Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಶಾಸಕರ ನಡೆಯಿಂದ ಕಾಂಗ್ರೆಸ್ ನ ದ್ವಿಮುಖ ಸಿದ್ಧಾಂತ ಬಯಲಾಗಿದೆ : ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಟೀಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಶಾಸಕರ ನಡೆಯಿಂದ ಕಾಂಗ್ರೆಸ್ ನ ದ್ವಿಮುಖ ಸಿದ್ಧಾಂತ ಬಯಲಾಗಿದೆ : ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಟೀಕೆ*

ಜನವರಿ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.28 NEWS DESK : ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ 100 ವರ್ಷ ತುಂಬಿದ ಹಿನ್ನೆಲೆ ಕುಶಾಲನಗರದಲ್ಲಿ ನಡೆದ ‘ಹಿಂದೂ ಸಂಗಮ’ ಶೋಭಾಯಾತ್ರೆಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕರು ಪಾಲ್ಗೊಳ್ಳುವ ಮೂಲಕ ಕಾಂಗ್ರೆಸ್ ನ ದ್ವಿಮುಖ ಸಿದ್ಧಾಂತವನ್ನು ಬಯಲು ಮಾಡಿದ್ದಾರೆ ಎಂದು ಕೊಡಗು ಜಿಲ್ಲಾ ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಕೆ.ಜಿ.ಜಾಶಿರ್ ಅವರು ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಆರ್‍ಎಸ್‍ಎಸ್ ಸಿದ್ಧಾಂತವನ್ನು ತೀವ್ರವಾಗಿ ವಿರೋಧಿಸುವುದಾಗಿ ಕಾಂಗ್ರೆಸ್ ಪಕ್ಷದ ರಾಷ್ಟ್ರ ಮತ್ತು ರಾಜ್ಯ ಮಟ್ಟದ ನಾಯಕರು ಘೋಷಿಸುತ್ತಲೇ ಬಂದಿದ್ದಾರೆ. ಆದರೆ ಮಡಿಕೇರಿ ಕ್ಷೇತ್ರದ ಶಾಸಕರು ಕಾಂಗ್ರೆಸ್ ನಾಯಕರ ಪ್ರತಿಪಾದನೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಶಾಸಕರ ಈ ನಡೆಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಪ್ರಮುಖರು ಒಪ್ಪಿಕೊಳ್ಳುತ್ತಾರೆಯೇ ಅಥವಾ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಾದಲ್ಲಿ ಮೌನಕ್ಕೆ ಶರಣಾಗಿರುವುದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಜಾತ್ಯತೀತ ಜನತಾದಳ ಯಾವುದೇ ಜಾತಿ, ಧರ್ಮ, ಜನಾಂಗ ಮತ್ತು ಸಂಘ ಸಂಸ್ಥೆಗಳ ವಿರೋಧಿಯಲ್ಲ. ಅಲ್ಪಸಂಖ್ಯಾತರ ಓಲೈಕೆಗಾಗಿ ಆರ್‍ಎಸ್‍ಎಸ್ ನ್ನು ಮುಂದೆಯಿಂದ ಟೀಕಿಸಿ ಹಿಂಬಾಗಿಲಿನಿಂದ ಸ್ವಾಗತಿಸುವ ಕಾಂಗ್ರೆಸ್ ಪಕ್ಷದ ಕ್ಲುಲ್ಲಕ ರಾಜಕಾರಣವನ್ನು ಸಮಾಜಕ್ಕೆ ತಿಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಕಾಂಗ್ರೆಸ್ ಶಾಸಕರ ಹಾಗೂ ನಾಯಕರ ದ್ವಿಮುಖ ಸಿದ್ಧಾಂತ ಅಲ್ಪಸಂಖ್ಯಾತರನ್ನು ಗೊಂದಲಕ್ಕೀಡು ಮಾಡುತ್ತಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿರುವ ಅಲ್ಪಸಂಖ್ಯಾತ ನಾಯಕರಿಗೆ ಈ ಬೆಳವಣಿಗೆಯಿಂದ ಯಾವುದೇ ಮುಜುಗರ ಉಂಟಾಗದೇ ಇರುವುದು ಆಶ್ಚರ್ಯಕ್ಕೆ ಕಾರಣವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಜೆಡಿಎಸ್ ನ್ನು ಬಿಜೆಪಿ ಪಕ್ಷದ ‘ಬಿ’ ಟೀಮ್ ಎಂದು ಟೀಕಿಸುವ ಕಾಂಗ್ರೆಸ್ ನಾಯಕರು ಮಡಿಕೇರಿ ಶಾಸಕರ ನಡೆಯ ಬಗ್ಗೆ ಸ್ಪಷ್ಟನೆ ನೀಡಲಿ ಎಂದು ಕೆ.ಜಿ.ಜಾಶಿರ್ ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿದ್ದರೂ ಬೆಂಗಳೂರಿನ ಒಂದು ಬಡಾವಣೆಯಲ್ಲಿ ಬುಳ್ಡೋಝರ್ ಬಳಸಿ ಅಲ್ಪಸಂಖ್ಯಾತರ ಮನೆಗಳನ್ನು ನೆಲಸಮ ಮಾಡಲಾಗಿದೆ. ಇದೀಗ ನಾಪೋಕ್ಲುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಶಾದಿ ಮಹಲ್ ವಿಚಾರದಲ್ಲಿ ಗೊಂದಲ ಸೃಷ್ಟಿಸಲಾಗಿದೆ. ದಾಖಲಾತಿ ನೋಡದೆ ಶಾದಿ ಮಹಲ್ ನಿರ್ಮಾಣ ಕಾರ್ಯ ಹೇಗೆ ಆರಂಭವಾಯಿತು ಎನ್ನುವ ಪ್ರಶ್ನೆ ಮೂಡುತ್ತಿದೆ. ಒಟ್ಟಿನಲ್ಲಿ ದ್ವಿಮುಖ ಸಿದ್ಧಾಂತದ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರನ್ನು ಕೇವಲ ಓಟ್ ಬ್ಯಾಂಕ್ ಗಾಗಿ ಮಾತ್ರ ಬಳಸಿಕೊಳ್ಳುತ್ತಿದೆ. ಇದನ್ನು ಆ ಪಕ್ಷದ ಅಲ್ಪಸಂಖ್ಯಾತ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.