Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
  • *ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*
  • *ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*
  • *ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅರ್ಥಪೂರ್ಣವಾಗಿ ಜರುಗಿದ ಹುತಾತ್ಮರ ದಿನಾಚರಣೆ : ಮಹಾತ್ಮ ಗಾಂಧಿ ಸ್ಮರಣೆಯೊಂದಿಗೆ ಸರ್ವಧರ್ಮ ಪ್ರಾರ್ಥನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅರ್ಥಪೂರ್ಣವಾಗಿ ಜರುಗಿದ ಹುತಾತ್ಮರ ದಿನಾಚರಣೆ : ಮಹಾತ್ಮ ಗಾಂಧಿ ಸ್ಮರಣೆಯೊಂದಿಗೆ ಸರ್ವಧರ್ಮ ಪ್ರಾರ್ಥನೆ*

ಜನವರಿ 30, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.30 : ಜಿಲ್ಲಾಡಳಿತ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ‘ಹುತಾತ್ಮರ ದಿನಾಚರಣೆ’ಯು ನಗರದಲ್ಲಿ ಶುಕ್ರವಾರ ಅರ್ಥಪೂರ್ಣವಾಗಿ ಜರುಗಿತು. ನಗರದ ಜಿಲ್ಲಾಡಳಿತ ಭವನದ ಜಿಲ್ಲಾ ಖಜಾನೆಯಲ್ಲಿರಿಸಲಾಗಿದ್ದ ಮಹಾತ್ಮ ಗಾಂಧೀಜಿಯವರ ‘ಚಿತಾಭಸ್ಮ’ವನ್ನು ಹೊರತೆಗೆದು ಪುಷ್ಪಮಾಲೆಗಳಿಂದ ಶೃಂಗರಿಸಿ ಗೌರವ ಸಮರ್ಪಿಸಲಾಯಿತು. ಜಿಲ್ಲಾಡಳಿತ ಹಾಗೂ ಸರ್ವೋದಯ ಸಮಿತಿ ಸದಸ್ಯರ ನೇತೃತ್ವದಲ್ಲಿ ಪೊಲೀಸ್ ವಾದ್ಯದೊಂದಿಗೆ ನಗರದ ಮಂಗೇರಿರ ಮುತ್ತಣ್ಣ ಹಾಗೂ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದ ಮುಖ್ಯ ರಸ್ತೆ ಮೂಲಕ ಗಾಂಧೀಜಿಯವರ ಚಿತಾಭಸ್ಮವನ್ನು ಕೊಂಡೊಯ್ದು ಗಾಂಧಿ ಮಂಟಪ ಬಳಿ ಇರಿಸಿ ಪೊಲೀಸ್ ಗೌರವದೊಂದಿಗೆ ನಮನ ಸಲ್ಲಿಸಲಾಯಿತು. ಬಳಿಕ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಗಣ್ಯರು ನೆರವೇರಿಸಿದರು. ಇದೇ ವೇಳೆ ಪೊಲೀಸ್ ಮೀಸಲು ಪಡೆಯ ಸಬ್ ಇನ್ಸ್ಪೆಕ್ಟರ್ ಎಚ್.ಬಿ.ಗಣೇಶ್ ಮತ್ತು ತಂಡದವರು ಮೂರು ಸುತ್ತುಗಳ ಕುಶಾಲತೋಪು ಹಾರಿಸುವ ಮೂಲಕ ರಾಷ್ಟçಪಿತರಿಗೆ ಪೊಲೀಸ್ ಗೌರವಾರ್ಪಣೆ ಸಲ್ಲಿಸಿದರು. ನಂತರ ಮೌನಾಚರಣೆ ನಡೆಯಿತು. ಪೊಲೀಸ್ ವಾದ್ಯ ತಂಡದವರು ರಾಷ್ಟçಗೀತೆ ಹಾಡಿ ಗಮನ ಸೆಳೆದರು. ಬಳಿಕ ಸರ್ವಧರ್ಮ ಪ್ರಾರ್ಥನೆ ನಡೆಯಿತು, ಗಾಂಧೀಜಿಯವರ ಮೆಚ್ಚಿನ ಭಜನಾ ಗಾಯನವನ್ನು ಮೈತಿಲಿ ರಾವ್ ಅವರ ನೇತೃತ್ವದಲ್ಲಿ ಸಂತ ಮೈಕಲರ ಶಾಲೆ ಹಾಗೂ ಕ್ರೆಸೆಂಟ್ ಶಾಲೆಯ ಗೈಡ್ಸ್ ವಿದ್ಯಾರ್ಥಿಗಳು ನಡೆಸಿಕೊಟ್ಟರು. ಸರ್ವಧರ್ಮ ಗುರುಗಳಿಂದ ಭಗವದ್ಗೀತೆ(ಸಂತೋಷ್ ಭಟ್), ಬೈಬಲ್(ಸಾಗಯ ಮೇರಿ), ಕುರಾನ್(ಇಸಾಕ್ ಅಹ್ಮದ್) ಸಂದೇಶಗಳನ್ನು ಬೋಧಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಮಾತನಾಡಿ ಹುತಾತ್ಮರ ದಿನವು ಬಹಳ ವಿಶೇಷವಾಗಿದೆ. ಮಹಾತ್ಮ ಗಾಂಧೀಜಿ ಅವರು ಸರ್ವರಿಗೂ ಒಳಿತು