Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*
  • *ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*
  • *ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರ ವಿಜೇತ ತಂಡಗಳು*
  • *ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ವಾರ್ಷಿಕ ಪ್ರತಿಷ್ಠಾ ದಿನಾಚರಣೆ : ನೂತನವಾಗಿ ನವಗ್ರಹ ಪ್ರತಿಷ್ಠಾಪನೆ*
  • *ಭಯೋತ್ಪಾದಕ ಹೇಳಿಕೆ : ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೊಡಗು ಬಿಜೆಪಿ ತೀವ್ರ ಅಸಮಾಧಾನ*
  • *ಕಾಂಗ್ರೆಸ್ ವಿರುದ್ಧ ಸುನ್ನಿ ಸಮನ್ವಯ ಸಮಿತಿ ಅಸಮಾಧಾನ : ಮುಸ್ಲಿಮರನ್ನು ಕಡೆಗಣಿಸದಂತೆ ಆಗ್ರಹ*
  • *ಅಕ್ಕಪಡೆಯಿಂದ ಮಡಿಕೇರಿಯ ವಿವಿಧೆಡೆ ತುರ್ತು ಸಹಾಯವಾಣಿಗಳ ಕುರಿತು ಜಾಗೃತಿ*
  • *ಚಿಕ್ಕತ್ತೂರುವಿನಲ್ಲಿ ಹುಲಿ ಮಿತ್ರ ಕ್ರಿಕೆಟ್ ಪಂದ್ಯಾವಳಿ : ದುಬಾರೆ ಟೈಗರ್‌ ತಂಡ ಪ್ರಥಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ನಿಂದ ಕಾರ್ಯಪ್ಪ ಜನ್ಮದಿನಾಚರಣೆ ಮತ್ತು ರಸ್ತೆ ಸುರಕ್ಷತಾ ಸಪ್ತಾಹ : ಫೀ.ಮಾ.ಕಾರ್ಯಪ್ಪ ಅವರ ಸೇನಾ ಕಾರ್ಯಗಳು ವಿಶ್ವಕ್ಕೆ ಮಾದರಿ : ಬೇಬಿ ಮ್ಯಾಥ್ಯು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ನಿಂದ ಕಾರ್ಯಪ್ಪ ಜನ್ಮದಿನಾಚರಣೆ ಮತ್ತು ರಸ್ತೆ ಸುರಕ್ಷತಾ ಸಪ್ತಾಹ : ಫೀ.ಮಾ.ಕಾರ್ಯಪ್ಪ ಅವರ ಸೇನಾ ಕಾರ್ಯಗಳು ವಿಶ್ವಕ್ಕೆ ಮಾದರಿ : ಬೇಬಿ ಮ್ಯಾಥ್ಯು*

