Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಂಧಿವಾತ ಶಾಸ್ತ್ರ ವಿಷಯದ ಕುರಿತು ಕಾರ್ಯಾಗಾರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಂಧಿವಾತ ಶಾಸ್ತ್ರ ವಿಷಯದ ಕುರಿತು ಕಾರ್ಯಾಗಾರ

ಜನವರಿ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಜ.30 NEWS DESK : ಕೊಡಗು ಜಿಲ್ಲೆಯ ವೈದ್ಯಕೀಯ ಶಿಕ್ಷಣ ಅಭಿವೃದ್ಧಿಪಡಿಸುವಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಂಧಿವಾತ ಶಾಸ್ತ್ರದ ಬಗ್ಗೆ ಉನ್ನತ ಮಟ್ಟದ ಸಿ.ಎಂ.ಇ ಕಾರ್ಯಾಗಾರ ನಡೆಯಿತು. ಕರ್ನಾಟಕ ರುಮಟಾಲಜಿ ಅಸೋಸಿಯೇಷನ್ ಮತು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಮಡಿಕೇರಿಯ ಸಂಯುಕ್ತಾಶ್ರಯದಲ್ಲಿ ಸಂಸ್ಥೆ ನಿರ್ದೇಶಕರು ಹಾಗೂ ಡೀನ್ ಲೋಕೇಶ್ ಎ.ಜೆ ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು. 2018ರ ನಂತರ ಈ ವಿಷಯದ ಬಗ್ಗೆ ಜಿಲ್ಲೆಯಲ್ಲಿ ನಡೆದ ಮೊದಲ ದೊಡ್ಡ ಕಾರ್ಯಕ್ರಮ ಇದಾಗಿದ್ದು, ಸ್ಥಳೀಯ ವೈದ್ಯಕೀಯ ಸಮುದಾಯದಲ್ಲಿ ಈ ವಿಷಯದ ಬಗ್ಗೆ ಸುಧೀರ್ಘವಾದ ಚರ್ಚೆ ನಡೆಯಿತು. ಈ ವಿಚಾರ ಸಂಕಿರಣದಲ್ಲಿ 300ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ಸೇರಿದಂತೆ ಇತರೆ ರಾಜ್ಯದ ವೈದ್ಯರುಗಳು, ವಿವಿಧ ಕಾಲೇಜುಗಳ ಪ್ರತಿನಿಧಿಗಳು ಇದರಲ್ಲಿ ನೋಂದಾಯಿಸಿಕೊಂಡಿದ್ದರು. ಡಾ.ಶಿವಪ್ರಸಾದ್ ಬಿ.ಎನ್. ಅವರು ಸಂವಾದಾತ್ಮಕ ಸೆಷನ್ ಮೂಲಕ ಚರ್ಚೆ ಆರಂಭಿಸಿದರು. ಡಾ.ಮಂಜುನಾಥ್, ಡಾ.ಪುರುಷೋತ್ತಮ್, ಡಾ.ಸಿಡ್ನಿ ಡಿಸೋಜಾ, ಡಾ.ಸುಧೇಂದ್ರ ರಾವ್ ಮತ್ತು ಡಾ.ಮುಖ್ಯಪ್ರಾಣ ಪ್ರಭು ಅವರ ನೇತೃತ್ವದಲ್ಲಿ ಶೈಕ್ಷಣಿಕ ಕಾರ್ಯಕಲಾಪಗಳು ಸುಗಮವಾಗಿ ನಡೆದವು. ವೈಜ್ಞಾನಿಕ ಅಧಿವೇಶನದ ಮುಖ್ಯಾಂಶಗಳು: ಸಂಧಿವಾತದ ವಿಧಗಳು: ಡಾ.ಚೆಂಗಪ್ಪ ಕೆ.ಜಿ. ಅವರು ಕೀಲು ನೋವಿನ ವಿವಿಧ ವಿಧಗಳನ್ನು ಗುರುತಿಸುವ ಮತ್ತು ಚಿಕಿತ್ಸೆ ನೀಡುವ ಬಗ್ಗೆ ಮಾಹಿತಿ ನೀಡಿದರು. ಮಕ್ಕಳ ಸಂಧಿವಾತ: ಡಾ.ಪ್ರಕೃತಿ ಜೆ. ಅವರು ಮಕ್ಕಳಲ್ಲಿ ಕಂಡುಬರುವ ಕೀಲು ನೋವು ಮತ್ತು ಅದಕ್ಕೆ ನೀಡಬೇಕಾದ ಹಂತ ಹಂತದ ಚಿಕಿತ್ಸೆಗಳ ಬಗ್ಗೆ ವಿವರಿಸಿದರು. ಲ್ಯಾಬ್ ಪರೀಕ್ಷೆಗಳು: ಡಾ.ಸಂಗೀತ ಕೆ.ಎನ್. ಅವರು ಮಾತನಾಡಿ, “ಅಗತ್ಯಕ್ಕಿಂತ ಹೆಚ್ಚು ಪರೀಕ್ಷೆಗಳ ಅವಶ್ಯಕತೆಯಿಲ್ಲ” ಎಂದು ತಿಳಿಸಿದರು ಮತ್ತು ಕಣ್ಣಿನ ತಪಾಸಣೆಯ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದರು. ಸೋಂಕು ತಡೆಗಟ್ಟುವಿಕೆ: ಡಾ.ವಿಕ್ರಮರಾಜ್ ಕೆ. ಜೈನ್ ಅವರು ಸೋಂಕು ತಡೆಯುವ ನಾಲ್ಕು ಮುಖ್ಯ ಕ್ರಮಗಳು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವ ರೋಗಿಗಳ ಬಗ್ಗೆ ಮಾಹಿತಿ ನೀಡಿದರು. ವಿಶೇಷ ವಿಷಯಗಳ ಚರ್ಚೆ ಆಲ್ಪಾ ಮತ್ತು ಎಸ್‍ಎಲ್‍ವಿ: ಡಾ.ನಾಗರಾಜ್ ಎಸ್. ಅವರು ಆಲ್ಪಾ ಬಗ್ಗೆ ಮತ್ತು ಡಾ. ರಂಗರತ್ನ ಅವರು ಲೂಪಸ್ ಕಾಯಿಲೆಯ ಬಗ್ಗೆ ಮಾಹಿತಿ ನೀಡಿದರು. ರೋಗದ ಲಕ್ಷಣಗಳು ಬೇರೆ ಬೇರೆ ಅಂಗಗಳ ಮೇಲೆ ಪರಿಣಾಮ ಬೀರುವುದರಿಂದ ಎಲ್ಲ ವಿಭಾಗದ ವೈದ್ಯರು ಸೇರಿ ಚಿಕಿತ್ಸೆ ನೀಡಬೇಕು ಎಂದು ಅವರು ತಿಳಿಸಿದರು. ವಾಸ್ಕುಲೈಟಿಸ್: ರಕ್ತನಾಳಗಳ ಉರಿಯೂತದ ಬಗ್ಗೆ ಮಾತನಾಡಿದ ಡಾ.ರಮೇಶ್ ಜೋಯಿಸ್ ಅವರು, ಇದನ್ನು ಪತ್ತೆ ಹಚ್ಚಲು ಬಯಾಪ್ಸಿ ಮುಖ್ಯ ಎಂದು ಹೇಳಿದರು. ಗರ್ಭಾವಸ್ಥೆಯಲ್ಲಿ ಸಂಧಿವಾತ: ಡಾ.ವಿನೋದ್ ರವೀಂದ್ರನ್ ಅವರು ಗರ್ಭಿಣಿಯರಲ್ಲಿ ಕಾಣಿಸಿಕೊಳ್ಳುವ ಇಂತಹ ಸಮಸ್ಯೆಗಳು ಮತ್ತು ಸುರಕ್ಷಿತ ಔಷಧಿಗಳ ಬಳಕೆಯ ಬಗ್ಗೆ ಮಾಹಿತಿ ನೀಡಿದರು.ಕಾರ್ಯಕ್ರಮದ ಕೊನೆಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಮತ್ತು ಕೇಸ್ ಪ್ರೆಸೆಂಟೇಶನ್ ಸ್ಪರ್ಧೆ ನಡೆಯಿತು. ವಿಜೇತರಿಗೆ ಮತ್ತು ಪ್ರಬಂಧ ಮಂಡಿಸಿದವರಿಗೆ ನಗದು ಬಹುಮಾನ ನೀಡಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ನ.7: ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಭಾಗದ ನಾಂಗಾಲ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಹಿಳಾ ಸಮಾಜದ ನೂತನ…