ಮಾಡಿದ ಸರ್ವೋದಯ ದಿನವಾಗಿದೆ ಎಂದು ತಿಳಿಸಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅಹಿಂಸೆ ಮೂಲಕ ಸ್ವಾತಂತ್ರ್ಯವನ್ನು ತಂದುಕೊಟ್ಟರು. ಸರ್ವಜನರ ಸುಖವನ್ನು ಗಾಂಧೀಜಿಯವರು ಬಯಸಿದ್ದರು. ಧರ್ಮ, ನ್ಯಾಯಕ್ಕೆ ಒತ್ತು ನೀಡಿದ್ದರು. ವಿದೇಶಕ್ಕೆ ಹೋದಾಗ ಭಾರತ ಎಂದರೆ ಗಾಂಧೀಜಿಯವರ ನಾಡಿನಿಂದ ಬಂದವರೆAದು ಗುರುತಿಸುತ್ತಾರೆ. ಇದೊಂದು ರೀತಿ ಅಸ್ಮಿತೆ ಎಂದು ಆರ್.ಐಶ್ವರ್ಯ ಅವರು ನುಡಿದರು. ಮಹಾತ್ಮ ಗಾಂಧೀಜಿಯವರು ಹಾಕಿಕೊಟ್ಟ ಆದರ್ಶದಲ್ಲಿ ಪ್ರತಿಯೊಬ್ಬರೂ ಮುನ್ನಡೆಯಬೇಕು ಅವರ ಜೀವನ ಚರಿತ್ರೆಯನ್ನು ಅಧ್ಯಯನ ಮಾಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂಧುಮಣಿ ಅವರು ಮಾತನಾಡಿ ಪ್ರತಿಯೊಬ್ಬರೂ ಗಾಂಧಿ ಮಾರ್ಗದಲ್ಲಿ ನಡೆಯಬೇಕು ಎಂದರು. ಸತ್ಯ ಅಹಿಂಸೆ ಮೂಲಕ ಸ್ವಾತಂತ್ರ್ಯವನ್ನು ತಂದುಕೊಟ್ಟರು. ಆ ನಿಟ್ಟಿನಲ್ಲಿ ಮುಂದಿನ ಪೀಳಿಗೆಗೆ ಗಾಂಧೀಜಿಯವರ ಆದರ್ಶ ತತ್ವಗಳನ್ನು ತಿಳಿಸಬೇಕು ಎಂದರು. ಗಾಂಧೀಜಿಯವರ ಆಶಯಗಳು, ಸ್ವಾತಂತ್ರö್ಯಕ್ಕಾಗಿ ನೀಡಿರುವ ಕೊಡುಗೆಗಳು ಮತ್ತಿತರ ಬಗ್ಗೆ ಅಧ್ಯಯನ ಮಾಡಬೇಕು ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂಧುಮಣಿ ಅವರು ಮಾತನಾಡಿ ಮಹಾತ್ಮ ಗಾಂಧೀಜಿ ಅವರ ತತ್ವ ಆದರ್ಶದಲ್ಲಿ ಪ್ರತಿಯೊಬ್ಬರೂ ಮುನ್ನಡೆಯಬೇಕು ಎಂದರು. ಮಹಾತ್ಮ ಗಾಂಧೀಜಿಯವರ ಸಂದೇಶಗಳು, ಆಶಯಗಳು ಮುಂದಿನ ಪೀಳಿಗೆಗೆ ತಿಳಿಸುವಂತಾಗಬೇಕು. ಆ ನಿಟ್ಟಿನಲ್ಲಿ ಮಹಾತ್ಮ ಗಾಂಧೀಜಿಯವರ ವಿಚಾರಧಾರೆಗಳು ಫಸರಿಸಬೇಕು ಎಂದರು. ಅಹಿಂಸೆ ಮೂಲಕ ಸ್ವಾತಂತ್ರö್ಯವನ್ನು ತಂದುಕೊಟ್ಟ ಮಹಾತ್ಮ ಗಾಂಧೀಜಿಯವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ ಎಂದು ಬಿಂಧುಮಣಿ ಅವರು ಹೇಳಿದರು. ಸರ್ವೋದಯ ಸಮಿತಿಯ ನಿಕಟ ಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಸುಮಾರು 68 ವರ್ಷಗಳಿಂದ ಹುತಾತ್ಮರ ದಿನಾಚರಣೆ ಪ್ರಯುಕ್ತ ಮಹಾತ್ಮ ಗಾಂಧೀಜಿಯವರ ಚಿತಾಭಸ್ಮವನ್ನು ಮೆರವಣಿಗೆ ಮೂಲಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಗಾಂಧಿ ಸ್ಮಾರಕ ಉದ್ಯಾನವನ ನಿರ್ಮಾಣವಾದ ನಂತರ ಚಿತಾಭಸ್ಮವನ್ನು ಇಟ್ಟು ಗೌರವಿಸಲಾಗುತ್ತದೆ ಎಂದು ಹೇಳಿದರು. ಗಾಂಧೀ ಸ್ಮಾರಕ ಉದ್ಯಾನವನ ಕಾಮಗಾರಿಯನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಬೇಕು. ಆ ನಿಟ್ಟಿನಲ್ಲಿ ಹೆಚ್ಚುವರಿ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಟಿ.ಪಿ.ರಮೇಶ್ ಅವರು ತಿಳಿಸಿದರು. ಈಗಾಗಲೇ ಶಾಸಕರಾದ ಡಾ.