Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾರ್ಯನಿರ್ವಾಹಕರುಗಳಿಗೆ ಶಿಕ್ಷಣ ಕಾರ್ಯಕ್ರಮ : ಭ್ರಷ್ಟಾಚಾರ ಮುಕ್ತ ಆಡಳಿತದಿಂದ ಮಾತ್ರ ಸಹಕಾರಿ ಕ್ಷೇತ್ರದ ಬೆಳವಣಿಗೆ ಸಾಧ್ಯ : ಕೆ.ಪಿ.ಗಣಪತಿ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾರ್ಯನಿರ್ವಾಹಕರುಗಳಿಗೆ ಶಿಕ್ಷಣ ಕಾರ್ಯಕ್ರಮ : ಭ್ರಷ್ಟಾಚಾರ ಮುಕ್ತ ಆಡಳಿತದಿಂದ ಮಾತ್ರ ಸಹಕಾರಿ ಕ್ಷೇತ್ರದ ಬೆಳವಣಿಗೆ ಸಾಧ್ಯ : ಕೆ.ಪಿ.ಗಣಪತಿ ಅಭಿಮತ*

ಜನವರಿ 20, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.20 NEWS DESK : ಜನಪ್ರತಿನಿಧಿಗಳು ಹಾಗೂ ಗ್ರಾಹಕರ ನಡುವಿನ ಸೇತುವೆಯಂತೆ ಕಾರ್ಯನಿರ್ವಹಿತ್ತಿರುವ ಸಹಕಾರ ಸಂಘಗಳು ಭ್ರಷ್ಟಾಚಾರ ಮುಕ್ತವಾಗಿದ್ದಾಗ ಮಾತ್ರ ಸಹಕಾರಿ ಕ್ಷೇತ್ರದ ಬೆಳವಣಿಗೆ ಸಾಧ್ಯ ಎಂದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ಅಧ್ಯಕ್ಷ ಕೆ.ಪಿ.ಗಣಪತಿ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಸಂಯುಕ್ತಾಶ್ರಯದಲ್ಲಿ ನಗರದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಜಿಲ್ಲೆಯ ಪ್ಯಾಕ್ಸ್, ಪಿಕಾರ್ಡ್ ಬ್ಯಾಂಕ್, ಎ.ಪಿ.ಸಿ.ಎಂ.ಎಸ್ ಹಾಗೂ ಜೇನು ಸಹಕಾರ ಸಂಘಗಳ ಕಾರ್ಯನಿರ್ವಾಹಕರುಗಳಿಗೆ ಇತ್ತೀಚಿನ ಸಹಕಾರ ಕಾಯ್ದೆ, ಕಾನೂನು ತಿದ್ದುಪಡಿ ಮತ್ತು ಜಿ.ಎಸ್.ಟಿ, ಆದಾಯ ತೆರಿಗೆ ಕುರಿತು ಶಿಕ್ಷಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿಂದೆ ಸಹಕಾರಿ ಕ್ಷೇತ್ರದಲ್ಲಿ ಕೊಡಗು ಇತರರಿಗೆ ಮಾದರಿಯಾಗಿತ್ತು, ಆದರೆ ಇಂದು ಅವ್ಯವಹಾರ ನುಸುಳಿದೆ. ಈ ಬಗ್ಗೆ ಪ್ರತಿಯೊಬ್ಬರು ಆತ್ಮಾವಲೋಕನ ಮಾಡಿಕೊಳ್ಳಬೇಕು, ಸಹಕಾರಿ ಕ್ಷೇತ್ರವನ್ನು ಭ್ರಷ್ಟಾಚಾರ ಮುಕ್ತಗೊಳಿಸಬೇಕು ಮತ್ತು ಸಹಕಾರ ಸಂಘಗಳ ಬೆಳವಣಿಗೆಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ಸಹಕಾರ ಕ್ಷೇತ್ರದಲ್ಲಿ ಎಲ್ಲವನ್ನೂ ಕಲಿತೆ ಎಂದರೆ ತಪ್ಪಾಗುತ್ತದೆ, ನಿರಂತರ ಕಲಿಯುತ್ತಿರಬೇಕು. ಅಧಿಕಾರ ವರ್ಗ ಇಚ್ಛಾಶಕ್ತಿ ಮತ್ತು ಕಾರ್ಯಶಕ್ತಿಯನ್ನು ಪ್ರದರ್ಶಿಸಬೇಕು. ಸಂಸ್ಥೆಯಲ್ಲಿ ಯಾವುದೇ ದುರುಪಯೋಗಕ್ಕೆ ಅವಕಾಶ ಇರಬಾರದು. ಆಡಳಿತ ಮಂಡಳಿಯ ಅನುಮತಿ ಇಲ್ಲದೆ ಯಾವುದನ್ನೂ ಮಾಡಲು ಸಾಧ್ಯವಿಲ್ಲ. ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು ಜೋಡೆತ್ತಿನಂತೆ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಸಂಘದಲ್ಲಿರುವ ವಿವಿಧ ರೀತಿಯ ನಿಧಿಗಳ ಕುರಿತು ಜ್ಞಾನ ಹೊಂದಿರಬೇಕು. ಅದರ ಉದ್ದೇಶವನ್ನು ಅರಿತು ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶಿಸ್ತು ಮತ್ತು ಸಮಯ ಪಾಲನೆ ಮಾಡುವುದು, ಸಹಕಾರ ಕ್ಷೇತ್ರದ ಕಾನೂನು ಕಾಯ್ದೆ ಅರಿತುಕೊಳ್ಳುವುದು ಅತೀ ಮುಖ್ಯ. ಆಡಳಿತ ಮಂಡಳಿ ಹಾಗೂ ಅಧಿಕಾರಿಗಳು ಕಾಯ್ದೆಯ ಪುಸ್ತಕಗಳನ್ನು ಮನವರಿಕೆ ಮಾಡಿಕೊಳ್ಳಬೇಕು. ಸಹಕಾರ ಸಂಘಗಳು ಆಯೋಜನೆ ಮಾಡುವ ಕಾರ್ಯಕ್ರಮಗಳಿಗೆ ಸಮಯಕ್ಕೆ ಸರಿಯಾಗಿ ತೆರಳಬೇಕು. ಶಿಕ್ಷಣ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಂಡು ದೈನಂದಿನ ಕಾರ್ಯಚಟುವಟಿಕೆಯಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕೆ.ಪಿ.ಗಣಪತಿ ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನ ಅಧ್ಯಕ್ಷ ಪಿ.ಯು.ರಾಬಿನ್ ದೇವಯ್ಯ ಅವರು ಸಹಕಾರ ಸಂಘದ ನಿಯಮಗಳು ಕಾಲಕಾಲಕ್ಕೆ ಬದಲಾಗುತ್ತಿದ್ದು, ಅಧಿಕಾರಿಗಳು ಇದನ್ನು ಗಮನಿಸಿ ಅರಿವು ಮೂಡಿಸಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ಕಾರ್ಯನಿರ್ವಾಹಕರುಗಳಿಗೆ ತರಬೇತಿ ನೀಡಲಾಗುತ್ತಿದ್ದು, ಸಮಗ್ರ ಮಾಹಿತಿಯೊಂದಿಗೆ ಪ್ರಯೋಜನ ಪಡೆದುಕೊಳ್ಳಬೇಕು ಎಂದರು. ಸಹಕಾರ ಸಂಘಗಳಿಗೆ ಕೇಂದ್ರ ಸರಕಾರ ಸಹಕಾರ ಮಂತ್ರಾಲಯವನ್ನು ಸ್ಥಾಪಿಸಿದೆ, ಇದು ದೇಶದಲ್ಲಿ ಸಹಕಾರ ಚಳುವಳಿಯನ್ನು ಬಲಪಡಿಸಲು ಮತ್ತು ಸಹಕಾರ ಸಂಘಗಳಿಗೆ ಸೂಕ್ತ ನೀತಿ, ಕಾನೂನು