
ವಿರಾಜಪೇಟೆ ಜ.20 NEWS DESK : ಕನ್ನಡ ಸಾಹಿತ್ಯ, ಸಂಗೀತ, ಸಂಘಟನೆಯ ಕ್ಷೇತ್ರದಲ್ಲಿ ಸಾಧನೆಯನ್ನುಗೈದ ಲೇಖಕಿ ಪ್ರತಿಮಾ ಹರೀಶ್ ರೈ ಅವರಿಗೆ ಪಯಸ್ವಿನಿ ಅಚೀವ್ ಮೆಂಟ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕಾಸರಗೋಡು ಕನ್ನಡ ಭವನದ ವತಿಯಿಂದ ಈ ಪ್ರಶಸ್ತಿಯನ್ನು ನೀಡಲಾಗಿದ್ದು, ಕನ್ನಡ ಭವನದ ರಜತ ಸಂಭ್ರಮದ ಪ್ರಯುಕ್ತ ಕಾಸರಗೋಡಿನ ನುಳ್ಳಿಪ್ಪಾಡಿ ಕನ್ನಡ ಭವನದಲ್ಲಿ ಜರಗಿದ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಮೂಲತ: ಮಡಿಕೇರಿಯವರಾದ ಪ್ರತಿಮಾ ಹರೀಶ್ ರೈ ಅವರು ಜಿಲ್ಲೆಯ ಪ್ರಮುಖ ಲೇಖಕಿ, ಬರಹಗಾರ್ತಿ ಹಾಗೂ ಸಾಹಿತಿಗಳಲ್ಲಿ ಒಬ್ಬರಾಗಿದ್ದಾರೆ. ಅವರು ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಕನ್ನಡ ವಿಭಾಗದ ಪ್ರಾಧ್ಯಾಪಕಿಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.










