
ನಾಪೋಕ್ಲು ಜ.27 NEWS DESK : ಸ್ಥಳೀಯ ಡಾ. ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶಾಲಾ ಸಂಘಗಳ ಸಮಾರೋಪ ಕಾರ್ಯಕ್ರಮ ಹಾಗೂ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಡಾಕ್ಟರ್ ಬಾದ್ ಷಾ ಮಾತನಾಡಿ, ಮಕ್ಕಳ ತಜ್ಞರು ಆಗಮಿಸಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಕಿವಿಮಾತನ್ನು ಹೇಳುತ್ತಾ ಭವಿಷ್ಯದ ಗುರಿಯತ್ತ ಸಾಗುವ ದೃಢ ನಿರ್ಧಾರ ತೆಗೆದುಕೊಂಡು ಸತತ ಪ್ರಯತ್ನದಿಂದ ಯಶಸ್ಸಿನ ಕಡೆಗೆ ಸಾಗಿರಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲಾ ಪ್ರಾಂಶುಪಾಲರಾದ ಕೆ.ಡಿ.ನೀತಾ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು ಮತ್ತು ಪ್ರಯತ್ನ ಅವರನ್ನು ರೂಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು. ಕಾರ್ಯಕ್ರಮದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ನಡೆದ 17 ವರ್ಷದೊಳಗಿನ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ಅಮೃತ ಎಂ.ಹೆಚ್ ಮತ್ತು 9ನೇ ತರಗತಿಯ ವಿದ್ಯಾರ್ಥಿ ಮನ್ವಿತ್ ಪಿ.ಜೆ ಈ ಇಬ್ಬರು ವಿದ್ಯಾರ್ಥಿಗಳು ವೇಗದ ನಡಿಗೆಯಲ್ಲಿ, ಹಾಸನದಲ್ಲಿ ನಡೆದ 14 ವರ್ಷದೊಳಗಿನ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಾದ ರಚಿತ ಪಿ.ಯು ಮತ್ತು ಜೋಶ್ವಾ ಜೆ ಹಾಗೂ ಕ್ರೀಡಾ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ನಿಶಾ ಮತ್ತು ತಂಡದವರು ಪ್ರಾರ್ಥಿಸಿ ಹಿಂದಿ ಶಿಕ್ಷಕರಾದ ಕವಿತಾ ಸ್ವಾಗತಿಸಿದರು. ಸಮಾಜ, ಗಣಿತ ಶಿಕ್ಷಕರಾದ ಎಲ್ಸಿ, ವಿಜ್ಞಾನ ಶಿಕ್ಷಕ ಲಕ್ಷ್ಮಣ ಕಾರ್ಯಕ್ರಮವನ್ನು ನಿರೂಪಿಸಿದರು. ಶಿಕ್ಷಕರಾದ ರೇಷ್ಮಾ ಶಾಲೆಯ ವಾರ್ಷಿಕ ವರದಿಯನ್ನು ಕನ್ನಡ ಶಿಕ್ಷಕಿ ರೂಪ ಮತ್ತು ಛಾಯಾ ಕ್ರೀಡಾಸಾಧಕರ ವರದಿಯನ್ನು ವಾಚಿಸಿ ಸುಶ್ಮಿತಾ ವಂದಿಸಿದರು. ಕಾರ್ಯಕ್ರಮದಲ್ಲಿ ಬೋಧಕ ಮತ್ತು ಬೋಧಕೇತರ ವೃಂದದವರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಒಳಾಂಗಣ ಆಟದ ಸ್ಪರ್ಧೆ ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.
ವರದಿ : ದುಗ್ಗಳ ಸದಾನಂದ.