ಜನವರಿ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.28 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಭಾರತೀಯ ಸೇನೆಯಲ್ಲಿನ ಮಹತ್ವದ ಕಾರ್ಯಗಳು ಇಡೀ ವಿಶ್ವಕ್ಕೆ ಮಾದರಿ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಬೇಬಿ ಮ್ಯಾಥ್ಯು ಹೇಳಿದರು. ಭಾರತ್ ಸ್ಕೌಟ್ಸ್ ಮತ್ತು ಗೈಟ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆ ವತಿಯಿಂದ ನಗರದ ಕೊಡಗು ವಿದ್ಯಾಲಯ ಶಾಲೆಯ ಸಭಾಂಗಣದಲ್ಲಿ ನಡೆದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮದಿನಾಚರಣೆ ಮತ್ತು ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ದೇಶದ ಪ್ರಥಮ ಮಹಾ ದಂಡನಾಯಕರಾಗಿ ಭಾರತೀಯ ಸೇನೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಸೇನಾ ಸಾಧನೆಯನ್ನು ಸ್ಮರಿಸುವಂತಾಗಬೇಕು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಮತ್ತು ಜನರಲ್ ಕೆ.ಎಸ್.ತಿಮ್ಮಯ್ಯ ಅವರು ಕೊಡಗಿನ ಕಣ್ಮಣಿಗಳು ಎಂದು ಅವರು ಹೇಳಿದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ಸಮಯಪ್ರಜ್ಞೆ, ಶಿಸ್ತಿಗೆ ಹೆಸರುವಾಸಿಯಾಗಿದ್ದರು. ಅವರಂತೆ ಏರ್ ಮಾರ್ಷಲ್(ನಿವೃತ್ತ) ಕಾರ್ಯಪ್ಪ ಅವರು ಕೂಡ ಭಾರತೀಯ ಸೇನೆಗೆ ತಮ್ಮದೇಯಾದ ಕೊಡುಗೆ ನೀಡಿದ್ದಾರೆ. ಇಂತಹ ಧೀಮಂತ ನಾಯಕರು ಹುಟ್ಟಿದ ನಾಡಲ್ಲಿ ನಾವು ಹುಟ್ಟಿರುವುದು ಭಾಗ್ಯವಂತರು ಎಂದು ಹೇಳಿದರು. ವಿದ್ಯಾರ್ಥಿಗಳು ರಸ್ತೆ ನಿಯಮಗಳನ್ನು ಪರಿಪಾಲನೆ ಮಾಡಬೇಕು. ದುಶ್ಚಟಗಳಿಗೆ ದಾಸರಾಗದೆ ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು. ಭವ್ಯ ಭಾರತದ ಪ್ರಜೆಗಳಾಗಿ ಉತ್ತಮ ಸಮಾಜವನ್ನು ನಿರ್ಮಾಣ ಮಾಡಬೇಕು. ಆ ಮೂಲಕ ಈ ನಾಡಿಗೆ ದೇಶಕ್ಕೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್, ಎನ್‍ಸಿಸಿ, ಎನ್‍ಎಸ್‍ಎಸ್‍ಗಳಿಗೆ ಸೇರಿಕೊಂಡು ಶಿಸ್ತಿನ ಸಿಪಾಯಿಗಳಾಗಬೇಕು ಎಂದು ಕರೆ ನೀಡಿದರು. ಗೈಡ್ಸ್ ಜಿಲ್ಲಾ ತರಬೇತಿ ಆಯುಕ್ತರಾದ ಮೈಥಿಲಿ ರಾವ್ ಮಾತನಾಡಿ, ದೇಶಕ್ಕೆ ತನ್ನದೇ ಆದ ಕೊಡುಗೆ ನೀಡಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಜನ್ಮದಿನವನ್ನು ಎಲ್ಲರೂ ಸಂಭ್ರಮಿಸಬೇಕು ಎಂದರು. ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಜಿಲ್ಲೆಯಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಇದೀಗ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ರಸ್ತೆ ಸುರಕ್ಷತೆಯ ನಿಯಮಗಳನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭ ದೇಶ ಭಕ್ತಿ ಗೀತೆಯನ್ನು ಹಾಡುವ ಮೂಲಕ ವಿದ್ಯಾರ್ಥಿಗಳಲ್ಲಿ ದೇಶಾಭಿಮಾನವನ್ನು ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್, ವಿದ್ಯಾರ್ಥಿಗಳು ಸ್ಕೌಟ್ಸ್-ಗೈಡ್ಸ್, ಎನ್‍ಸಿಸಿ, ಕ್ರೀಡೆ ಸೇರಿದಂತೆ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ಹೆಚ್ಚಿಸಿಕೊಳ್ಳಬೇಕು. ಪುಸ್ತಕ, ಸಾಮಾಜಿಕ ಜಾಲತಾಣವನ್ನು ಸದುಪಯೋಗ ಪಡಿಸಿಕೊಂಡು ಅದರಲ್ಲಿನ ಮಾಹಿತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಹಾಗೂ ಇತರರಿಗೂ ಮಾಹಿತಿ ನೀಡಬೇಕು. ವಾಹನದಲ್ಲಿ ಚಲಿಸುವಾಗ ಮಾತ್ರವಲ್ಲದೆ ನಡೆಯುವಾಗಲೂ ನಿಯಮವನ್ನು ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಕೊಡಗು ವಿದ್ಯಾಲಯದ ಪ್ರಾಂಶುಪಾಲೆ ಕೆ.ಎಸ್.ಸುಮಿತ್ರ, ಆಡಳಿತಾಧಿಕಾರಿ ಪಿ.ರವಿ, ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಎನ್.ಯು.ನೀಲಮ್ಮ, ಅರುಣ್ ಕುಮಾರ್, ಕಾರ್ಯದರ್ಶಿಗಳಾದ ಸುಚಿತಾ ಕಾವೇರಪ್ಪ, ಎಂ.ಟಿ.ಸೂರಜ್ ಕುಮಾರ್, ಪದಾಧಿಕಾರಿಗಳಾದ ಗುಲ್‍ಶನ್, ಕೆ.ಮಮತ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿಗಳಾದ ಅಪ್ಪಯ್ಯ, ತವಶಿ ಸ್ವಾಗತಿಸಿ, ನಿರೂಪಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್ ವಂದಿಸಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪ ನಮನ ಸಲ್ಲಿಸಿದರು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆ, ರಸ್ತೆ ಸುರಕ್ಷತೆ ಕುರಿತು ನಡೆದ ನೃತ್ಯ ಗಮನ ಸೆಳೆಯಿತು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜನ್ಮದಿನಾಚರಣೆ ಹಾಗೂ ರಸ್ತೆ ಸುರಕ್ಷತೆ ಕುರಿತು ವಿದ್ಯಾರ್ಥಿಗಳಿಗೆ ನಡೆಸಲಾದ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*

