Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ಶಾಲಾ ಮಕ್ಕಳ ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ : ಪ್ರವಾಸವು ಮಕ್ಕಳಿಗೆ ಜೀವನದ ಅನುಭವ ನೀಡುತ್ತದೆ : ಬಿಇಓ ಕೃಷ್ಣಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ಶಾಲಾ ಮಕ್ಕಳ ಕರ್ನಾಟಕ ದರ್ಶನ ಪ್ರವಾಸಕ್ಕೆ ಚಾಲನೆ : ಪ್ರವಾಸವು ಮಕ್ಕಳಿಗೆ ಜೀವನದ ಅನುಭವ ನೀಡುತ್ತದೆ : ಬಿಇಓ ಕೃಷ್ಣಪ್ಪ*

ಜನವರಿ 21, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಜ.21 NEWS DESK :  ಶಾಲಾ ಶಿಕ್ಷಣ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಂಯುಕ್ತ ಆಶ್ರಯದಲ್ಲಿ “ಕರ್ನಾಟಕ ದರ್ಶನ” ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ  ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಉತ್ತರ ಕರ್ನಾಟಕದ ಐತಿಹಾಸಿಕ ಸ್ಥಳಗಳು ಹಾಗೂ ಪ್ರವಾಸಿ ತಾಣಗಳ ಉಚಿತ ಅಧ್ಯಯನ ಪ್ರವಾಸಕ್ಕೆ ಬುಧವಾರ ಕುಶಾಲನಗರ ತಾಲ್ಲೂಕಿನಿಂದ ಹೊರಟ ಶಾಲಾ ಮಕ್ಕಳಿಗೆ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಕೃಷ್ಣಪ್ಪ ಚಾಲನೆ ನೀಡಿ ಶುಭ ಕೋರಿದರು. ಉತ್ತರ ಕರ್ನಾಟಕದ ಐತಿಹಾಸಿಕ ಸ್ಥಳಗಳು ಹಾಗೂ ಪ್ರವಾಸಿ ತಾಣಗಳ ಅಧ್ಯಯನ ಪ್ರವಾಸಕ್ಕೆ ಕುಶಾಲನಗರ ಪಟ್ಟಣದ ಪಿ.ಎಂ.ಶ್ರೀ.ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾವರಣದಲ್ಲಿ ಏರ್ಪಡಿಸಿದ್ದ ಸರ್ಕಾರಿ ಬಸ್ ನಲ್ಲಿ ತೆರಳಿದ ಪ್ರವಾಸ ತಂಡದ ಪಯಣಕ್ಕೆ ಹಸಿರು ನಿಶಾನೆ ತೋರಿಸಿ ಮಕ್ಕಳಿಗೆ‌ ಪ್ರವಾಸಿ ಕಿಟ್ ವಿತರಿಸಿ ಮಾತನಾಡಿದರು.  ಈ ಪ್ರವಾಸವು ಮಕ್ಕಳಿಗೆ ಪಠ್ಯ ಪುಸ್ತಕಗಳಿಂದ ಲಭ್ಯವಾಗುವ ಜ್ಞಾನಕ್ಕಿಂತ ಹೊರತಾಗಿ ಪಠ್ಯೇತರ ವಿಷಯಗಳ ಅರಿವು ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದರು. ವಿದ್ಯಾರ್ಥಿ ಜೀವನದಲ್ಲಿ ಕೈಗೊಳ್ಳಬಹುದಾದ ಶೈಕ್ಷಣಿಕ ಪ್ರವಾಸಗಳು ಶಾಶ್ವತ ಕಲಿಕೆಯೊಂದಿಗೆ ಜೀವನದ ಅನುಭವ ನೀಡುತ್ತವೆ ಎಂದರು. ಶೈಕ್ಷಣಿಕ ಪ್ರವಾಸವು ಮಕ್ಕಳಿಗೆ ಕಲಿಕೆಗೆ ಪೂರಕವಾಗಿ ಪಠ್ಯ ಚಟುವಟಿಕೆಗಳೊಂದಿಗೆ ಇತಿಹಾಸ, ವಿಜ್ಞಾನ, ಭೌಗೋಳಿಕ ಪರಿಸರ ಮತ್ತಿತರ ಸಂಗತಿಗಳ ವಾಸ್ತವಿಕ ಅನುಭವದ ಮೂಲಕ ಹಲವು ವಿಚಾರಗಳ ಕಲಿಕೆಯಾಗುವುದರಿಂದ ಪ್ರವಾಸಗಳು ಮಕ್ಕಳ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದು ಬಿಇಓ ಕೃಷ್ಣಪ್ಪ ಹೇಳಿದರು. ಮಕ್ಕಳಲ್ಲಿ ಶೈಕ್ಷಣಿಕ ಜೀವನ ರೂಪಿಸಿಕೊಳ್ಳುವ ಮಾರ್ಗದರ್ಶನ ಸಿಗುವ ನಿಟ್ಟಿನಲ್ಲಿ ರಾಜ್ಯದ ಶೈಕ್ಷಣಿಕ ಮತ್ತು ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಲು ಉತ್ತಮ ಅವಕಾಶ ಕಲ್ಪಿಸಲಾಗಿದೆ ಎಂದರು. ಪಠ್ಯ ಪುಸ್ತಕಗಳಿಂದ ಲಭ್ಯವಾಗುವ ಜ್ಞಾನಕ್ಕಿಂತ ಹೊರತಾಗಿ ಪಠ್ಯೇತರ ವಿಷಯಗಳ ಅರಿವು ಬೆಳೆಸಿಕೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಬಿಇಓ ಕೃಷ್ಷಪ್ಪ ಹೇಳಿದರು. