Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ಕಾನೂನು ಅರಿವು ಮತ್ತು ನೆರವು ಶಿಬಿರ : ಹಿರಿಯ ನಾಗರಿಕರು ಸಮಾಜದ ಆಸ್ತಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಾನೂನು ಅರಿವು ಮತ್ತು ನೆರವು ಶಿಬಿರ : ಹಿರಿಯ ನಾಗರಿಕರು ಸಮಾಜದ ಆಸ್ತಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*

ಜನವರಿ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.23 NEWS DESK : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಹಿರಿಯ ನಾಗರಿಕರಿಗಾಗಿ ಕೇಂದ್ರ ಪ್ರಾಯೋಜಿತ ಅಟಲ್ ವಯೋ ಅಭ್ಯುದಯ ಯೋಜನೆಯಡಿ ಕೇಂದ್ರ ಸರ್ಕಾರದ ಸ್ಟೇಟ್ ಆಕ್ಷನ್ ಪ್ಲಾನ್ ಫಾರ್ ಸೀನಿಯರ್ ಸಿಟಿಜನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಸಲುವಾಗಿ ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಹಿರಿಯ ನಾಗರಿಕರ ಕಾಯ್ದೆ 2007, ಹಿರಿಯ ನಾಗರಿಕರ ಆಸ್ತಿ ಸಂರಕ್ಷಣೆ, ಹಿರಿಯ ನಾಗರಿಕರಿಗೆ ಇರುವ ಸೌಲಭ್ಯಗಳ ಕುರಿತಾಗಿ ಸಾರ್ವಜನಿಕರಿಗೆ ಕಾನೂನು ಅರಿವು ಮತ್ತು ನೆರವು ಶಿಬಿರ ಕಾರ್ಯಕ್ರಮವು ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಅವರು ಉದ್ಘಾಟಿಸಿ ಮಾತನಾಡಿ, ಹಿರಿಯ ನಾಗರಿಕರು ಸಮಾಜದ ಆಸ್ತಿ. ಹಿರಿಯರಿಗೆ ಸರ್ಕಾರ ಹಾಗೂ ಸಂಘ ಸಂಸ್ಥೆಗಳಿಂದ ಇರುವಂತಹ ಅವರ ಹಕ್ಕುಗಳನ್ನು ಪಡೆಯುವಲ್ಲಿ ಹಾಗೂ ತಮ್ಮ ಆಸ್ತಿಯಲ್ಲಿ ತಮಗೆ ಅಗತ್ಯವಿರುವಷ್ಟನ್ನು ಇಟ್ಟುಕೊಂಡು ಮಕ್ಕಳಿಗೆ ನೀಡುವಂತಾಗಬೇಕು ಎಂದು ಸಲಹೆ ನೀಡಿದರು. ಪ್ರತಿಯೊಬ್ಬರೂ ಹಂಚಿಕೊಂಡು ಬದುಕುವುದರಿಂದ ಸಂತೋಷದಿಂದ ಇರಬಹುದು. ಅಲ್ಲದೆ ಹಿರಿಯ ನಾಗರಿಕರು ತಮ್ಮ ಮಾಹಿತಿಯನ್ನು ಹತ್ತಿರದ ಪೊಲೀಸ್ ಠಾಣೆಗಳಿಗೆ ನೀಡುವಂತೆ ಹಾಗೂ ಪೊಲೀಸ್ ಇಲಾಖೆಯ 112 ನ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಅಲ್ಲದೆ ಜನವರಿ 28 ರಂದು ನಡೆಯುವ ಲೋಕ ಅದಾಲತ್‍ನಲ್ಲಿ ಈಗಾಗಲೇ ಉಪ ವಿಭಾಗಾಧಿಕಾರಿ ಅವರ ಕಚೇರಿಯಲ್ಲಿ ಇರುವ ಅರ್ಜಿಯನ್ನು ವಿಲೇವಾರಿಗೊಳಿಸಲು ಹಿರಿಯ ನಾಗರಿಕರು ತಮ್ಮ ದೂರನ್ನು ಇತ್ಯರ್ಥಪಡಿಸಿಕೊಳ್ಳಲು ಮುಂದಾಗಬೇಕು ಎಂದರು. ಹಿರಿಯ ನಾಗರಿಕರ ಪಾಲನೆ ಘೋಷಣೆ ಸಂರಕ್ಷಣೆ ಕಾಯ್ದೆ 2007 ರ ಕುರಿತು ವಕೀಲರಾದ ಮೀನಾ ಕುಮಾರಿ ಉಪನ್ಯಾಸ ನೀಡಿದರು. ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಚಂದ್ರಶೇಖರ್ ಅವರು ಹಿರಿಯ ನಾಗರಿಕರಿಗೆ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಈಗಾಗಲೇ ಇಲಾಖೆಯಲ್ಲಿ ಒಂಟಿಯಾಗಿ ಇರುವ ಹಿರಿಯ ನಾಗರಿಕರು ಹಾಗೂ ಇತರೆ ಹಿರಿಯ ನಾಗರಿಕರ ಪಟ್ಟಿ ಸಿದ್ಧಪಡಿಸಿದೆ ಎಂದು ಹಾಗೂ ಅವರ ಮೇಲೆ ತೀವ್ರ ನಿಗಾ ವಹಿಸುವುದಾಗಿ ತಿಳಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರ ವೇದಿಕೆ ಅಧ್ಯಕ್ಷ ತಿಮ್ಮಯ್ಯ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಾದಮಯ ಜಿಲ್ಲಾ ಅಂಗವಿಕಲ ಕಲ್ಯಾಣ ಅಧಿಕಾರಿ ವಿಮಲ ಹಾಗೂ ಕಚೇರಿ ಮತ್ತು ಸ್ವಯಂ ಸೇವಾ ಸಂಸ್ಥೆಯ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.