ಚೌಕಟ್ಟು ನೀಡಲು ಸಹಕಾರಿಯಾಗಿದೆ. ಈ ಸಚಿವಾಲಯವು ಸಹಕಾರ ಸಂಘಗಳ ಅಭಿವೃದ್ಧಿಗಾಗಿ ನೀತಿಗಳನ್ನು ರೂಪಿಸುತ್ತದೆ ಮತ್ತು ಬೆಂಬಲ ನೀಡುತ್ತದೆ. ಸಹಕಾರ ಕ್ಷೇತ್ರದಲ್ಲಿ ಪ್ರತಿಯೊಬ್ಬ ಕೃಷಿಕರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಮಾರ್ಗದರ್ಶಿಯಾಗಿ ಆಡಳಿತ ಮಂಡಳಿಯನ್ನು ಅವಲಂಬಿಸಿದ್ದಾರೆ. ಆದ್ದರಿಂದ ಅಧಿಕಾರಿಗಳು ಸಹಕಾರಿ ಕಾಯ್ದೆಯ ಎಲ್ಲಾ ವಿಚಾರವನ್ನು ರೈತರು ಹಾಗೂ ಗ್ರಾಹಕರಿಗೆ ಸಮರ್ಪಕವಾಗಿ ತಿಳಿಸುವ ಕೆಲಸವನ್ನು ಮಾಡಬೇಕು. ಆದ್ದರಿಂದ ಕಾಲ ಕಾಲಕ್ಕೆ ಬದಲಾಗುವ ಎಲ್ಲಾ ಕಾನೂನು ಕಾಯ್ದೆಯನ್ನು ಕಾರ್ಯನಿರ್ವಾಹಕರು ಹಾಗೂ ಸಿಬ್ಬಂದಿಗಳು ತಿಳಿದುಕೊಳ್ಳಬೇಕು. ಜವಾಬ್ದಾರಿಯಿಂದ ನುಣಿಚಿಕೊಳ್ಳುವ ಕೆಲಸ ಆಗಬಾರದು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೇಶಕರಾದ ಕೆ.ಟಿ.ಪರಮೇಶ್, ಬಲ್ಲಾರಂಡ ಮಣಿ ಉತ್ತಪ್ಪ, ಎ.ಸಿ.ಕುಶಾಲಪ್ಪ, ಎಂ.ಟಿ.ಸುಬ್ಬಯ್ಯ, ವಿ.ಸಿ.ಅಮೃತ್, ಎಂ.ಎಂ.ಶ್ಯಾಮಲಾ, ಎಸ್.ಆರ್.ಸುನಿಲ್ ರಾವ್ ಉಪಸ್ಥಿತರಿದ್ದರು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ನಿರ್ದೇಶಕ ಹೆಚ್.ಕೆ.ಮಾದಪ್ಪ ಸ್ವಾಗತಿಸಿದರು. ಸಿಬ್ಬಂದಿ ಆರ್.ಮಂಜುಳಾ ಪ್ರಾರ್ಥಿಸಿದರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ನಿರೂಪಿಸಿ, ವಂದಿಸಿದರು. ಇತ್ತೀಚೆಗೆ ನಿಧನರಾದ ಹಿರಿಯ ಸಹಕಾರಿಗಳು ಹಾಗೂ ಸಹಕಾರ ರತ್ನ ಪುರಸ್ಕøತರಾದ ಕುಮಾರಪ್ಪ ಅವರಿಗೆ ಕಾರ್ಯಕ್ರಮದಲ್ಲಿ ಮೌನಾಚರಣೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. *ಉಪನ್ಯಾಸ* ಸಭಾ ಕಾರ್ಯಕ್ರಮದ ನಂತರ ಸಹಕಾರ ಸಂಘಗಳ ನಿವೃತ್ತ ನಿಬಂಧಕ ಡಾ.ಗುರುಸ್ವಾಮಿ ಹಾಗೂ ಸನ್ನದು ಲೆಕ್ಕಿಗ ಎ.ಗೋಪಾಲಕೃಷ್ಣ ಅವರುಗಳು ಇತ್ತೀಚಿನ ಸಹಕಾರ ಕಾಯ್ದೆ-ಕಾನೂನು ತಿದ್ದುಪಡಿ ಹಾಗೂ ಜಿ.ಎಸ್.ಟಿ ಆದಾಯ ತೆರಿಗೆ ಕುರಿತು ಉಪನ್ಯಾಸ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.