Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗುಮ್ಮನಕೊಲ್ಲಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಭ್ರಮದ ‘ಕಲಿಕಾ ಹಬ್ಬ’ : ಮಕ್ಕಳ ಕ್ರಿಯಾತ್ಮಕ ಚಟುವಟಿಕೆಗೆ ಕಲಿಕಾ ಹಬ್ಬ ಪೂರಕ : ಬಿಇಓ ಕೃಷ್ಣಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗುಮ್ಮನಕೊಲ್ಲಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಸಂಭ್ರಮದ ‘ಕಲಿಕಾ ಹಬ್ಬ’ : ಮಕ್ಕಳ ಕ್ರಿಯಾತ್ಮಕ ಚಟುವಟಿಕೆಗೆ ಕಲಿಕಾ ಹಬ್ಬ ಪೂರಕ : ಬಿಇಓ ಕೃಷ್ಣಪ್ಪ*

ಜನವರಿ 20, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ  ಜ.20 NEWS DESK : ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳ ಕಲಿಕಾ ಹಬ್ಬವು ಸಂತಸದ ಕಲಿಕೆ ಮತ್ತು ಸಂಭ್ರಮದ‌ ಕಲಿಕಾ ಹಬ್ಬ ಆಗಲಿ. ಮಕ್ಕಳ ಕ್ರಿಯಾತ್ಮಕ ಚಟುವಟಿಕೆಗೆ ಕಲಿಕಾ ಹಬ್ಬವು ಪೂರಕವಾಗಿದೆ ಎಂದು ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಹೇಳಿದರು. ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು , ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಕುಶಾಲನಗರ ಕ್ಲಸ್ಟರ್ ನ ಸಂಯುಕ್ತಾಶ್ರಯದಲ್ಲಿ ಮುಳ್ಳುಸೋಗೆ ಬಳಿಯ ಗುಮ್ಮನಕೊಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  1 ರಿಂದ 5 ನೇ ತರಗತಿಯವರೆಗಿನ
ಮಕ್ಕಳಿಗೆ ಮೂಲಭೂತ – ಸಾಕ್ಷರತೆ- ಸಂಖ್ಯಾಶಾಸ್ತ್ರ (ಎಫ್ ಎಲ್ ಎನ್ ) ಸಂಬಂಧಿಸಿದಂತೆ ಏರ್ಪಡಿಸಿದ್ದ ಮಕ್ಕಳ ಕಲಿಕಾ ಹಬ್ಬ : 2026 ಸಂಭ್ರಮದ ಉತ್ಸವದಲ್ಲಿ ಕಲಿಕಾ ಗೋಪುರದಲ್ಲಿ ಮಕ್ಕಳ ಕಲಿಕಾ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಲಿಕಾ ಹಬ್ಬವು ಮಕ್ಕಳ ಕಲಿಕಾ ಆಸಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ ಎಂದರು.  ವಿದ್ಯಾರ್ಥಿಗಳಲ್ಲಿ ಕ್ರಿಯಾತ್ಮಕ ಚಟುವಟಿಕೆಗಳ ಮೂಲಕ ಸಂತಸದಾಯಕ ಕಲಿಕೆಗೆ ಮಕ್ಕಳ ಹಬ್ಬವು ಸಹಕಾರಿಯಾಗಿದೆ.
ಇದರಿಂದ ಮಕ್ಕಳಿನ ಕಲಿವಿನ ಫಲ ವೃದ್ಧಿಯಾಗುತ್ತದೆ ಎಂದು ಬಿಇಓ ಕೃಷ್ಣಪ್ಪ ಹೇಳಿದರು. ಕಲಿಕಾ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ , ಮಕ್ಕಳಲ್ಲಿ ಸೃಜನಶೀಲತೆ ಹಾಗೂ ಕ್ರಿಯಾಶೀಲತೆ ಬೆಳೆಸಲು ಸಹಕಾರಿಯಾಗಿರುವ ಮಕ್ಕಳ ಕಲಿಕಾ ಹಬ್ಬವು ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಉತ್ತಮ ವೇದಿಕೆ ಒದಗಿಸುತ್ತವೆ..ಮಕ್ಕಳು ಕೇಳುವ ಪ್ರಶ್ನೆಯು ಪ್ರಜ್ಞೆಯಾಗಲಿ” ಎಂದರು. ಕಲಿಕಾ ಹಬ್ಬದ ಮಹತ್ವ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ‌ ಸಿ.ಆರ್.ಪಿ., ಟಿ.