Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*
  • *ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಶ್ವವ್ಯಾಪಿ ಮಾನವೀಯ ಧಮ೯ ಸಂರಕ್ಷಣೆಯಲ್ಲಿ ರೆಡ್ ಕ್ರಾಸ್ ಮುಖ್ಯ ಪಾತ್ರ : ಬಿ.ಭಾಸ್ಕರರಾವ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಶ್ವವ್ಯಾಪಿ ಮಾನವೀಯ ಧಮ೯ ಸಂರಕ್ಷಣೆಯಲ್ಲಿ ರೆಡ್ ಕ್ರಾಸ್ ಮುಖ್ಯ ಪಾತ್ರ : ಬಿ.ಭಾಸ್ಕರರಾವ್*

ಜನವರಿ 26, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.26 NEWS DESK : ರೆಡ್ ಕ್ರಾಸ್ ಸಂಸ್ಥೆಯು ವಿಶ್ವದಲ್ಲಿ ಮಾನವೀಯ ಧಮ೯ವನ್ನು ಪ್ರಚುರಪಡಿಸುವ ಮೂಲಕ ವಿಶ್ವಶಾಂತಿಗೆ ಸಕ್ರಿಯವಾಗಿ ತೊಡಗಿಸಿಕೊಂಡಿದೆ. ಲಕ್ಷಾಂತರ ಮಂದಿಗೆ ರೆಡ್ ಕ್ರಾಸ್ ನೆರವನ್ನು ವಿಶ್ವವ್ಯಾಪಿ ಒದಗಿಸುತ್ತಾ ಬಂದಿದ್ದು, ಕೊಡಗಿನಲ್ಲಿಯೂ ರೆಡ್ ಕ್ರಾಸ್ ಗೆ ಹೆಚ್ಚಿನ ಸದಸ್ಯರು ಸೇಪ೯ಡೆಯಾಗಬೇಕೆಂದು ರೆಡ್ ಕ್ರಾಸ್ ರಾಜ್ಯ ಉಪಾಧ್ಯಕ್ಷ ಬಿ. ಭಾಸ್ಕರರಾವ್ ಕರೆ ನೀಡಿದರು. ನಗರದ ರೆಡ್ ಕ್ರಾಸ್ ಭವನಕ್ಕೆ ಭೇಟಿ ನೀಡಿದ ಭಾಸ್ಕರರಾವ್ ಈ ಸಂದಭ೯ ರೆಡ್ ಕ್ರಾಸ್ ಸದಸ್ಯರನ್ನುದ್ದೇಶಿಸಿ ಮಾತನಾಡಿ, ಯಾವುದೇ ದೇಶಗಳ ನಡುವೆ ಅಶಾಂತಿಯುತ ವಾತಾವರಣ ಪರಿಸ್ಥಿತಿ ಉಧ್ಬವಿಸಿದಾಗ ರೆಡ್ ಕ್ರಾಸ್ ಪ್ರಮುಖರು ಅಂಥ ದೇಶಗಳ ನಡುವೆ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸಕ್ರಿಯರಾಗುತ್ತಾರೆ. ವಿಶ್ವದಲ್ಲಿ ಶಾಂತಿ ಕಾಪಾಡುವುದೇ ರೆಡ್ ಕ್ರಾಸ್ ನ ಪ್ರಮುಖ ಉದ್ದೇಶವಾಗಿದೆ ಎಂದರು. ಸಾಕಷ್ಟು ಅನುದಾನ ರೆಡ್ ಕ್ರಾಸ್ ನಲ್ಲಿ ಜನೋಪಯೋಗಿ ಕಾಯ೯ಗಳಿಗೆ ಲಭಿಸುತ್ತಿದ್ದು ಇದನ್ನು ಕೊಡಗಿನಲ್ಲಿ ಪ್ರಕೖತ್ತಿ ವಿಕೋಪದಂಥ ಪ್ರತಿಕೂಲ ದಿನಗಳಲ್ಲಿ ಸದುಪಯೋಗ ಮಾಡಬೇಕೆಂದೂ ಭಾಸ್ಕರ್ ರಾವ್ ಸಲಹೆ ನೀಡಿದರು. ಕೊಡಗಿನ ಸ್ಥಳೀಯ ಸಂಸ್ಥೆಗಳಿಂದ ರೆಡ್ ಕ್ರಾಸ್ ಗೆ ಲಭಿಸಬೇಕಾದ ವಾಷಿ೯ಕ ಚಂದಾ ಹಣವನ್ನು ವಿಳಂಭರಹಿತವಾಗಿ ಪಡೆಯುವ ನಿಟ್ಟಿನಲ್ಲಿ ಕ್ರಮ ವಹಿಸಬೇಕೆಂದೂ ಅವರು ಸೂಚಿಸಿದರು. ಆರೋಗ್ಯ ಶಿಬಿರ, ರಕ್ತದಾನ ಶಿಬಿರ, ಸಂಚಾರ ಜಾಗೖತಿ ಶಿಬಿರಗಳ ಜತೆಗೇ ವಿನೂತನ ಯೋಜನೆಗಳನ್ನು ರೆಡ್ ಕ್ರಾಸ್ ಹಮ್ಮಿಕೊಳ್ಳಬೇಕು ಎಂದೂ ಭಾಸ್ಕರ್ ರಾವ್ ಸಲಹೆ ನೀಡಿದರು. ಕಾಲೇಜು ವಿದ್ಯಾಥಿ೯ಗಳಿಗೆ ಮತ್ತು ಪೊಲೀಸ್ ಸಿಬ್ಬಂದಿಗಳಿಗೂ ಅಗತ್ಯ ಕಾಯ೯ಕ್ರಮಗಳನ್ನು ಆಯೋಜಿಸುವಂತೆ ಅವರು ಕೋರಿದರು. ಕೊಡಗಿನಲ್ಲಿ ತಾವು ಪೊಲೀಸ್ ವರಿಷ್ಟಾಧಿಕಾರಿಯಾಗಿ ಕತ೯ವ್ಯ ಸಲ್ಲಿಸಿದ ದಿನಗಳು ತನ್ನ ಜೀವನದಲ್ಲಿಯೇ ಸ್ಮರಣೀಯವಾಗಿದೆ ಎಂದು ಹೆಮ್ಮೆಯಿಂದ ಹೇಳಿದಭಾಸ್ಕರರಾವ್, ಜಿಲ್ಲಾಕೇಂದ್ರ ಮಡಿಕೇರಿಯಲ್ಲಿ ಸಂಚಾರ ನಿಯಂತ್ರಣ ಸಂಬಂಧಿತ ಈಗಲೇ ಎಚ್ಚೆತ್ತುಕೊಂಡು ಸೂಕ್ತ ಪರಿಹಾರೋಪಾಯ ಕಂಡುಹುಡುಕದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಸಂಚಾರ ಸಮಸ್ಯೆಯ ಜತೆಗೇ ಪ್ರವಾಸಿಗರೂ ಮಡಿಕೇರಿಯಿಂದ ದೂರವಾಗುವ ಸಾಧ್ಯತೆ ನಿಚ್ಚಳವಾಗಿದೆ ಎಂದೂ ಕಿವಿಮಾತು ಹೇಳಿದರು. ಕೊಡಗು ಪೊಲೀಸ್ ವರಿಷ್ಟಾಧಿಕಾರಿ ಬಿಂದುಮಣಿ ಮಾತನಾಡಿ, ಕೊಡಗಿನಲ್ಲಿ ಮಾದಕ ವ್ಯಸನಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಕಳವಳಕಾರಿಯಾಗಿದ್ದು ರೆಡ್ ಕ್ರಾಸ್ ಮೂಲಕ ಮಾದಕ ವ್ಯಸನಪೀಡಿತರನ್ನು ಚಟಮುಕ್ತ ಮಾಡುವಂಥ ಕಾಯ೯ಕ್ರಮ ಆಯೋಜಿಸಬೇಕೆಂದು ಸಲಹೆ ನೀಡಿದರು. ಕಳೆದ 20 ದಿನಗಳಿಂದ ಕೊಡಗಿನ ಪ್ರತೀ ಪೊಲೀಸ್ ಠಾಣೆಗಳಿಗೂ ಭೇಟಿ ನೀಡಿ ಆಯಾ ಗ್ರಾಮ ವ್ಯಾಪ್ತಿಯಲ್ಲಿನ ಕಾನೂನು ಸಮಸ್ಯೆಗಳನ್ನು ತಳಿದುಕೊಂಡು ಸೂಕ್ತ ಪರಿಹಾರೋಪಾಯ ಕಂಡುಕೊಳ್ಳುವ ಪ್ರಯತ್ನದಲ್ಲಿದ್ದೇನೆ ಎಂದೂ ಅವರು ನುಡಿದರು.