Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂರ್ಗ್ ವ್ಯಾಲಿ ಶಾಲೆಯ ರಜತ ಮಹೋತ್ಸವ : ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ : ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂರ್ಗ್ ವ್ಯಾಲಿ ಶಾಲೆಯ ರಜತ ಮಹೋತ್ಸವ : ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ : ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ* 

ಜನವರಿ 20, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜ.20 NEWS DESK : ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಬೇಕು. ಜೊತೆಗೆ ಪೋಷಕರು ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವುದರ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ಎಂದು ಅರಮೇರಿ ಕಳಂಚೇರಿ ಮಠದ ಮಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು  ಹೇಳಿದರು. ವಿರಾಜಪೇಟೆಯ ತಾಲ್ಲೂಕು ಮೈದಾನದಲ್ಲಿ ಜರುಗಿದ ಪಟ್ಟಣದ ಕೂರ್ಗ್ ವ್ಯಾಲಿ ಶಾಲೆಯ 25ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೂರ್ಗ್ ವ್ಯಾಲಿ ವಿದ್ಯಾಸಂಸ್ಥೆಯು 25 ವರ್ಷಗಳನ್ನು ಪೂರೈಸಿದ್ದು, ಉತ್ತಮ ಪ್ರಜೆಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ. ಈ ಸಂಸ್ಥೆಯು ಕೇವಲ ವಿದ್ಯಾರ್ಜನೆಗೆ ಮಾತ್ರವಲ್ಲದೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಹಲವಾರು ಸಾಧನೆಗಳನ್ನು ಮಾಡಿ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು. ಪೋಷಕರು ವಿದ್ಯಾರ್ಥಿಗಳ ಶಿಕ್ಷಣದ ಕಡೆ ಹೆಚ್ಚು ಗಮನವನ್ನು ಹರಿಸಬೇಕು. ಹಾಗೆಯೇ ಅವರಿಗೆ ಸಂಸ್ಕಾರವನ್ನು ಕಲಿಸಿ ಎಂದು ಕರೆ ನೀಡಿದರು. ಸಂಸ್ಥೆಯು 25 ವರ್ಷ ಪೂರೈಸಲು ಆಡಳಿತ ಮಂಡಳಿಯ ಚಿತ್ರ ಭಾನು ಹಾಗೂ ಸುಮಚಿತ್ರ ಭಾನು ಅವರ ಪಾತ್ರ ಪ್ರಮುಖವಾಗಿದ್ದು, ಹಲವಾರು ಸವಾಲುಗಳನ್ನು ಎದುರಿಸಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಶಾಲೆಯು ಉತ್ತಮ ಫಲಿತಾಂಶ ನೀಡುವುದರ ಮೂಲಕ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೇಳಿದರು. ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿರಾಜಪೇಟೆ ಸಂತ ಅನ್ನಮ್ಮ ಪಿ.ಯು. ಕಾಲೇಜಿನ ಪ್ರಾಂಶುಪಾಲ ಹಾಗೂ ಅಮ್ಮತ್ತಿ ಸಂತ ಅಂತೋಣಿ ಚರ್ಚ್ ನ ಗುರುಗಳಾದ ರೆ.ಫಾ. ಮದಲೈ ಮುತ್ತು ಮಾತನಾಡಿ, ಒಂದು ವಿದ್ಯಾಸಂಸ್ಥೆಯು ದೊಡ್ಡದಿರಲಿ ಅಥವಾ ಸಣ್ಣದಿರಲಿ, ವಿದ್ಯಾಸಂಸ್ಥೆ ನಡೆಸುವವರ ಮನೋಭಾವನೆ ಮುಖ್ಯ. ಅನೇಕ ಸವಾಲುಗಳ ಮಧ್ಯೆ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡಿರುವ ಆಡಳಿತ ಮಂಡಳಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ರಜತ ಮಹೋತ್ಸವವನ್ನು ಆಚರಿಸುತ್ತಿರುವ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯವರಿಗೆ, ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಶಿಕ್ಷಕರಿಗೆ ದೇವರು ಆಶೀರ್ವಾದಿಸಲಿ ಎಂದು ಹೇಳಿದರು. ಹಾಗೆಯೇ ಈ ವಿದ್ಯಾಸಂಸ್ಥೆಯು 50 ವರ್ಷಗಳನ್ನು ಪೂರೈಸಲಿ ಎಂದು ಶುಭ ಹಾರೈಸಿದರು. ಸಂಸ್ಥೆಯ ವ್ಯವಸ್ಥಾಪಕರು ಹಾಗೂ ಪ್ರಾಂಶುಪಾಲರಾದ ಸುಮಾ ಚಿತ್ರಭಾನು ಮಾತನಾಡಿ, ಸಂಸ್ಥೆಯು ನಡೆದು ಬಂದ ಹಾದಿಯನ್ನು ಸ್ಮರಿಸುತ್ತಾ ಸರ್ವರಿಗೂ ಧನ್ಯವಾದಗಳನ್ನು ಸಲ್ಲಿಸಿದರು. ಗಣ್ಯರು ರಜತ ಮಹೋತ್ಸವದ ಸಂದರ್ಭದಲ್ಲಿ ಹೊರ ತಂದ ವಿದ್ಯಾ ಸಂಪದ ಕಿರು ಹೊತ್ತಿಗೆಯನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು. ಸಮಾರಂಭದಲ್ಲಿ ವಿದ್ಯಾಸಂಸ್ಥೆಯಲ್ಲಿ ಇಲ್ಲಿಯವರೆಗೆ ಸೇವೆಯನ್ನು ಸಲ್ಲಿಸಿದ ಶಿಕ್ಷಕರುಗಳು ಹಾಗೂ ಸಿಬ್ಬಂದಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ಕಳೆದ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ಹಾಗೂ ತರಗತಿವಾರು ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿ ಬಂದವು. ವೇದಿಕೆಯಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಚಿತ್ರ ಭಾನು, ಕಾರ್ಯದರ್ಶಿಗಳಾದ ಪ್ರಣವ್ ಚಿತ್ರ ಭಾನು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.