
ಮಡಿಕೇರಿ ಜ.22 NEWS DESK : ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರ್ ಕಛೇರಿಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಸಭೆ ನಡೆಸಿದರು. ಬಗರ್ ಹುಕುಂ ಸಾಗುವಳಿಯ ಅರ್ಜಿಗಳ ವಿಲೇವಾರಿ ಕುರಿತು ತಹಶೀಲ್ದಾರ್ ಹಾಗೂ ಕಂದಾಯ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.