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಮಕ್ಕಳಲ್ಲಿ ಶೈಕ್ಷಣಿಕ ಜೀವನ ರೂಪಿಸಿಕೊಳ್ಳುವ ಮಾರ್ಗದರ್ಶನ ಸಿಗುವ ನಿಟ್ಟಿನಲ್ಲಿ ರಾಜ್ಯದ ಶೈಕ್ಷಣಿಕ ಮತ್ತು ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಿ ಸ್ಥಳ ವೀಕ್ಷಣೆ ಮಾಡಲು ಅವಕಾಶ ನೀಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.ಮಕ್ಕಳ ಪ್ರವಾಸದ ಕುರಿತು ಮಾಹಿತಿ ನೀಡಿದ ಪ್ರವಾಸಿ ಮಾರ್ಗದರ್ಶಿ ಶಿಕ್ಷಕ  ಕೆ.ಬಿ.ರಾಧಾಕೃಷ್ಣ ಮಾತನಾಡಿ, ಇಲಾಖೆಯ ವತಿಯಿಂದ ತಾಲ್ಲೂಕಿನ 100 ಮಂದಿಗೆ ಅವಕಾಶ ಕಲ್ಪಿಸಿದ್ದು, ಪ್ರವಾಸದಲ್ಲಿ ಮಕ್ಕಳಿಗೆ ಪ್ರವಾಸೋದ್ಯಮ ಇಲಾಖೆಯ ಮೂಲಕ ಉಚಿತವಾಗಿ ಊಟೋಪಚಾರ ಹಾಗೂ ವಸತಿ ವ್ಯವಸ್ಥೆ ಕಲ್ಪಿಸುತ್ತಿದೆ ಎಂದರು. 4 ದಿನಗಳ ಕಾಲದ ಪ್ರವಾಸದಲ್ಲಿ ಬೇಲೂರು- ಹಳೇಬೀಡು, ಶ್ರವಣಬೆಳಗೂಳ, ಚಿತ್ರದುರ್ಗ, ಹಂಪಿ, ಟಿ.ಬಿ.ಡ್ಯಾಂ,ಗೋಕರ್ಣ, ಮುರುಡೇಶ್ವರ, ಉಡುಪಿ ಮತ್ತಿತರ ಪ್ರವಾಸಿ ಕೇಂದ್ರಗಳಿಗೆ  ಭೇಟಿ ನೀಡಲಾಗುವುದು ಎಂದು ತಿಳಿಸಿದರು. ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಸ್.ಪ್ರಸನ್ನ ಮಾತನಾಡಿ, ಇಂತಹ ಪ್ರವಾಸವು ಅನುಭವ ಮತ್ತು ವೀಕ್ಷಣೆಯ ಮೂಲಕವೇ ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ದೃಷ್ಟಿಕೋನ ವಿಸ್ತಾರಗೊಳ್ಳಲು ಸಹಕಾರಿಯಾಗಿದೆ ಎಂದರು. ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಸಮನ್ವಯಾಧಿಕಾರಿ ರುಕ್ಮಾಂಗದ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಎಸ್. ಮಹೇಂದ್ರ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಆರ್.ರತ್ನಕುಮಾರ್, ತಾಲ್ಲೂಕು  ಪ್ರೌಢಶಾಲಾ ದೈಹಿಕ ಶಿಕ್ಷಣ  ಶಿಕ್ಷಕರ ಸಂಘದ ಅಧ್ಯಕ್ಷೆ ಸುಜಾತ, ಪ್ರವಾಸಿ ಮಾರ್ಗದರ್ಶಿ ಶಿಕ್ಷಕರಾದ ಕೆ.ಬಿ.ರಾಧಾಕೃಷ್ಣ, ಯಾದಕುಮಾರಿ, ವಿವಿಧ ಶಾಲೆಗಳ ಶಿಕ್ಷಕರಾದ ಟಿ.ಆರ್.ದಿನೇಶ್, ಎಂ.ತುಳಸಿ, ಚೇತನ್, ಎಚ್.ಎಂ.ಪ್ರಕಾಶ್,  ಇತರರು ಇದ್ದರು. ಇದೇ ವೇಳೆ ಸೋಮವಾರಪೇಟೆ ಯಿಂದ ಒಂದು ಬಸ್ ಪ್ರವಾಸಕ್ಕೆ ತೆರಳಿದ್ದು, ಮಾರ್ಗದರ್ಶಿ ಶಿಕ್ಷಕರಾದ ಎಂ.ಎಲ್.ಸುಕುಮಾರಿ ಮತ್ತು ಎಚ್.ಸಿ.ಬಸವರಾಜ್‌ ಮಕ್ಕಳ ಜತೆ ಪ್ರವಾಸಕ್ಕೆ ತೆರಳಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.