Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
  • *ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*
  • *ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*
  • *ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೈಲ್ವೆ ಮಾರ್ಗಕ್ಕೆ ಭೂಸ್ವಾಧೀನವಾಗಿದೆ : ಸಂಸದರ ಆರೋಪ ಸುಳ್ಳು : ಎಂ.ಲಕ್ಷ್ಮಣ್ ಟೀಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೈಲ್ವೆ ಮಾರ್ಗಕ್ಕೆ ಭೂಸ್ವಾಧೀನವಾಗಿದೆ : ಸಂಸದರ ಆರೋಪ ಸುಳ್ಳು : ಎಂ.ಲಕ್ಷ್ಮಣ್ ಟೀಕೆ*

ಜನವರಿ 31, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.31 NEWS DESK : ಮೈಸೂರು- ಕುಶಾಲನಗರ ನಡುವಿನ ಸುಮಾರು 87 ಕಿ.ಮೀ ಉದ್ದದ ರೈಲು ಮಾರ್ಗದ ಯೋಜನೆಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರಕಾರ ಪೂರ್ಣಗೊಳಿಸಿದೆ. ಆದರೆ ಸಂಸದ ಯದುವೀರ್ ಒಡೆಯರ್ ಅವರು ಈ ವಿಚಾರದಲ್ಲಿ ರಾಜ್ಯ ಸರಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಟೀಕಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೈಸೂರು- ಕುಶಾಲನಗರ ರೈಲು ಮಾರ್ಗದ ಯೋಜನೆ ಆರ್ಥಿಕವಾಗಿ ಲಾಭದಾಯಕವಲ್ಲ ಎನ್ನುವ ಕಾರಣಕ್ಕೆ ರೈಲ್ವೆ ಇಲಾಖೆ ಈ ಯೋಜನೆಯನ್ನು ಕೈಬಿಟ್ಟಿದೆ. ಆದರೆ ಸಂಸದರು ರಾಜ್ಯ ಸರಕಾರ ಭೂಸ್ವಾಧೀನ ಪಡಿಸಿಕೊಳ್ಳುವಲ್ಲಿ ವಿಳಂಬ ಮಾಡಿರುವುದು ಕಾರಣವೆಂದು ಸುಳ್ಳು ಹೇಳಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಯದುವೀರ್ ಒಡೆಯರ್ ಅವರು ಸಂಸದರಾದ ನಂತರ ಅನೇಕ ಯೋಜನೆಗಳು ಸ್ಥಗಿತಗೊಂಡಿವೆ. ರಾಜ್ಯದ ಒಟ್ಟು 236 ತಾಲ್ಲೂಕುಗಳಲ್ಲಿ ಕೊಡಗು ಜಿಲ್ಲೆಯ 5 ತಾಲ್ಲೂಕುಗಳು ಸೇರಿದಂತೆ 80 ತಾಲ್ಲೂಕುಗಳಿಗೆ ಇಂದಿಗೂ ರೈಲ್ವೆ ಮಾರ್ಗವಿಲ್ಲ ಎಂದರು. ಕರಕುಶಲ ಕರ್ಮಿಗಳಿಗೆ ಉತ್ತೇಜನ ನೀಡಲು ‘ಒಂದು ಜಿಲ್ಲೆ, ಒಂದು ಉತ್ಪಾದನೆ’ ಯೋಜನೆಯಡಿ 193 ಕೋಟಿ ರೂ.ಗಳ ಯೂನಿಟ್ ಮಾಲ್ ತರಬೇತಿ ಕೇಂದ್ರ ಸ್ಥಾಪನೆಗೆ ಕೇಂದ್ರ ಸರಕಾರದ ಮೂಲಕ ಮಂಜೂರಾತಿ ದೊರೆತಿತ್ತು. ರಾಜ್ಯ ಸರಕಾರ ಇದಕ್ಕಾಗಿ ಮೈಸೂರಿನಲ್ಲಿ ಆರೂವರೆ ಎಕರೆ ಜಾಗವನ್ನು ಕೂಡ ನೀಡಿತ್ತು. ಸಂಸದ ಯದುವೀರ್ ಅವರು ಈ ಯೋಜನೆಗೆ ಭೂಮಿಪೂಜೆಯನ್ನು ಕೂಡ ನೆರವೇರಿಸಿದ್ದರು. ಆದರೆ ನಂತರದ ದಿನಗಳಲ್ಲಿ ಸಂಸದರ ತಾಯಿ ಇದು ನಮಗೆ ಸೇರಿದ ಜಾಗವೆಂದು ತಕರಾರು ತೆಗೆದರು. ಇದರಿಂದ 4ಲಕ್ಷ ಕರಕುಶಲ ಕರ್ಮಿಗಳಿಗೆ ತರಬೇತಿ ನೀಡಲು ಅನುಕೂಲಕರವಾಗಿದ್ದ ಯೋಜನೆ ಸ್ಥಗಿತಗೊಂಡಿದೆ ಎಂದು ಆರೋಪಿಸಿದರು. ಚಾಮುಂಡಿ ಬೆಟ್ಟದಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು 46 ಕೋಟಿ ರೂ.ಗಳ ಯೋಜನೆಯನ್ನು ರೂಪಿಸಲಾಗಿತ್ತು. ಆದರೆ ಇದು ಕೂಡ ನೆನೆಗುದಿಗೆ ಬಿದ್ದಿದೆ. ಸುಮಾರು 175 ಕೋಟಿ ರೂ.