Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
  • *ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*
  • *ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*
  • *ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಫೆ.1 ರಿಂದ ಸ್ವಚ್ಛ ಕುಶಾಲನಗರ ಅಭಿಯಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಫೆ.1 ರಿಂದ ಸ್ವಚ್ಛ ಕುಶಾಲನಗರ ಅಭಿಯಾನ*

ಜನವರಿ 29, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜ.29 NEWS DESK :  ರೋಟರಿ ಕುಶಾಲನಗರ ಮೂಲಕ ಹಸಿ ಕಸದ ನಿರ್ವಹಣೆ ಯೋಜನೆಯೊಂದಿಗೆ ಸ್ವಚ್ಛ ಕುಶಾಲನಗರ ಅಭಿಯಾನ ಫೆ.1 ರಿಂದ ಹಮ್ಮಿಕೊಳ್ಳಲಾಗುತ್ತದೆ ಎಂದು ರೋಟರಿ ಅಧ್ಯಕ್ಷರಾದ ಮನು ಪೆಮ್ಮಯ್ಯ ತಿಳಿಸಿದ್ದಾರೆ.  ಕುಶಾಲನಗರ ರೋಟರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕುಶಾಲನಗರ ರೋಟರಿಯ ಸುವರ್ಣ ಮಹೋತ್ಸವ ಅಂಗವಾಗಿ ಈಗಾಗಲೇ ಹಲವು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಫೆಬ್ರವರಿ ತಿಂಗಳ ಅಂತ್ಯ ತನಕ ಕುಶಾಲನಗರ ಪಟ್ಟಣ ಮತ್ತು ಸುತ್ತಮುತ್ತ ಗ್ರಾಮಗಳಲ್ಲಿ ವಿವಿಧ ಕಾರ್ಯಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.  ಸಾರ್ವಜನಿಕರ ಸಹಕಾರದೊಂದಿಗೆ ಸ್ವಚ್ಛ ಕುಶಾಲನಗರ ನಿರ್ಮಿಸುವುದು ಸುವರ್ಣ ಮಹೋತ್ಸವದ ಧ್ಯೇಯವಾಗಿದೆ ಎಂದು ಹೇಳಿದ ಅವರು ಈ ಸಂಬಂಧ ಕುಶಾಲನಗರ ಪಟ್ಟಣದಲ್ಲಿ ಒಂದು ತಿಂಗಳ ಕಾಲ ವಾಹನಗಳ ಮೂಲಕ ನಾಗರಿಕರಿಗೆ ಕಸ ವಿಲೇವಾರಿ ಬಗ್ಗೆ ಮಾಹಿತಿ ಅರಿವು ನೀಡುವ ಕೆಲಸ ನಡೆಯಲಿದೆ ಇದರೊಂದಿಗೆ ನಮ್ಮ ತಂಡ ಪ್ರತಿ ಮನೆಮನೆಗೆ ತೆರಳಿ ಸ್ವಚ್ಛತಾ ಬಗ್ಗೆ ಮಾಹಿತಿ ನೀಡಿ ಸಹಿ ಸಂಗ್ರಹ ಯೋಜನೆ ನಡೆಯಲಿದೆ.  ಈ ಯೋಜನೆಯ ಅನುಷ್ಠಾನದ ಸಂಬಂಧ ಕೂಡಿಗೆ ಸಮೀಪದ ಭುವನಗಿರಿ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ಪೂರ್ಣ ಪ್ರಮಾಣದ ಕಸ ವಿಂಗಡಣೆ ಘಟಕ ಸ್ಥಾಪನೆಗೆ ರೋಟರಿ ಮೂಲಕ ಸಂಪೂರ್ಣ ಸಹಕಾರ ನೀಡಲಾಗುವುದು.
ದಿನಕ್ಕೆ ಸುಮಾರು ಮೂರರಿಂದ ಐದು ಟನ್ ಪ್ರಮಾಣದ ಕಸ ವಿಂಗಡನೆ ಮಾಡುವುದು, ಹಸಿ ಕಸವನ್ನು ಜೈವಿಕ ಗೊಬ್ಬರವಾಗಿ ಪರಿವರ್ತಿಸುವುದು, ಕಸ ಸಂಗ್ರಹಣಾ 2 ಟ್ರ್ಯಾಕ್ಟರ್ ಮತ್ತು ಕಾರ್ಮಿಕ ವ್ಯವಸ್ಥೆಗೆ ಪಟ್ಟಣ ಪಂಚಾಯಿತಿ ಸಹಯೋಗದೊಂದಿಗೆ ಕೆಲಸ ಮಾಡಲಾಗುವುದು. ವಿಶೇಷವಾಗಿ ಅಲಂಕರಿಸಿದ ನಾಲ್ಕು ಚಕ್ರದ ಜಾಗೃತಿ ವಾಹನ ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಸಂಚರಿಸಿ ಸ್ವಚ್ಛ ಕುಶಾಲನಗರ ಕುರಿತ ಸಂದೇಶಗಳು ಆಡಿಯೋ ಪ್ರಕಟಣೆ ಮತ್ತು ಜಾಗೃತಿ ಚಿತ್ರ ಹಾಗೂ ಫಲಕಗಳನ್ನು ಅಳವಡಿಸುವ ಕಾರ್ಯ ನಡೆಯಲಿದೆ ಎಂದು ವಿವರ ನೀಡಿದರು. ಸ್ವಚ್ಛತೆ ಅಂಗವಾಗಿ ಸ್ಥಳೀಯ ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮ ಸಂವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು. ರೋಟರಿ ಕುಶಾಲನಗರದಿಂದ ಬಾಟಲ್ ಮಾದರಿಯ ಒಣ ಕಸ ಸಂಗ್ರಹ ಘಟಕಗಳನ್ನು ಪಟ್ಟಣದ ಐದು ಸ್ಥಳಗಳಲ್ಲಿ ಸ್ಥಾಪನೆ ಮಾಡಲಾಗುವುದು ಕುಶಾಲನಗರ -ಕೊಪ್ಪ ಕಾವೇರಿ ಸೇತುವೆ ಬಳಿ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಎದುರುಗಡೆ ಮಡಿಕೇರಿ ರಸ್ತೆ ಪ್ರವೇಶದ ವ್ಯಾಪ್ತಿ ಮತ್ತು ಚಿಕ್ಲಿಹೊಳೆ ಅಣೆಕಟ್ಟು ಸಮೀಪ ಸೇರಿದಂತೆ ವಿವಿಧ ಪ್ರವಾಸಿ ತಾಣದಲ್ಲಿ ಅಳವಡಿಸಲಾಗುತ್ತದೆ ಎಂದರು. ಪುರಸಭೆ ವ್ಯಾಪ್ತಿಯ ಎಲ್ಲಾ ಮನೆಗಳಿಗೆ ಬಿತ್ತಿ ಪತ್ರ ನೀಡುವ ಮೂಲಕ ವ್ಯಾಪಾರ ಮಳಿಗೆಗಳಲ್ಲಿ ಸ್ವಚ್ಛತಾ ಸ್ಟಿಕರ್ ಅಂಟಿಸುವುದು, ಆಯ್ದ ಸ್ಥಳಗಳಲ್ಲಿ ಗೋಡೆ ಬರಹಗಳ ಮೂಲಕ ಜನರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದರು. ರೋಟರಿ ಮೂಲಕ ಹಸಿದವರಿಗೆ ಅನ್ನ ಯೋಜನೆ ಈಗಾಗಲೇ ಕಳೆದ ಆರು ತಿಂಗಳಿನಿಂದ ನಡೆಯುತ್ತಿದೆ. ಪಟ್ಟಣದಲ್ಲಿ ಆಯ್ದ ಪೊಲೀಸ್ ಚೌಕಿಗಳ ನವೀಕರಣ ಮತ್ತು ವಿಶೇಷವಾಗಿ ಕುಶಾಲನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಕಟ್ಟಡ ನವೀಕರಣಕ್ಕೆ ರೋಟರಿ ಕುಶಾಲನಗರ ಮೂಲಕ 50,000 ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಅವರು ಹೇಳಿದರು. ಕುಶಾಲನಗರ ತಾಲೂಕಿನ ಕಣಿವೆ ಗ್ರಾಮ ಹುಲುಸೆ ಗ್ರಾಮದಲ್ಲಿ ಬಸ್ ತಂಗುದಾಣ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ಈಗಾಗಲೇ ಲೋಕಾರ್ಪಣೆಗೊಂಡಿದೆ. ಫೆಬ್ರವರಿ ಒಂದರಿಂದ ತಿಂಗಳ ಅಂತ್ಯದ ತನಕ ಈ ಎಲ್ಲಾ ಸೇವಾ ಕಾರ್ಯಗಳು ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.
ಮಾರ್ಚ್ ಒಂದರಂದು ಕುಶಾಲನಗರ ರೋಟರಿಯ ಸುವರ್ಣ ಮಹೋತ್ಸವ ಸಮಾರಂಭ ಕಾರ್ಯಕ್ರಮ ನಡೆಯಲಿದೆ ಎಂದು ಮನು ಪೆಮ್ಮಯ್ಯ ಸಮಗ್ರ ಮಾಹಿತಿ ಒದಗಿಸಿದರು. ಈ ಸಂದರ್ಭ ಮಾತನಾಡಿದ ಸುವರ್ಣ ಮಹೋತ್ಸವ ಆಚರಣೆ ಕೇಂದ್ರ ಸಮಿತಿಯ ಚೇರ್ಮನ್ ಎಸ್ ಕೆ ಸತೀಶ್, ಕಳೆದ 50 ವರ್ಷಗಳಿಂದ ರೋಟರಿ ಕುಶಾಲನಗರ ಹಲವು ಸೇವೆಗಳನ್ನು ಸಾರ್ವಜನಿಕ ವಲಯಗಳಲ್ಲಿ ಯಶಸ್ವಿಯಾಗಿ ಹಮ್ಮಿಕೊಂಡು ಬಂದಿದೆ. ಕುಶಾಲನಗರ ಸರಕಾರಿ ಆಸ್ಪತ್ರೆಗೆ ಎರಡು ಡಯಾಲಿಸಿಸ್ ಘಟಕಗಳನ್ನು