
ಮಡಿಕೇರಿ ಜ.22 NEWS DESK : ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಭೆ ನಡೆಸಿದ ಅವರು ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಿದರು. ಅನುಷ್ಠಾನಗೊಳ್ಳುತ್ತಿರುವ ಸರಕಾರದ ಯೋಜನೆಗಳು ಮತ್ತು ಕೈಗೊಳ್ಳಬೇಕಾಗಿರುವ ಕಾಮಗಾರಿಗಳ ಬಗ್ಗೆ ಶಾಸಕರು ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.