ಏಪ್ರಿಲ್ 21, 2026

*ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*

ಏಪ್ರಿಲ್ 21, 2026

*ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*

ಏಪ್ರಿಲ್ 21, 2026

*ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*

ಏಪ್ರಿಲ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.20 NEWS DESK : ಕುಂಜಿಲ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮೇ6 ರಿಂದ 10ರವರೆಗೆ ಕಕ್ಕಬ್ಬೆಯ ಪ್ರೌಢ ಶಾಲಾ…

*ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರ ವಿಜೇತ ತಂಡಗಳು*

ಏಪ್ರಿಲ್ 21, 2026

*ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ವಾರ್ಷಿಕ ಪ್ರತಿಷ್ಠಾ ದಿನಾಚರಣೆ : ನೂತನವಾಗಿ ನವಗ್ರಹ ಪ್ರತಿಷ್ಠಾಪನೆ*

ಏಪ್ರಿಲ್ 21, 2026

*ಭಯೋತ್ಪಾದಕ ಹೇಳಿಕೆ : ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೊಡಗು ಬಿಜೆಪಿ ತೀವ್ರ ಅಸಮಾಧಾನ*

ಏಪ್ರಿಲ್ 21, 2026

*ಕಾಂಗ್ರೆಸ್ ವಿರುದ್ಧ ಸುನ್ನಿ ಸಮನ್ವಯ ಸಮಿತಿ ಅಸಮಾಧಾನ : ಮುಸ್ಲಿಮರನ್ನು ಕಡೆಗಣಿಸದಂತೆ ಆಗ್ರಹ*

ಏಪ್ರಿಲ್ 21, 2026

*ಅಕ್ಕಪಡೆಯಿಂದ ಮಡಿಕೇರಿಯ ವಿವಿಧೆಡೆ ತುರ್ತು ಸಹಾಯವಾಣಿಗಳ ಕುರಿತು ಜಾಗೃತಿ*

ಏಪ್ರಿಲ್ 20, 2026

*ಚಿಕ್ಕತ್ತೂರುವಿನಲ್ಲಿ ಹುಲಿ ಮಿತ್ರ ಕ್ರಿಕೆಟ್ ಪಂದ್ಯಾವಳಿ : ದುಬಾರೆ ಟೈಗರ್‌ ತಂಡ ಪ್ರಥಮ*

ಏಪ್ರಿಲ್ 20, 2026

*ಕೊಡಗು ಸೈನಿಕ ಶಾಲೆಯಲ್ಲಿ ದಕ್ಷಿಣ ವಲಯದ ಅಂತರ ಗುಂಪು ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಏಪ್ರಿಲ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.