ನೀಡಿದೆ. ಮಡಿಕೇರಿ ಅಶ್ವಿನಿ ಆಸ್ಪತ್ರೆಗೆ ಲಕ್ಷಾಂತರ ಮೌಲ್ಯದ ಅಗತ್ಯ ಸಲಕರಣೆಗಳು ಕುಶಾಲನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕುಡಿಯುವ ನೀರು, ಅಂಗ ವೈಕಲ್ಯತೆ ಹೊಂದಿದ ವಿಕಲಾಂಗರಿಗೆ ಅಗತ್ಯವಾದ ಕೃತಕ ಕಾಲು ಜೋಡಣೆ, ಕುಶಾಲನಗರ ಸರಕಾರಿ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾ ಆರೋಗ್ಯ ಶಿಬಿರಗಳು ಸೇರಿದಂತೆ 10 ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಎಲ್ಲಾ ಕಾರ್ಯಕ್ರಮಗಳಿಗೆ ಪತ್ರಿಕಾ ಮಾಧ್ಯಮದಿಂದ ಎಲ್ಲಾ ರೀತಿಯ ಸಲಹೆ ಸಹಕಾರಿಗಳು ಲಭಿಸಿದ್ದು ಮುಂದಿನ ದಿನಗಳ ಎಲ್ಲಾ ಕಾರ್ಯಕ್ರಮಗಳಿಗೆ ಕೈಜೋಡಿಸುವಂತೆ ಮನವಿ ಮಾಡಿದರು. ಈ ಸಂದರ್ಭ ರೋಟರಿ ಕುಶಾಲನಗರ ಕಾರ್ಯದರ್ಶಿ ಹೆಚ್ ಪಿ ಮಂಜುನಾಥ್, ಸುವರ್ಣ ಮಹೋತ್ಸವ ಸಮಿತಿಯ ಪ್ರಮುಖರಾದ ಮಹೇಶ್ ಕುಮಾರ್ ನಾಲ್ವಡೆ, ಕೃಜ್ವಲ್ ಕೋಟ್ಸ್, ಎಂ.ಡಿ.ರಂಗಸ್ವಾಮಿ, ಕೆ ಎಸ್ ರಾಜಶೇಖರ್, ಆರತಿ ಎ ಶೆಟ್ಟಿ, ಸಹಾಯಕ ರಾಜ್ಯಪಾಲರಾದ ಉಲ್ಲಾಸ್ ಕೃಷ್ಣ ಇದ್ದರು. :: ಚೆಕ್ ಹಸ್ತಾಂತರ :: ರೋಟರಿ ಕುಶಾಲನಗರದ ಸುವರ್ಣ ಮಹೋತ್ಸವ ಅಂಗವಾಗಿ ಕುಶಾಲನಗರ ಪಟ್ಟಣ ಮತ್ತು ಸುತ್ತಮುತ್ತ ವ್ಯಾಪ್ತಿಯಲ್ಲಿ ಹಲವು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯ ಕಟ್ಟಡ ನಿರ್ವಹಣೆಗಾಗಿ ರೂ.50 ಸಾವಿರ ನೀಡುವುದಾಗಿ ಈ ಸಂದರ್ಭ ರೋಟರಿ ಅಧ್ಯಕ್ಷರಾದ ಮನು ಪೆಮ್ಮಯ್ಯ ಘೋಷಿಸಿದರು. ಇದೇ ಸಂದರ್ಭ ಪ್ರಥಮ ಕಂತಿನಲ್ಲಿ ರೂ.25000 ಮೊತ್ತದ ಚೆಕ್ ಅನ್ನು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ.ಎನ್.ಚಂದ್ರಮೋಹನ್ ಅವರಿಗೆ ಹಸ್ತಾಂತರಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೬ : ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ, ವಿರಾಜಪೇಟೆ ತಾಲ್ಲೂಕು, ಅಮ್ಮತ್ತಿ ಹೋಬಳಿ ಘಟಕ…

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026

*ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*

ಮಾರ್ಚ್ 6, 2026

*ಕರ್ನಾಟಕದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧ*

ಮಾರ್ಚ್ 6, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾಧ೯  ಸಹಕಾರಿ ಸಂಘದ ಅಧ್ಯಕ್ಷರಾಗಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷರಾಗಿ ಬಿ.ಬಿ.ಸ್ವಾತಿ ಅವಿರೋಧ ಆಯ್ಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.