
ಕೊಡ್ಲಿಪೇಟೆ ಜ.27 NEWS DESK : ಕೊಡ್ಲಿಪೇಟೆ ಕಲ್ಲುಮಠದ ಎಸ್.ಕೆ.ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಡಾ. ಧನಿಕಾ ಸಿ.ಎಸ್ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕೊಡ್ಲಿಪೇಟೆ ಕಂದಾಯಾಧಿಕಾರಿ ಎನ್.ಜೆ.ಮನಕುಮಾರ್ ಮಾತನಾಡಿ ದಿನದ ಮಹತ್ವದ ಬಗ್ಗೆ ವಿವರಿಸಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಶ್ರೀ ಮಹಾಂತ ಸ್ವಾಮೀಜಿಗಳು ಆರ್ಶೀವಚನ ನೀಡಿ ವಿದ್ಯಾರ್ಥಿಗಳು ಶಿಸ್ತು, ಮೌಲ್ಯಗಳು ಹಾಗೂ ಉತ್ತಮ ಚಟುವಟಿಕೆಗಳನ್ನು ಅಳವಡಿಸಿಕೊಂಡರೆ ಉತ್ತಮ ನಾಗರಿಕರಾಗಿ ರಾಷ್ಟ್ರವನ್ನು ಬಲಪಡಿಸಲು ಸಾಧ್ಯವೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಡಿ.ಎಸ್.ವಿಶ್ವನಾಥ್, ಕಾರ್ಯದರ್ಶಿ ಎಚ್.ಎಂ.ದಿವಾಕರ್, ನಿರ್ದೇಶಕರಾದ ಎಸ್.ಎಸ್.ಶಿವಶೇಖರ ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕರಾದ ಅಭಿಲಾಷ ಹೆಚ್.ಎಂ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನಸೂರೆಗೊಂಡರು.









