Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಫೆ.6 ರಿಂದ ಇತಿಹಾಸ ಪ್ರಸಿದ್ಧ ಚೆರಿಯಪರಂಬು ಮಖಾಂ ಉರೂಸ್ ಆರಂಭ*
ಇತ್ತೀಚಿನ ಸುದ್ದಿಗಳು

*ಫೆ.6 ರಿಂದ ಇತಿಹಾಸ ಪ್ರಸಿದ್ಧ ಚೆರಿಯಪರಂಬು ಮಖಾಂ ಉರೂಸ್ ಆರಂಭ*

January 30, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.30 NEWS DESK : ಇತಿಹಾಸ ಪ್ರಸಿದ್ಧ ಚೆರಿಯಪರಂಬು ಮಖಾಂ ಉರೂಸ್ ಸಮಾರಂಭವು ಫೆ.6 ರಿಂದ 10ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಚೆರಿಯಪರಂಬು ಜಮಾಅತ್ ಪ್ರಧಾನ ಕಾರ್ಯದರ್ಶಿ ಪರವಂಡ.ಎ.ಸಿರಾಜ್ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೆರಿಯಪರಂಬು ದರ್ಗಾ ಶರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಶಹೀದ್ ಅಬ್ದುಲ್ ರಹ್ಮಾನ್ ವಲಿಯುಲ್ಲಾಹಿ (ನ.ಮ)ಹಾಗೂ ಹೌಲಿಯಾಗಳ ಹೆಸರಿನಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು. ಫೆ.6 ರಂದು ಜುಮಾ ನಮಾಜ್ ನಂತರ ಉರೂಸ್‍ಗೆ ಚಾಲನೆ ದೊರೆಯಲಿದೆ. ಇದೇ ಸಂದರ್ಭ ಗ್ರಾಮಸ್ಥರೆಲ್ಲರೂ ಮಸೀದಿಯಿಂದ ನೇರವಾಗಿ ದರ್ಗಾಶರೀಫ್ ಆಗಮಿಸಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದರ ನೇತೃತ್ವವನ್ನು ಚೆರಿಯಪರಂಬು ಜಮಾಅತ್ ಖತೀಬರಾದ ಮುಹಮ್ಮದ್ ಶಫೀಕ್ ಅಲಿ ಸಿರಾಜಿ ಉಸ್ತಾದ್ ಅವರು ವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಜಮಾಅತ್ತಿನ ಅಧ್ಯಕ್ಷರಾದ ಪಿ.ಎ.ಅಹಮದ್ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು. ಮಗ್ರಿಬ್ ನಮಾಝಿನ ಬಳಿಕ ಮಖಾಂ ಅಲಂಕಾರ ಹಾಗೂ ಖತಂ ದುಆ ಮಜ್ಲಿಸ್ ನಡೆಯಲಿದ್ದು, ನಿಝಾರ್ ಅಹ್ಸನಿ ಕಕ್ಕಡಿಪುರಂ ಉಸ್ತಾದ್ ಅವರು ನೇತೃತ್ವ ನೀಡಲಿದ್ದಾರೆ. ಸಂಜೆ 7 ಗಂಟೆಗೆ ಝಬೈರ್ ಮಾಸ್ಟರ್ ತೋಟಿಕ್ಕಲ್ ಮತ್ತು ಸಂಗಡಿಗರು ನಡೆಸಿಕೊಡಲಿರುವ ಕಥಾ ಪ್ರಸಂಗ ಗಮನ ಸೆಳೆಯಲಿದೆ ಎಂದು ತಿಳಿಸಿದರು. ಫೆ.7 ಸಂಜೆ 7 ಗಂಟೆಗೆ ಸಿಂಸಾರುಲ್ ಹಖ್ ಹುದವಿ ಅಬುಧಾಬಿ ಪ್ರಭಾಷಣ ಮಾಡಲಿದ್ದಾರೆ.  ಫೆ.8 ಸಂಜೆ 7 ಗಂಟೆಗೆ ಅಬ್ದಲ್ ಲತೀಫ್ ಸಖಾಫಿ ಕಾಂತಪುರಂ ಅವರ ನೇತೃತ್ವದಲ್ಲಿ ಮದನಿಯಂ ನಡೆಯಲಿದೆ. ಫೆ.9 ಮಧ್ಯಾಹ್ನ  ಸಯ್ಯಿದ್ ಇಲ್ಯಾಸ್ ಅಲ್ ಹೈದರೂಸಿ ಎರುಮಾಡ್ ತಂಙಳ್ ನೇತೃತ್ವದಲ್ಲಿ ದುಆ ಮಸ್ಲಿಸ್ ಜರುಗಲಿದೆ ಎಂದು ಹೇಳಿದರು. ಸಂಜೆ 7 ಗಂಟೆಗೆ ಚೆರಿಯಪರಂಬು ಖತೀಬರಾದ ಮಹಮ್ಮದ್ ಶಫೀಕ್ ಅಲಿ ಸಿರಾಜಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ. ಸಂಜೆ 4 ಗಂಟೆಗೆ ಸಾರ್ವಜನಿಕರಿಗೆ ಅನ್ನದಾನ ನಡೆಯಲಿದೆ ಎಂದು ಸಿರಾಜ್ ತಿಳಿಸಿದರು. ಫೆ.10 ರಂದು ಸಂಜೆ 7 ಗಂಟೆಗೆ ಸಾರ್ವಜನಿಕ ಸಮ್ಮೇಳನ ಹಾಗೂ ಸಮಾರೋಪ ಸಮಾರಂಭ ನಡೆಯಲಿದ್ದು, ಅಧ್ಯಕ್ಷತೆಯನ್ನು ಜಮಾಅತ್ತಿನ ಅಧ್ಯಕ್ಷರಾದ ಅಹಮದ್ ವಹಿಸಲಿದ್ದಾರೆ. ಜಮಾಅತ್ ಪ್ರಧಾನ ಕಾರ್ಯದರ್ಶಿ ಪರವಂಡ ಸಿರಾಜ್ ಸ್ವಾಗತಿಸಲಿದ್ದು, ಕೊಡಗು ನಾಇಬ್ ಖಾಝಿ ಶೈಖುನಾ ಎಂ.ಎಂ.ಅಬ್ದುಲ್ಲಾ ಫೈಝಿ ಎಡಪಾಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.  ಅಶ್ರಫ್ ಅಹ್ಸನಿ ಅನ್ವಾರುಲ್ ಹುದಾ ಪ್ರಾರ್ಥನೆಗೆ ನೇತೃತ್ವ ನೀಡಲಿದ್ದಾರೆ ಎಂದರು. ಹಾಫಿಝ್ ಸಿರಾಜುದ್ದೀನ್ ಖಾಸಿಮಿ ಪತ್ತನಾಪುರಂ ಮುಖ್ಯ ಪ್ರಭಾಷಣ ಮಾಡಲಿದ್ದು, ಮುಖ್ಯ ಅತಿಥಿಗಳಾಗಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸೇರಿದಂತೆ ಹಲವಾರು ರಾಜಕೀಯ ನಾಯಕರು ಧಾರ್ಮಿಕ ಮುಖಂಡರು  ಪಾಲ್ಗೊಳ್ಳಲಿದ್ದಾರೆ. ಪ್ರತೀ ದಿನ ರಾತ್ರಿ ಚೆರಿಯಪರಂಬು ದಫ್ ಸಂಗದ ನೇತೃತ್ವದಲ್ಲಿ ದಫ್ ಮುಟ್ ಪ್ರದರ್ಶನ ನಡೆಯಲಿದೆ ಪರವಂಡ.ಎ.ಸಿರಾಜ್ ಎಂದು ತಿಳಿಸಿದರು.  ಚೆರಿಯಪರಂಬು ಜಮಾಅತ್ ಖತೀಬರಾದ ಪಿ.ಮೊಹಮ್ಮದ್ ಶಫಿಕ್ ಅಲಿ ಸಿರಾಜಿ ಅವರು ಮಾತನಾಡಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿಕೊಡಬೇಕಾಗಿ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಚೆರಿಯಪರಂಬು ಜಮಾಅತ್‍ನ ಅಧ್ಯಕ್ಷ ಪಿ.ಎ.ಅಹಮ್ಮದ್, ಉಪಾಧ್ಯಕ್ಷ ಪಿ.ಎಂ.ಇಬ್ರಾಹಿಂ, ಕೋಶಾಧಿಕಾರಿ ಪಿ.ಹೆಚ್.ಬಶೀರ್, ಸದಸ್ಯ ಪಿ.ಎಂ.ಮೊಹಿದು ಕುಞ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕಾವೇರಿ-2 ತಂತ್ರಾಂಶದ ಬಳಕೆ ಕುರಿತು ತರಬೇತಿ* 
Next Article *ಫೆ.1 ರಂದು ಮೂರ್ನಾಡಿನಲ್ಲಿ ಯಕ್ಷೋತ್ಸವ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.