Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ : ಗಣ್ಯರಿಂದ ಗೌರವ ನಮನ ಸಲ್ಲಿಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ : ಗಣ್ಯರಿಂದ ಗೌರವ ನಮನ ಸಲ್ಲಿಕೆ*

ಜನವರಿ 28, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.28 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ 127 ನೇ ಜನ್ಮ ದಿನಾಚರಣೆ ಪ್ರಯುಕ್ತ ಬುಧವಾರ ನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಗೆ ಗಣ್ಯರು ಪುಷ್ಪಾರ್ಚನೆ ನೆರವೇರಿಸಿ, ಗೌರವ ನಮನ ಸಲ್ಲಿಸಿದರು. ಏರ್ ಮಾರ್ಷಲ್(ನಿವೃತ್ತ) ನಂದ ಕಾರ್ಯಪ್ಪ, ಮಾಜಿ ಸಚಿವರಾದ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂಧುಮಣಿ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ, ತಹಶೀಲ್ದಾರ್ ಶ್ರೀಧರ, ಡಿವೈಎಸ್‍ಪಿಗಳಾದ ಸೂರಜ್, ಮೇದಪ್ಪ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಎಂ.ಪಿ.ಮುತ್ತಪ್ಪ, ಓಂಕಾರೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಪದ್ಮಶ್ರೀ ಪ್ರಶಸ್ತಿ ಪುರಸ್ಕøತರಾದ ರಾಣಿ ಮಾಚಯ್ಯ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ ಕುಶಾಲಪ್ಪ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯರಾದ ಪುತ್ತರಿರ ಪಪ್ಪು ತಿಮ್ಮಯ್ಯ, ಚೊಟ್ಟೆಯಂಡ ಸಂಜು ಕಾವೇರಪ್ಪ, ಕಂಬೆಯಂಡ ಡೀನಾ ಬೋಜಣ್ಣ, ಪಿ.ಕೆ.ಕುಟ್ಟಪ್ಪ ಬೊಳ್ಳಜೀರ ಅಯ್ಯಪ್ಪ, ಪ್ರಮುಖರಾದ ಕೊಕ್ಕಲೆಮಾಡ ಮಂಜುಚಿಣ್ಣಪ್ಪ, ನಾಪಂಡ ರವಿಕಾಳಪ್ಪ, ಬಿ.ಎಸ್.ತಮ್ಮಯ್ಯ, ಉಳ್ಳಿಯಡ ಎಂ.ಪೂವಯ್ಯ, ನಗರಸಭೆ ಸದಸ್ಯರಾದ ಸತೀಶ್, ಅನಿತಾ ಪೂವಯ್ಯ, ಸಬಿತಾ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಮಾಜಿ ಸೈನಿಕರ ಗೌರವ ಅಧ್ಯಕ್ಷರಾದ ಸೋಮಣ್ಣ, ಪಾಲೆಂಗಡ ಅಮಿತ್, ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷರಾದ ಟಿ.ಸುಬ್ಬಯ್ಯ, ಬಿ.ಅಶ್ವಥ್, ವಿನು, ಚೆಯ್ಯಂಡ ಸತ್ಯ, ಸೂರಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಸ್ಕೌಟ್ಸ್ ಆಯುಕ್ತರಾದ ಜಿಮ್ಮಿ ಸ್ವೀಕ್ವೇರಾ, ಸ್ಕೌಟ್ಸ್ ಮತ್ತು ಗೈಡ್ಸ್‍ನ ಸಂಘಟಕರಾದ ದಮಯಂತಿ, ಸುಲೋಚನ, ಗಣೇಶ್, ಅವರೆಮಾದಂಡ ಶರಣ್, ಮಾಜಿ ಸೈನಿಕರು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಅಭಿಮಾನಿಗಳು ಇತರರು ಹೂಗುಚ್ಛ ಇಟ್ಟು ಪುಷ್ಪಾರ್ಚನೆ ನೆರವೇರಿಸಿ, ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಶಿಸ್ತು, ಸಮಯ ಪ್ರಜ್ಞೆ ಪ್ರತಿಯೊಬ್ಬರಿಗೂ ಮಾದರಿ. ಆ ನಿಟ್ಟಿನಲ್ಲಿ ರಾಷ್ಟ್ರದ ಪ್ರಥಮ ಮಹಾ ದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರನ್ನು ಸದಾ ಸ್ಮರಿಸುವಂತಾಗಬೇಕು ಎಂದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜೀವನ ಚರಿತ್ರೆ ಪ್ರತಿಯೊಬ್ಬರಿಗೂ ಆದರ್ಶವಾಗಿದ್ದು, ಅವರು ಸೇನಾ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಅನನ್ಯ ಎಂದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ, ಜನರಲ್ ತಿಮ್ಮಯ್ಯ, ಮಂಗೇರಿರ ಮುತ್ತಣ್ಣ, ಸ್ಕ್ವಾಡರ್ನ್ ಲೀಡರ್ ಅಜ್ಜಮಾಡ ದೇವಯ್ಯ ಪ್ರತಿಮೆ ಸೇರಿದಂತೆ ಮಡಿಕೇರಿ ನಗರದಲ್ಲಿರುವ ಎಲ್ಲಾ ಪ್ರತಿಮೆಗಳನ್ನು ಜಿಲ್ಲಾಡಳಿತ ಸಂರಕ್ಷಿಸಬೇಕು ಎಂದು ಎಂ.ಸಿ.ನಾಣಯ್ಯ ಅವರು ಇದೇ ಸಂದರ್ಭದಲ್ಲಿ ಸಲಹೆ ಮಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಸೇನಾ ಕ್ಷೇತ್ರದಲ್ಲಿನ ಸೇವೆ ಇಂದಿನ ಯುವಜನರಿಗೆ ಮಾದರಿ ಎಂದು ತಿಳಿಸಿದರು. ಶಿಸ್ತು, ಶ್ರದ್ಧೆ ಮತ್ತು ಸಮಯ ಪ್ರಜ್ಞೆಗೆ ಹೆಸರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ರಾಷ್ಟ್ರದ ರಕ್ಷಣಾ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ವಿವರಿಸಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ಮಾತನಾಡಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಕೊಡಗು ಮಣ್ಣಿನಲ್ಲಿ ಹುಟ್ಟಿ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದ್ದಾರೆ ಎಂದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಶಿಸ್ತಿನ ಸಿಪಾಯಿ ಆಗಿ ಭಾರತೀಯ ಸೇನೆಯಲ್ಲಿ ವಿಶೇಷ ಸ್ಥಾನವನ್ನು ಪಡೆದಿದ್ದರು ಎಂದು ತಿಳಿಸಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ರಾಷ್ಟ್ರ ಕಂಡ ಸೇನಾ ಮಹಾದಂಡನಾಯಕರಾಗಿ ಅದರಂತೆ ನಡೆದುಕೊಂಡರು. ಅಷ್ಟರಮಟ್ಟಿಗೆ ಸೇನಾ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದರು ಎಂದು ತಿಳಿಸಿದರು. ಸಾಹಿತಿ ಮುಲ್ಲೇಂಗಡ ರೇವತಿ ಪೂವಯ್ಯ ಅವರು ಮಾತನಾಡಿ ಭಾರತದ ಸೇನಾ ಕ್ಷೇತ್ರದಲ್ಲಿನ ಕಣ್ಮಣಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಎಂದು ನುಡಿದರು. ಭೂಸೇನೆ, ವಾಯುಸೇನೆ, ನೌಕಸೇನೆ ಈ ಮೂರು ವಿಭಾಗಗಳ ಕಮಾಂಡರ್ ಇನ್ ಚೀಪ್ ಆಗಿ ನೇಮಕಗೊಂಡು ಸ್ವಾತಂತ್ರ್ಯ ಭಾರತದ ಮೊಟ್ಟ ಮೊದಲ ಭಾರತೀಯ ಮಹಾ ದಂಡನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು ಎಂದು ಹೇಳಿದರು. ಕೆ.ಎಂ.