ಮಂತರ್ ಗೌಡ ಅವರು 20 ಲಕ್ಷ ರೂ, ಬಿಡುಗಡೆ ಮಾಡಿದ್ದಾರೆ, ಹಾಗೆಯೇ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ ಅವರಿಗೆ ಅನುದಾನ ಬಿಡುಗಡೆಗೆ ಮನವಿ ಮಾಡಲಾಗಿದೆ ಎಂದು ಟಿ.ಪಿ.ರಮೇಶ್ ಅವರು ತಿಳಿಸಿದರು. ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನಿರ್ ಅಹ್ಮದ್ ಅವರು ಮಾತನಾಡಿ ಮಹಾತ್ಮ ಗಾಂಧೀಜಿ ಅವರು ‘ನನ್ನ ಜೀವನವೇ ನನ್ನ ಸಂದೇಶ’ವೆAದು ಹೇಳಿದ್ದಾರೆ ಎಂದರು. ಶಾಂತಿ, ಏಕತೆ, ಭ್ರಾತೃತ್ವ, ಸಮಾನತೆ, ಇವುಗಳು ಗಾಂಧೀಜಿಯವರ ತತ್ವ ಸಂದೇಶಗಳಾಗಿದ್ದು, ಮಹಾತ್ಮ ಗಾಂಧೀಜಿ ಅವರ ಆದರ್ಶಗಳನ್ನು ಜೀವನದಲ್ಲಿ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು ಎಂದರು. ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಮಹೇಶ್ ನಾಚಯ್ಯ, ಕೊಡಗು ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ.ಅನಂತಶಯನ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯು, ಸರ್ವೋದಯ ಸಮಿತಿ ಸದಸ್ಯರಾದ ತೆನ್ನಿರಾ ಮೈನಾ, ಚಂದ್ರಶೇಖರ್, ಪ್ರಕಾಶ್ ಆಚಾರ್ಯ, ಕಾನಹಿತ್ಲು ಮೊಣ್ಣಪ್ಪ, ತೋರೇರ ಮುದ್ದಯ್ಯ, ಪ್ರಭು ರೈ, ಅಂಬೆಕಲ್ಲು ನವೀನ್, ಎಸ್.ಪಿ.ವಾಸುದೇವ, ಎಂ.ಎನ್.ಸುಬ್ರಮಣಿ, ಜೆ.ಸಿ.ರಮೇಶ್, ಚುಮ್ಮಿ ದೇವಯ್ಯ, ಮೀನಾಜ್ ಪ್ರವೀಣ್, ಪ್ರೇಮ ಕೃಷ್ಣಪ್ಪ, ಫ್ಯಾನ್ಸಿ, ಜುಲೇಕಾಬಿ, ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಘಟಕರಾದ ದಮಯಂತಿ, ಸ್ಕೌಟ್ಸ್ ಆಯುಕ್ತರಾದ ಜಿಮ್ಮಿ ಸ್ವೀಕ್ವೇರಾ, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಪೌರಾಯುಕ್ತರಾದ ಎಚ್.ಆರ್.ರಮೇಶ್, ತಹಶೀಲ್ದಾರ್ ಶ್ರೀಧರ್, ಪೊಲೀಸ್ ಅಧಿಕಾರಿ ರಾಜು, ಪ್ರೇಮ, ಮತ್ತಿತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ, ಮಣಜೂರು ಮಂಜುನಾಥ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೬ : ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ, ವಿರಾಜಪೇಟೆ ತಾಲ್ಲೂಕು, ಅಮ್ಮತ್ತಿ ಹೋಬಳಿ ಘಟಕ…

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026

*ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*

ಮಾರ್ಚ್ 6, 2026

*ಕರ್ನಾಟಕದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧ*

ಮಾರ್ಚ್ 6, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾಧ೯  ಸಹಕಾರಿ ಸಂಘದ ಅಧ್ಯಕ್ಷರಾಗಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷರಾಗಿ ಬಿ.ಬಿ.ಸ್ವಾತಿ ಅವಿರೋಧ ಆಯ್ಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.