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026

ಗೂಂಡಾ ಕಾಯ್ದೆಯಡಿ ಕಳ್ಳತನ ಪ್ರಕರಣಗಳ ಆರೋಪಿ ಬಂಧನ; 25 ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

ನವೆಂಬರ್ 6, 2026

ವಿರಾಜಪೇಟೆ ಕ್ಷೇತ್ರದಲ್ಲಿ ಕಾನೂನುಬಾಹಿರವಾಗಿ ಮತದಾನದ ಹಕ್ಕು ರದ್ದಾಗಿದ್ದರೆ ದಾಖಲೆ ಸಹಿತ ಸಾಬೀತುಪಡಿಸಿ: ಕಾಂಗ್ರೆಸ್‌ಗೆ ಬಿಜೆಪಿ ವಕ್ತಾರ ರಾಕೇಶ್ ದೇವಯ್ಯ ಸವಾಲು

ನವೆಂಬರ್ 6, 2026

ಕ್ರೀಡಾಕೂಟದಲ್ಲಿ ಸಾಧನೆ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಕೊಡಗಿನ ವಿದ್ಯಾರ್ಥಿಗಳು

ನವೆಂಬರ್ 6, 2026

ದೀಪಾವಳಿ ಹಬ್ಬಕ್ಕೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ಆಕರ್ಷಕ ಕೊಡುಗೆ

ನವೆಂಬರ್ 6, 2026

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಿಂಪಡೆಯಲು ವಿಮೆನ್ ಇಂಡಿಯಾ ಮೂವ್‌ಮೆಂಟ್ ಒತ್ತಾಯ

ನವೆಂಬರ್ 6, 2026

ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ: ರಾಜ್ಯ ಸರ್ಕಾರಕ್ಕೆ ಕೊಡಗು ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ ಸಿಎಂ, ಡಿಸಿಎಂ ಹಾಗೂ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರಿಗೆ ಅಭಿನಂದನೆ; ಸಲ್ಲಿಸಿದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಎಂ.ಸಿ.

ನವೆಂಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.