ಕಾರ್ಯಪ್ಪ ಅವರ ಕಾರ್ಯಕ್ಷಮತೆ, ದೇಶ ಪ್ರೇಮ, ಸೇನೆಗೆ ನೀಡಿರುವ ಅಪಾರ ಕೊಡುಗೆ ಪರಿಗಣಿಸಿ ಫೀಲ್ಡ್ ಮಾರ್ಷಲ್ ಅತ್ಯುನ್ನತ್ತ ಪ್ರಶಸ್ತಿಯನ್ನು ಸರ್ಕಾರ ನೀಡಿ, ಗೌರವಿಸಿದೆ ಎಂದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಕರ್ತವ್ಯ ನಿಷ್ಠೆ ಹಾಗೂ ಸಮಯ ಪಾಲನೆಗೆ ಹೆಚ್ಚು ಮಹತ್ವ ನೀಡುತ್ತಿದ್ದರು. ನಿಮ್ಮ ಕೆಲಸವನ್ನು ಯಾರದರೂ ಗಮನಿಸುತ್ತಿರುವಾಗ ಮಾಡುವುದಕ್ಕಿಂತ ಉತ್ತಮವಾಗಿ ಯಾರೂ ಗಮನಿಸದೇ ಇದ್ದಾಗ ಹೆಚ್ಚು ಶ್ರಮವಹಿಸಿ ಕೆಲಸ ಮಾಡಿ. ಎಲ್ಲಾ ಸಮಯದಲ್ಲಿ ಸಮಯ ಪಾಲನೆಯನ್ನು ರೂಢಿಸಿಕೊಳ್ಳಿ ಎನ್ನುತ್ತಿದ್ದರು ಎಂದು ರೇವತಿ ಪೂವಯ್ಯ ಅವರು ತಿಳಿಸಿದರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಆಡಿಯೋ ಸಂದೇಶವನ್ನು ಇದೇ ಸಂದರ್ಭದಲ್ಲಿ ತಿಳಿಸಲಾಯಿತು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ದೇಶಭಕ್ತಿ, ರಾಷ್ಟ್ರಪ್ರೇಮವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಅವರಲ್ಲಿದ್ದ ನಾಗರಿಕ ಪ್ರಜ್ಞೆ ಮೆಚ್ಚುವಂತದ್ದು ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು. ಪ್ರತಿಯೊಬ್ಬರೂ ಶಿಸ್ತು ಮತ್ತು ಸಮಯ ಪ್ರಜ್ಞೆಯಿಂದ ಬದುಕು ನಡೆಸುವುದು ಹೇಗೆ ಎಂಬುದಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರೇ ಮಾದರಿ ಎಂದು ಹೇಳಿದರು. ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಅವರು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆಗೆ ಶುಭ ಸಂದೇಶ ಕಳುಹಿಸಿದ್ದರು. ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ರಾಷ್ಟ್ರಗೀತೆ ಹಾಡಿದರು. ನಗರದ ಸಂತ ಮೈಕಲರ ಗೈಡ್ಸ್ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ಸಿ.ಅನಿತಾ ನಿರೂಪಿಸಿ, ಸ್ವಾಗತಿಸಿದರು. ಪಥಸಂಚಲನ: ಕಾರ್ಯಕ್ರಮಕ್ಕೂ ಮೊದಲು ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗಣ್ಯರು ಪಥಸಂಚಲನಕ್ಕೆ ಚಾಲನೆ ನೀಡಿದರು. ಪಥ ಸಂಚಲನದಲ್ಲಿ ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳಿಂದ ವಾದ್ಯವೃಂದ ನಡೆಯಿತು. ನಗರದ ವಿವಿಧ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು, ಶಿಕ್ಷಕರು, ಮಾಜಿ ಸೈನಿಕರು ಇತರರು ಪಾಲ್ಗೊಂಡಿದ್ದರು. ಎಫ್‍ಎಂಸಿ ಮತ್ತು ಜಿಟಿ ಪೌಂಡೇಷನ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ಅಚ್ಚುಕಟ್ಟಾಗಿ ಜರುಗಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.