ಈ. ವಿಶ್ವನಾಥ್, ವಿದ್ಯಾರ್ಥಿಗಳು ತಾವು ಕಲಿತ ಪಾಠಗಳನ್ನೇ ವಿಭಿನ್ನವಾಗಿ ಸ್ಪರ್ಧಾತ್ಮಕ ಚಟುವಟಿಕೆಗಳ ಮೂಲಕ ತೆರೆದಿಟ್ಟರೆ, ಮಕ್ಕಳಿಗೆ ಕಲಿಕೆಯೇ ಒಂದು ಹಬ್ಬವಾಗುತ್ತಿದ್ದು, ಇದು ಸಂತಸದ ಕಲಿಕೆಗೆ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಈ ಶೈಕ್ಷಣಿಕ ವರ್ಷದ ಫೆಬ್ರವರಿಯಲ್ಲಿ 1 ರಿಂದ 5 ನೇ ತರಗತಿ ಮಕ್ಕಳಿಗೆ “ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನದ(Foundation literacy and Numeracy) ಚಟುವಟಿಕೆಗಳ ಬಲವರ್ಧನೆಗೆ “ಕಲಿಕಾ ಹಬ್ಬ ” ನಡೆಸಲಾಗುತ್ತಿದೆ ಎಂದರು. ಕಲಿಕಾ ಹಬ್ಬದ ವ್ಯವಸ್ಥೆ ಕುರಿತು ಮಾಹಿತಿ ನೀಡಿದ ಶಾಲಾ ಮುಖ್ಯ ಶಿಕ್ಷಕಿ ಎಚ್.ಎಚ್.ಸಾಕಮ್ಮ ಮಾತನಾಡಿ, ಪ್ರಾಥಮಿಕ ಹಂತದಲ್ಲೇ ಮಕ್ಕಳಲ್ಲಿ ಓದು, ಬರವಣಿಗೆ ಮತ್ತು ಗಣಿತದ ಮೂಲಭೂತ ಕೌಶಲಗಳನ್ನು ಬಲಪಡಿಸುವುದೇ ಎಫ್‌ಎಲ್‌ಎನ್ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ’ ಎಂದರು. ನಿವೃತ್ತ ಶಿಕ್ಷಕಿ ಬಿ.ರಾಧಮ್ಮ ಮಾತನಾಡಿದರು. ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕಿ ಎಚ್.ಎಸ್.ಉಮಾದೇವಿ, ಜಿಲ್ಲಾ ಶಿಕ್ಷಣ ಇಲಾಖೆಯ ನೌಕರರ ಪತ್ತಿನ ಸಹಕಾರ ಸಂಘದ ನಿರ್ದೇಶಕ ಎಸ್.ಆರ್.ಶಿವಲಿಂಗ, ವಿವಿಧ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಾದ ಎಸ್.ಕೆ.ಜಲಜಾಕ್ಷಿ, ಲಕ್ಷ್ಮಿ, ಶಾಲಾ ಶಿಕ್ಷಕರಾದ ಎನ್.ಎನ್.ಭಾರತಿ, ಟಿ.ಕೆ.ವನಜಾಕ್ಷಿ, ಕೆ.ಎ.ತಾರಾ, ಬಿ.ಇ.ಅಜಿತ್ ಕುಮಾರ್,
ಎಸ್ ಡಿ ಎಂ ಸಿ ಅಧ್ಯಕ್ಷೆ ಬಿ.ಜಿ.ರಮ್ಯ ಸದಸ್ಯರಾದ ರೀಟಾ, ಸಲ್ಮಾ, ಗೀತಾಂಜಲಿ, ಶೋಭಾ, , ಸಂಧ್ಯಾ ವಿವಿಧ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಕಥೆ ಹೇಳುವುದು. ಜ್ಞಾಪಕ ಪರೀಕ್ಷೆ, ಪೋಷಕಾಂಶ ರಂಗೋಲಿ ರಚನೆ, ಬರವಣಿಗೆ, ಸಂತಸದ ಗಣಿತ ಲೆಕ್ಕಾಚಾರ, ರಸಪ್ರಶ್ನೆ ಸ್ಪರ್ಧೆ ಸೇರಿದಂತೆ ಪೋಷಕರ ಮತ್ತು ಮಕ್ಕಳ ಸಹ ಸಂಬಂದಕ್ಕೆ ಸಂಬಂಧಿಸಿದಂತೆ ಮಕ್ಕಳಿಗೆ ವಿವಿಧ ಅಭ್ಯಾಸಾತ್ಮಕ ಚಟುವಟಿಕೆಗಳನ್ನು ನಡೆಸಲಾಯಿತು. ಕಲಿಕೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಮಕ್ಕಳಿಗೆ ಪ್ರೋತ್ಸಾಹಕ ಬಹುಮಾನ ನೀಡಿ ಪುರಸ್ಕರಿಸಲಾಯಿತು. :: ಮಕ್ಕಳಿಂದ ವಿವಿಧ ಕಲಿಕಾ ಪ್ರದರ್ಶನ :: 
ಕುಶಾಲನಗರ ಕ್ಲಸ್ಟರ್ ವ್ಯಾಪ್ತಿಯಿಂದ‌ ಆಗಮಿಸಿದ್ದ ವಿವಿಧ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಿಂದ ಶಿಕ್ಷಕರ ಜತೆ ಆಗಮಿಸಿದ್ದ ಮಕ್ಕಳು ತಾವು ಕಲಿತ್ತಿದ್ದ ವಿವಿಧ ಅಭ್ಯಾಸಾತ್ಮಕ ಚಟುವಟಿಕೆಗಳಲ್ಲಿ ಪಾಲ್ಹೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಕಲಿಕಾ ಹಬ್ಬದಲ್ಲಿ ಶಿಕ್ಷಕರು, ಮಕ್ಕಳು ಹಾಗೂ ಪೋಷಕರು ಕಾಗದದ ಟೋಪಿ ಧರಿಸಿ ಗಮನ ಸೆಳೆದರು. “ಪ್ರಶ್ನೆಯು ಪ್ರಜ್ಞೆಯಾಗಲಿ” ಎಂಬ ಆಶಯದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳ 1 ರಿಂದ 5 ನೇ ತರಗತಿಯ ಮಕ್ಕಳು ಭಾಗವಹಿಸಿದ್ದರು. ಶಾಲಾ ಅಂಗಳದಲ್ಲಿ ಇಡಲಾಗಿದ್ದ ಸೆಲ್ಪಿ ಕಾರ್ನರ್ ನಲ್ಲಿ ಮಕ್ಕಳು ಮತ್ತು ಪೋಷಕರು‌ ಮುಗಿಬಿದ್ದು ತಮ್ಮ ಛಾಯಚಿತ್ರಗಳನ್ನು ತೆಗೆಸಿಕೊಳ್ಳುತ್ತಿದ್ದುದು ಗೋಚರಿಸಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.