Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
  • *36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಸೈಬರ್ ಅಪರಾಧಗಳ ಕುರಿತು ಜಾಗೃತಿ ಅಗತ್ಯ : ಪೋಲಿಸ್ ಉಪ ಅಧೀಕ್ಷ ಮಹೇಶ್ ಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಸೈಬರ್ ಅಪರಾಧಗಳ ಕುರಿತು ಜಾಗೃತಿ ಅಗತ್ಯ : ಪೋಲಿಸ್ ಉಪ ಅಧೀಕ್ಷ ಮಹೇಶ್ ಕುಮಾರ್*

ಜನವರಿ 31, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ವಿರಾಜಪೇಟೆ ಜ.31 NEWS DESK  : ಪ್ರತಿದಿನ ಹಲವಾರು ಹೊಸ ಸೈಬರ್ ಕ್ರೈಂ ಪ್ರಕರಣಗಳು ಮತ್ತು ವಂಚನೆಗಳು ಬೆಳಕಿಗೆ ಬರುತ್ತಿರುವುದು ಆಘಾತಕಾರಿ ಮತ್ತು ಕಳವಳಕಾರಿ ಸಂಗತಿಯಾಗಿದ್ದು, ಸೈಬರ್ ಅಪರಾಧಗಳ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ವಿರಾಜಪೇಟೆ ಪೋಲಿಸ್ ಉಪ ಅಧೀಕ್ಷಕರಾದ ಮಹೇಶ್ ಕುಮಾರ್ ಹೇಳಿದರು. ವಿರಾಜಪೇಟೆ ಮಾಜಿ ಸೈನಿಕರ ಸಂಘದ ಮಾಸಿಕ ಸಭೆಯು ಸಂಘದ ಕಚೇರಿ ಸಭಾಂಗಣದಲ್ಲಿ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಮಾಜಿ ಸೈನಿಕರಿಗೆ ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಲು ಅವರು ಸಭೆಗೆ ಆಗಮಿಸಿ ಜಾಗೃತಿ ಮೂಡಿಸಿ ಮಾತನಾಡಿದ ಪೋಲಿಸ್ ಉಪ ಅಧೀಕ್ಷಕರಾದ ಮಹೇಶ್ ಕುಮಾರ್ ಅವರು, ಸೈಬರ್ ಕ್ರೈಂ ಬಗ್ಗೆ ಜನರು ಜಾಗೃತರಾಗಿರಬೇಕು ಮತ್ತು ಪ್ರತಿಯೊಂದು ಸಾಫ್ಟ್‍ವೇರ್ ಅನ್ನು ಡೌನ್‍ಲೋಡ್ ಮಾಡಬಾರದು. ಹೆಚ್ಚು ತಾಂತ್ರಿಕ ಜ್ಞಾನ ಬಳಕೆ ಮಾಡುವ ವಿದ್ಯಾರ್ಥಿಗಳಿಗೆ ಹೋಲಿಸಿದರೆ ಹಿರಿಯ ನಾಗರಿಕರು ಸೈಬರ್ ವಂಚನೆಗೆ ಹೆಚ್ಚು ಗುರಿಯಾಗುತ್ತಿದ್ದಾರೆಂದು ತಿಳಿಸಿದರು. ವಂಚನೆಗಳನ್ನು ಪತ್ತೆ ಹಚ್ಚುವುದು ಹಾಗೂ ಅವುಗಳಿಗೆ ಪರಿಹಾರ ಕಂಡುಹಿಡಿಯಲು ಸೇತುವೆಯಾಗುವುದರತ್ತ ನಾವು ಕೆಲಸ ಮಾಡುತ್ತಿದ್ದೇವೆ.  ಆನ್‍ಲೈನ್ ವಂಚನೆ, ಡಿಜಿಟಲ್ ಅರೆಸ್ಟ್, ಸೈಬರ್ ಅಪರಾಧಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸೈಬರ್ ಅಪರಾಧ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಸಮಾಜದ ಮನೆ ಮನೆಗೂ ತಲುಪುವಂತಾಗುವ ದಿಸೆಯಲ್ಲಿ ಪೊಲೀಸ್ ಇಲಾಖೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ ಎಂದರಲ್ಲದೆ ಮೊಬೈಲ್ ಪ್ರಜ್ಞಾಪೂರ್ವಕವಾಗಿ ಬಳಸಬೇಕು, ಅಪರಿಚಿತರ ಕೈಗೆ ಮೊಬೈಲ್ ನೀಡಬಾರದು, ಅಪರಿಚಿತ ಪೋನ್ ಮತ್ತು ವಿಡಿಯೋ ಕರೆಗಳನ್ನು ಸ್ವೀಕರಿಸಬೇಡಿ, ಓ.ಟಿ.ಪಿ. ಸಂಖ್ಯೆಗಳನ್ನು ಬ್ಯಾಂಕ್ ಖಾತೆಗಳ ಸಂಖ್ಯೆಯನ್ನು ತಿಳಿಸಬೇಡಿ, ಮುಖ್ಯವಾಗಿ ಹೆಣ್ಣು ಮಕ್ಕಳು ಮೊಬೈಲ್ ಕುರಿತು ಬಹಳ ಎಚ್ಚರಿಕೆಯಿಂದ ಬಳಸಬೇಕು. ಇಲ್ಲವಾದಲ್ಲಿ ಅನೇಕ ತೊಂದರೆಗಳಿಗೆ ಸಿಲುಕುವಿರಿ ಎಂದರು. ವಾಟ್ಸ್‍ಆಪ್, ಇನ್ಸಾಟ್ರಗ್ರಾಮ್, ಫೇಸ್ ಬುಕ್, ಟ್ವೇಟರ್ ಮುಂತಾದುವುಗಳ ಮೂಲಕ ಅಪರಿಚಿತರು ಪರಿಚಯ ಮಾಡಿಕೊಂಡು ನಿಮ್ಮನ್ನು ದುರ್ಬಳಿಸಿಕೊಂಡು ಅನಾಹುತಗಳಿಗೆ ಕಾರಣರಾಗುತ್ತಾರೆ ಎಂದು ಕಿವಿಮಾತು ತಿಳಿಸಿದರು. ಅಪರಿಚಿತ ಕರೆಗಳು ಸ್ವೀಕರಿಸಬೇಡಿ, ಸೇವ್ ಮಾಡಬೇಡಿ, ಮೇಸೇಜ್‍ಗಳಿಗೆ ರಿಪ್ಲೇ ಮಾಡಬೇಡಿ, ನಿಮ್ಮ ಪರಿಚಿತರ ಸಂಖ್ಯೆಗಳನ್ನು ಮಾತ್ರ ಸೇವ್ ಮಾಡಿ ಕರೆಗಳನ್ನು ಸ್ವೀಕರಿಸುವ ವ್ಯವಸ್ಥೆ ಮಾಡಿಕೊಳ್ಳಿ, ವಿಡಿಯೋ ಕಾಲ್ಸ್‍ಗಳ ಬಗ್ಗೆ ಹೆಚ್ಚು ಜಾಗೃತಿ ಅಗತ್ಯ, ಏನಾದರೂ ಅನುಚಿತ ಕರೆಗಳು, ವಿಡಿಯೋಗಳು, ಬೆದರಿಕೆ, ಹೂಡಿಕೆಗೆ ಆಮಿಷಗಳನ್ನು ಒಡ್ಡುವುದು ಇತ್ಯಾದಿಗಳ ಕುರಿತು ದೂರು ನೀಡಿ ಎಂದು ತಿಳಿಸಿದರು. ವಂಚಕರು ಅಂತರ್ಜಾಲದ ಸಂಪರ್ಕ ಪಡೆದು ಇತರರಿಗೆ ಕಂಪ್ಯೂಟರ್ ಸಂಪರ್ಕವನ್ನು ನಿರ್ಬಂಧಿಸುವುದು. ವೈರಸ್ ಹರಡಿ ಇಡೀ ಸಂಪರ್ಕವನ್ನು ನಾಶಪಡಿಸುವುದು, ದುರುದ್ದೇಶವುಳ್ಳ ತಂತ್ರಾಂಶವನ್ನು ಬಳಸಿ ಇನ್ನೊಬ್ಬರ ಕ್ರೆಡಿಟ್ ಕಾರ್ಡ್, ಬ್ಯಾಂಕ್ ಕಾರ್ಡ್‍ಗಳನ್ನು ನಕಲಿ ಮಾಡುವುದು, ಇನ್ನೊಬ್ಬರ ಬಗ್ಗೆ ತಪ್ಪು ಭಾವನೆ ಬರುವಂತೆ ಮಾಡುವುದು. ಬೆದರಿಕೆ ಮೂಲಕ ಭಯೋತ್ಪಾದನೆ ಉಂಟು ಮಾಡುವುದು ಆನ್‍ಲೈನ್ ವಂಚಕರ ಕೆಲಸವಾಗಿದೆ. ಕಡಿಮೆ ಬಡ್ಡಿಯಲ್ಲಿ ಸಾಲ ನೀಡುವುದಾಗಿ, ಲಾಟರಿ ಬಂದಿರುವುದಾಗಿ, ಕೆಲಸ ಕೊಡಿಸುವುದಾಗಿ, ಉಡುಗೊರೆ ಕೊಡುವುದಾಗಿ, ಕಡಿಮೆ ಬೆಲೆಯಲ್ಲಿ ದುಬಾರಿ ವಸ್ತುಗಳನ್ನು ಮಾರುತ್ತೇವೆ ಎಂಬುದಾಗಿ ನಿಮಗೆ ಮೊಬೈಲ್ ಕರೆ ಅಥವಾ ಇ-ಮೇಲ್ ಮಾಡಿದರೆ ಅದನ್ನು ನಂಬಬೇಡಿ. ಇದರಿಂದ ನಿಮ್ಮ ಹಣ ಪಾವತಿಮಾಡುವಂತೆ ಹೇಳಿ ನಂಬಿಸಿ ವಂಚಿಸುತ್ತಾರೆ. ಈ ಬಗ್ಗೆ ಎಚ್ಚರವಿರಲಿ ಹೀಗೆ ಸಮಾಜದಲ್ಲಿ ನಡೆಯುವ ಸೈಬರ್ ಕ್ರೈಂನ ಬಗ್ಗೆ ಮಾಹಿತಿ ನೀಡಿ, ಪ್ರತ್ಯೇಕವಾಗಿ ಹಿರಿಯ ನಾಗರಿಕರು ಪಿಂಚಣಿದಾರರನ್ನು ಕಲೆ ಹಾಕಿ ಮೋಸ ಮಾಡುವುದರ ಕುರಿತು ಹಾಗೂ ಡಿಜಿಟಲ್ ಬಂಧನದ ಕುರಿತು ಜಾಗೃತಿ ಮೂಡಿಸಿದರು. ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಮಾತನಾಡಿ ಭಾರತೀಯ ಸೇನೆಯು ಸದಾ ತಾಯಿನಾಡಿನ ಶಾಂತಿಗಾಗಿ ಸರಕಾರ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಸೇವೆ ಮಾಡುವುದರ ಬಗ್ಗೆ ಮನವರಿಕೆ ಮಾಡಿದರು. ಸಂಘದ ಸದಸ್ಯರು ಹಾಗೂ ಮಾಜಿ ಸೈನಿಕರಾದ ದಿವಂಗತ ಮಾಚಿಮಂಡ ಜಿ ಸೋಮಯ್ಯ ಅವರಿಗೆ ಸಂತಾಪ ಸೂಚಿಸಲಾಯಿತು.  ಈ ಸಂದರ್ಭ ವಿರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ಪಟ್ಟಚೆರುವಂಡ ಕೆ.ನಾಚಪ್ಪ, ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಚಂದ್ರಶೇಖರ್ ಬಿ.ಎಸ್., ಕಾರ್ಯದರ್ಶಿ ಪುಗ್ಗೇರ ಎಸ್.ನಂದಾ, ಖಜಾಂಚಿ ತೋರೇರ ಪೂವಯ್ಯ, ನಿರ್ದೆಶಕರಾದ ಚೇಂದ್ರಿಮಾಡ ಕೆ.ನಂಜಪ್ಪ, ಪಟ್ರಪಂಡ ಎಂ.ಕರುಂಬಯ್ಯ, ಕೊಂಗಂಡ ಎ.ಭೀಮಯ್ಯ, ಅಣ್ಣಾಳಮಾಡ ಡಿ.ಸುಬ್ಬಯ್ಯ, ಬಾಳೆಕುಟ್ಟೀರ ಎ.ಬೋಪಯ್ಯ, ಅಪ್ಪಯ್ಯ ಹೆಚ್.ಕೆ., ಕಬ್ಬಚ್ಚೀರ ಕೆ.ಬೋಪಣ್ಣ, ಎಂ.ಕೆ. ಸಲಾಂ ಕಡಂಗ, ಪಟ್ರಪಂಡ ಎನ್. ಚಂಗಪ್ಪ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪೊನ್ನಂಪೇಟೆ, NEWS DESK ಸೆ.26: ತಾಲೂಕಿನ ಶ್ರೀಮಂಗಲ-ನಾಲ್ಕೇರಿ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿಗೆ ₹1 ಕೋಟಿ ವೆಚ್ಚದ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ…

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.