Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಹಿಂದೂ ಸಂಗಮ : ಹಿಂದೂ ಸಂಸ್ಕೃತಿಯ ಉಳಿವಿಗೆ ಹಿಂದೂ ಕೌಟುಂಬಿಕ ಮೌಲ್ಯಗಳ ಸಂರಕ್ಷಣೆ ಅಗತ್ಯ : ರವೀಂದ್ರ ಪುತ್ತೂರು ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಹಿಂದೂ ಸಂಗಮ : ಹಿಂದೂ ಸಂಸ್ಕೃತಿಯ ಉಳಿವಿಗೆ ಹಿಂದೂ ಕೌಟುಂಬಿಕ ಮೌಲ್ಯಗಳ ಸಂರಕ್ಷಣೆ ಅಗತ್ಯ : ರವೀಂದ್ರ ಪುತ್ತೂರು ಅಭಿಮತ*

ಜನವರಿ 25, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ NEWS DESK ಜ.25 : ಹಿಂದೂಗಳು ಒಗ್ಗೂಡಿ ಸಂಘಟಿತರಾಗಿ ಹಿಂದೂ ಸಂಸ್ಕೃತಿ, ಪರಂಪರೆಗಳನ್ನು, ಕೌಟುಂಬಿಕ ಮೌಲ್ಯಗಳನ್ನು ಸಂರಕ್ಷಿಸುವ ಮೂಲಕ ಹಿಂದೂ ಸಮಾಜದ ಬಲವರ್ಧನೆಗೆ ಶ್ರಮಿಸಬೇಕೆಂದು ಹಿಂದೂ ಮುಖಂಡರೂ ಆದ ಪುತ್ತೂರಿನ ಶ್ರೀ ವಿವೇಕಾನಂದ ಕಾಲೇಜು ಅಧ್ಯಕ್ಷ ರವೀಂದ್ರ ಪತ್ತೂರು ಕರೆ ನೀಡಿದ್ದಾರೆ. ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ಭಾನುವಾರ ಕುಶಾಲನಗರದಲ್ಲಿ ಆಯೋಜಿಸಿದ್ದ ಹಿಂದೂ ಸಂಗಮ ಸಭಾ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಯಾವುದೇ ವ್ಯಕ್ತಿಯ, ಧರ್ಮದ, ರಾಜಕೀಯ ಪಕ್ಷದ ವಿರುದ್ಧ ಹಿಂದೂ ಸಂಗಮವಲ್ಲ. ನಮ್ಮ ಹಿಂದೂ ಸಮಾಜದ ಸಂಘಟನೆಗೆ ಗ್ರಾಮಗಳಲ್ಲಿ ಸಮಿತಿ ರಚನೆ ಮಾಡುವ ಮೂಲಕ ಜಾಗೃತಿ ಮೂಡುತ್ತಿರುವುದು ಹೆಮ್ಮೆಯ ಸಂಗತಿ. ಆದರೆ, ಹಿಂದೂಗಳೆಲ್ಲಾ ಒಂದೇ ಎಂಬ ಭಾವನೆಗಳೊಂದಿಗೆ ಜಾತಿ ಪದ್ಧತಿ ನಿರ್ಮೂಲನೆ ಮಾಡಬೇಕು. ಸ್ವದೇಶಿ ವಸ್ತುಗಳಿಗೆ ಆದ್ಯತೆ ಕೊಡಬೇಕು. ಹಿಂದುತ್ವದ ಅರ್ಥ ಮಾಡಿಕೊಂಡವರು ಜಗತ್ತಿನಾದ್ಯಂತ ಬೇರೆ ಬೇರೆ ರಂಗಗಳಲ್ಲಿ ಬೆಳೆಯುತ್ತಿದ್ದಾರೆ. ಕೆಲವರು ವಿನಾಶಕ್ಕೆ ಕೆಲಸ ಸಂಚು ರೂಪಿಸುತ್ತಿದ್ದಾರೆ. ಹಿಂದೂ ಪದ ಕೇಳಿದರೆ ಮೈ ಪರಚಿಕೊಳ್ಳುವ ಕಾಲವೊಂದಿತ್ತು. ಸ್ವಾಮಿ ವಿವೇಕಾನಂದರ ಆದರ್ಶಗಳ ಪಾಲನೆ ಹಿಂದೂಗಳ ಹೆಮ್ಮೆ. ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ನವಚೈತನ್ಯ ತಂದು ಕೊಟ್ಟ ಮಹಾ ಚೇತನ ಎಂದು ರವೀಂದ್ರ ಬಣ್ಣಿಸಿದರು. ಹಿಂದುತ್ವದ ನವ ಜಾಗರಣೆ ಹಳ್ಳಿ ಹಳ್ಳಿಗಳಲ್ಲಿ ಆರಂಭವಾಗಿದೆ. ಹಿಂದೂಗಳು ಇರುವ ಜಗತ್ತಿನ ಏಕೈಕ ರಾಷ್ಟ್ರ ಭಾರತ. ಹಿಂದೂ ಸಮಾಜ ಯಾವತ್ತೂ ಯಾರ ಜೊತೆಯೂ ಯುದ್ಧಕ್ಕಿಳಿಯಲಿಲ್ಲ. ಜಗತ್ತಿನ ಕೆಲವು ರಾಷ್ಟ್ರ ಗಳಿಗೆ ಜನರನ್ನು ಕೊಲ್ಲುವುದೇ ಕೆಲಸವಾಗ್ತಿದೆ. ಭಾರತೀಯ ಸಹೋದರಿಯರ ಸಿಂಧೂರ ಅಳಿಸಿದ ಉಗ್ರರನ್ನು ನಮ್ಮ ಸೈನಿಕರು ಸದೆ ಬಡಿದದ್ದು ಇತಿಹಾಸ. ಸ್ವಾತಂತ್ರ್ಯಾ ನಂತರದ ನಮ್ಮ ದೇಶದ ನಾಯಕರ ಕನಸು ಸಾಮಾಜಿಕ ಸಂಪನ್ನತೆ, ಸಾಮಾಜಿಕ ಸುರಕ್ಷತೆ ನಿರ್ಮಾಣ, ಸಾಮಾಜಿಕ ಸಮರಸ ನಿರ್ಮಾಣವಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ವಿಕಸಿತ ಭಾರತದ ಪರಿಕಲ್ಪನೆಗಳಾದ ವಿಶ್ವಶಕ್ತಿಯಾಗುವ ಮೂಲಕ ವಿಶ್ವಗುರು ಆಗುವುದಾಗಿದೆ ಎಂದು ರವೀಂದ್ರ ಪುತ್ತೂರು ಹೇಳಿದರು. ಇತ್ತೀಚಿನ ದಶಕಗಳಲ್ಲಿ ಭಾರತೀಯ ಕೌಟುಂಬಿಕ ಮೌಲ್ಯಗಳು ಉಳಿಸಲು ನಿತ್ಯವೂ ಪ್ರತೀ ಮನೆಗಳಲ್ಲಿ ಭಜನೆ, ಸಾಮೂಹಿಕ ಭೋಜನ, ಮನೆತನದ ಭಾಷೆಗಳಿರಬೇಕು. ಶ್ರೇಷ್ಠ ಮೌಲ್ಯಗಳನ್ನು ಮಕ್ಕಳಿಗೆ ಕಲಿಸುವ ಮೂಲಕ ಸಮಾಜಬಾಹಿರ ಕೃತ್ಯಗಳು ಘಟಿಸದಂತೆ ಜಾಗೃತಿ ವಹಿಸಬೇಕು. 18 ರಿಂದ 28 ರ ವಯಸ್ಸಿನ ತರುಣ ತರುಣಿಯರಿಗೆ ಹಿಂದೂ ಪದ್ದತಿ ಸಂಸ್ಕಾರಗಳ ಅರಿವು ಮೂಡಿಸಬೇಕು. ನಾಗರಿಕ ಪ್ರಜ್ಞೆ ಹಾಗೂ ಶಿಸ್ತು ಅತಿ ಮುಖ್ಯ ಎಂದು ರವೀಂದ್ರ ಪುತ್ತೂರು ಹೇಳಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಕುಶಾಲನಗರದ ಕೃಷಿ ಪತ್ತಿನ ಮತ್ತು ಕೈಗಾರಿಕೋದ್ಯಮಿ ಗಳ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್ ಮಾತನಾಡಿ, ಪುರಾತನವಾದ 4 ಸಾವಿರ ವರ್ಷಗಳ ಹಳೆಯ ಧರ್ಮ ನಮ್ಮ ಹಿಂದೂ ಧರ್ಮ. ಮಹಾನ್ ತ್ಯಾಗಿಗಳು, ಋಷಿಮುನಿಗಳು, ಮಹರ್ಷಿಗಳು ಇರುವಂತಹ ಶ್ರೇಷ್ಠ ಸನಾತನ ಧರ್ಮದ ಸಂರಕ್ಷಣೆ ಅಗತ್ಯವಿದೆ. ಯೋಗವನ್ನು ಪ್ರಪಂಚಕ್ಕೆ ಪರಿಚಯಿಸಿದ ದೇಶ ನಮ್ಮದು. ಪರಿಸರ ಸಂರಕ್ಷಣೆಗೂ ಹಿಂದೂ ಧರ್ಮದ ಧಾರ್ಮಿಕ ಪದ್ದತಿಗಳಿಗೂ ಅವಿನಾಭಾವ ಸಂಬಂಧವಿದೆ. ಭಾರತೀಯ ಸಂಸ್ಕೃತಿಯನ್ನು ಇಂದಿನ ಯುವಕ ಯುವತಿಯರು ಆರಾಧಿಸುವ ಮೂಲಕ ಹಿರಿಯರ ಆಚರಣೆಗಳನ್ನು ಗೌರವಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಆಗಬೇಕಿದೆ. ಇಂತಹ ಶ್ರೇಷ್ಠ ಧರ್ಮದ ತಳಹದಿ ಗಟ್ಟಿಗೊಳಿಸಬೇಕಿದೆ. ಕೆಲವು ರಾಜಕಾರಣಿಗಳು ಮತಬ್ಯಾಂಕಿಗೋಸ್ಕರ ಹಿಂದೂ ಧರ್ಮದ ವಿರುದ್ದ ಟೀಕೆ ಮಾಡುವುದು ಸಲ್ಲದು. ಹಾಗಾಗಿ ಹಿಂದೂ ಯುವ ಶಕ್ತಿ ಒಗ್ಗೂಡಿ ಎಂದು ಹಿಂದೂ ಬಾಂಧವರಿಗೆ ಶರವಣಕುಮಾರ್ ಕರೆಕೊಟ್ಟರು. ಹಿಂದೂ ಸಂಗಮ ಆಯೋಜನಾ ಸಮಿತಿ ಸಂಯೋಜಕ ಜಿ.ಎಲ್.ನಾಗರಾಜು ಮಾತನಾಡಿ, ಸಹಸ್ರ ವರ್ಷಗಳಿಂದ ಹಿಂದೂ ರಾಷ್ಟ್ರ ಭಾರತ ದೇಶ ಕಳೆದು ಕೊಂಡದ್ದನ್ನು ಮರಳಿ ಗಳಿಸಿ ಕೊಳ್ಳುವುದಕ್ಕೆ ಹಿಂದೂ ಸಂಗಮ ಅವಶ್ಯವಿದೆ. ಹಿಂದೂಗಳು ಇನ್ನಾದರೂ ಒಗ್ಗೂಡಿ ಹಿಂದೂ ಧರ್ಮವನ್ನು ಉಳಿಸಿ ಬೆಳೆಸಬೇಕು ಎಂದು ಕರೆ ಕೊಟ್ಟರು. ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದು ಸಂಗಮ ಆಯೋಜನಾ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್, ವಿಶ್ವಜ್ಞಾನಿ ಡಾ.ಅಂಬೇಡ್ಕರ್ ಸಂಘದ ಅಧ್ಯಕ್ಷ ಲೋಕೇಶ್ ಪುಂಡಾರಿ ಇದ್ದರು. ಮಹಿಳೆಯರಿಂದ ಸಾಮೂಹಿಕವಾಗಿ ವಂದೇ ಮಾತರಂ ಗೀತೆ ಹಾಡಿದರು. ವಿವಿಧ ಮಕ್ಕಳಿಂದ ದೇಶಕ್ಕಾಗಿ ವೀರ ಮರಣಗೈದ ದೇಶ ಭಕ್ತ ಹುತಾತ್ಮರು ಹಾಗೂ ತ್ಯಾಗಿಗಳ ಛದ್ಮವೇಶ ಗಮನ ಸೆಳೆಯಿತು. ಹಾಗೆಯೇ ದೇಶಪ್ರೇಮ ಒಡ ಮೂಡಿಸುವ ಕಿರು ರೂಪಕ ಗಮನ ಸೆಳೆಯಿತು. ರುಚಿ ಚಂದ್ರಶೇಖರ್ ದೇಶಭಕ್ತಿ ಗೀತೆ ಹಾಡಿದರು. ಆಶಾ ಅಶೋಕ್ ನಿರೂಪಿಸಿದರು. ಎಂ.ಡಿ.ರಂಗಸ್ವಾಮಿ ಸ್ವಾಗತಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.26: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತು (ಬೆಂಗಳೂರು) ವತಿಯಿಂದ ದಾವಣಗೆರೆಯಲ್ಲಿ…

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.