
ಮಡಿಕೇರಿ ಜ.20 NEWS DESK : ಮಡಿಕೇರಿಯಲ್ಲಿರುವ ಕಾಂಗ್ರೆಸ್ ಪಕ್ಷದ ಸ್ವಂತ ನಿವೇಶನದಲ್ಲಿ ನಿರ್ಮಾಣ ಆಗುತ್ತಿರುವ, ನೂತನ ಕೊಡಗು ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿ ಕಾಮಗಾರಿಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಪರಿಶೀಲಿಸಿದರು. ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಬಿ ಶಾಂತಪ್ಪ ಹಾಜರಿದ್ದರು.