ರೆಡ್ ಕ್ರಾಸ್ ಕೊಡಗು ಘಟಕದ ಸಭಾಧ್ಯಕ್ಷ ಬಿ.ಕೆ. ರವೀಂದ್ರ ರೈ ಮಾತನಾಡಿ, ಜಿಲ್ಲೆಯಲ್ಲಿ ಪ್ರಸ್ತುತ ರೆಡ್ ಕ್ರಾಸ್ ನಲ್ಲಿ 350 ಸದಸ್ಯರಿದ್ದು ಮುಂದಿನ ದಿನಗಳಲ್ಲಿ ಸೋಮವಾರಪೇಟೆ, ವೀರಾಜಪೇಟೆಯಲ್ಲಿಯೂ ಘಟಕ ಪ್ರಾರಂಭಿಸಿ ಸದಸ್ಯತ್ವವನ್ನು ಹೆಚ್ಚಿಸಲಾಗುತ್ತದೆ. ಮಹಿಳೆಯರಿಗಾಗಿ ಕ್ಯಾನ್ಸರ್ ತಪಾಸಣಾ ಶಿಬಿರವನ್ನೂ ಶೀಘ್ರದಲ್ಲಿಯೇ ಆಯೋಜಿಸಲಾಗುತ್ತದೆ ಎಂದೂ ರವೀಂದ್ರ ರೈ ಮಾಹಿತಿ ನೀಡಿದರು. ಮಳೆಗಾಲದಲ್ಲಿ ರೆಡ್ ಕ್ರಾಸ್ ಭವನದಲ್ಲಿ ಕಾಳಜಿ ಕೇಂದ್ರದ ಮೂಲಕ ನಿರಾಶ್ರಿತರಿಗೆ ಆಶ್ರಯ ನೀಡಲಾಗುತ್ತಿದೆ. ಈ ಭವನದ ಮೇಲಂತಸ್ತಿನ ನಿಮಾ೯ಣ ಕಾಯ೯ವನ್ನು ಈ ವಷ೯ದಲ್ಲಿಯೇ ಕೈಗೊಳ್ಳಲಾಗುತ್ತದೆ ಎಂದೂ ಅವರು ಹೇಳಿದರು. ರೆಡ್ ಕ್ರಾಸ್ ಕೊಡಗು ಘಟಕದ ಉಪಾಧ್ಯಕ್ಷ ಅನಿಲ್ ಹೆಚ್.ಟಿ, ನಿರೂಪಿಸಿದ ಕಾಯ೯ಕ್ರಮದಲ್ಲಿ ಖಜಾಂಚಿ ಪ್ರಸಾದ್ ಗೌಡ ವೇದಿಕೆಯಲ್ಲಿದ್ದರು. ರೆಡ್ ಕ್ರಾಸ್ ಪ್ರಮುಖರಾದ ಎಸ್. ಸಿ. ಸತೀಶ್, ಮಧುಕರ್, ಉತ್ತಯ್ಯ, ಸತೀಶ್ ರೈ, ವಿಜಯ್ ರೈ,, ವಸಂತ್,ಪ್ರಭಾಕರ್, ಲೋಕೇಶ್ ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*

ಮಾರ್ಚ್ 7, 2026

*ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಮಾ.7 : ವಿರಾಜಪೇಟೆ ಮೂಲದ ಪ್ರಸ್ತುತ ಮೈಸೂರಿನ ಸಿದ್ಧಾರ್ಥ ನಗರದಲ್ಲಿ ನೆಲೆಸಿರುವ ಕೆ.ಎಲ್.ಸೂರಜ್ (29) ಅವರು…

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.