ಗಳ ಕ್ಯಾನ್ಸರ್ ಸೆಂಟರ್ ಸ್ಥಾಪನೆಯಾಗಿಲ್ಲ, ಮೈಸೂರು ಏರ್‍ಪೋರ್ಟ್ ವಿಸ್ತರಣೆ ಕಾರ್ಯಕ್ಕೆ ಕಾಳಜಿ ತೋರಿಲ್ಲ, ರಿಂಗ್ ರೋಡ್ ಗೆ ಎಳ್ಳುನೀರು ಬಿಡಲಾಗಿದೆ ಎಂದು ಟೀಕಿಸಿದರು. ಐಟಿ ಮತ್ತು ಇಡಿ ದಾಳಿ ವಿರೋಧ ಪಕ್ಷದವರ ಮೇಲೆಯೇ ನಡೆದಿದೆ, ಬಿಜೆಪಿಯವರು ಈ ದಾಳಿಯಲ್ಲಿ ಗುರಿಯಾಗುತ್ತಿಲ್ಲ. ಉದ್ಯಮಿ ಸಿ.ಜೆ.ರಾಯ್ ಅವರು ಆತ್ಮಹತ್ಯೆಗೆ ಶರಣಾಗಲು ಐಟಿ ದಾಳಿಯೇ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿದ ಎಂ.ಲಕ್ಷ್ಮಣ್, ದಾಳಿ ಮಾಡಿದವರ ವಿರುದ್ಧ ರಾಜ್ಯ ಸರಕಾರ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು. *ಶ್ವೇತಪತ್ರ ಹೊರಡಿಸಲಿ* ಯದುವೀರ್ ಅವರು ಸಂಸದರಾದ ನಂತರ ಮೈಸೂರು ಹಾಗೂ ಕೊಡಗು ಜಿಲ್ಲೆಗೆ ಕೇಂದ್ರದದಿಂದ ಯಾವ ಯೋಜನೆಯನ್ನು ತಂದಿದ್ದಾರೆ ಎನ್ನುವ ಕುರಿತು ಶ್ವೇತಪತ್ರ ಹೊರಡಿಸಲಿ ಎಂದು ಒತ್ತಾಯಿಸಿದರು. ಕೊಡಗಿನ ಮಾಜಿ ಶಾಸಕರುಗಳು ಈಗಿನ ಶಾಸಕರುಗಳ ಅಭಿವೃದ್ಧಿ ಕಾರ್ಯದ ಬಗ್ಗೆ ಚರ್ಚೆಗೆ ಬರಲಿ, ದಾಖಲೆ ಸಹಿತ ನಾವು ಚರ್ಚೆಗೆ ಸಿದ್ಧರಿದ್ದೇವೆ. ಇಂದು ಜಿಲ್ಲೆಯಲ್ಲಿ ಶಾಂತಿ ನೆಲೆಸಿದೆ, ನಾವು ಧರ್ಮದ ಆಧಾರದಲ್ಲಿ ರಾಜಕಾರಣ ಮಾಡುವವರಲ್ಲ, ಅಭಿವೃದ್ಧಿಯ ಆಧಾರದಲ್ಲಿ ರಾಜಕಾರಣ ಮಾಡುವವರು. ಇಲ್ಲಿರುವವರೆಲ್ಲರೂ ಭಾರತಮಾತೆಯ ಮಕ್ಕಳು, ಜಿಲ್ಲೆಯ ಶಾಸಕದ್ವಯರು ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ ಎಂದು ಎಂ.ಲಕ್ಷ್ಮಣ್ ತಿಳಿಸಿದರು.
ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಅವರು ಮಾತನಾಡಿ ವಿಬಿ.ಜಿ.ರಾಮ್ ಜಿ ಯೋಜನೆಯಿಂದಾಗುವ ದುಷ್ಪರಿಣಾಮದ ಕುರಿತು ಕಾಂಗ್ರೆಸ್ ಪಕ್ಷದಿಂದ ಜನಜಾಗೃತಿ ಮೂಡಿಸಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಮುಖ ಹೆಚ್.ಎಂ.ನಂದಕುಮಾರ್, ಮಹಿಳಾ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸುರಯ್ಯ ಅಬ್ರಾರ್, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಸೂರಜ್ ಹೊಸೂರು ಹಾಗೂ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೬ : ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ, ವಿರಾಜಪೇಟೆ ತಾಲ್ಲೂಕು, ಅಮ್ಮತ್ತಿ ಹೋಬಳಿ ಘಟಕ…

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026

*ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*

ಮಾರ್ಚ್ 6, 2026

*ಕರ್ನಾಟಕದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧ*

ಮಾರ್ಚ್ 6, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾಧ೯  ಸಹಕಾರಿ ಸಂಘದ ಅಧ್ಯಕ್ಷರಾಗಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷರಾಗಿ ಬಿ.ಬಿ.ಸ್ವಾತಿ ಅವಿರೋಧ ಆಯ್ಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.