರತ್ ಶೇಖರ್, ಡಿ.ಬಿ.ಧರ್ಮಪ್ಪ ಮುಂತಾದವರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ನ.11ರಿಂದ ಕೊಡಗು ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಶೇ.15ರಿಂದ 20ರಷ್ಟು ಹೆಚ್ಚಳ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ನ.8ರಂದು ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.7: ನಾಪೋಕ್ಲು ಕೊಡವ ಸಮಾಜದ 26ನೇ ವಾರ್ಷಿಕ ಮಹಾಸಭೆಯು ನ.8ರಂದು ಬೆಳಿಗ್ಗೆ 10.30ಕ್ಕೆ ನಾಪೋಕ್ಲು ಕೊಡವ…

ನ.14ರಿಂದ ಶ್ರೀ ಕ್ಷೇತ್ರ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಮಹಾಕುಂಭಾಭಿಷೇಕ ಮಹೋತ್ಸವ

ನವೆಂಬರ್ 7, 2026

ರಸ್ತೆ ಅಪಘಾತ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ನವೆಂಬರ್ 7, 2026

ಸುಂಟಿಕೊಪ್ಪಕ್ಕೂ ಕನ್ನಡ ಸಾಹಿತ್ಯ ಕ್ಷೇತ್ರಕ್ಕೂ ಅವಿನಾಭಾವ ಸಂಬಂಧ: ಪಿ.ಎಫ್. ಸೆಬಾಸ್ಟಿನ್

ನವೆಂಬರ್ 7, 2026

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026

ಗೂಂಡಾ ಕಾಯ್ದೆಯಡಿ ಕಳ್ಳತನ ಪ್ರಕರಣಗಳ ಆರೋಪಿ ಬಂಧನ; 25 ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

ನವೆಂಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.