Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಮಲೆತಿರಿಕೆ ಬೆಟ್ಟಕ್ಕೆ ಚಾರಣ : ಸತತ ಪರಿಶ್ರಮದಿಂದ ಮಾತ್ರ ಜೀವನದ ಗುರಿ ಸಾಧನೆ ಸಾಧ್ಯ : ಈರಮಂಡ ಹರಿಣಿ ವಿಜಯ್ ಅಭಿಮತ*
ಇತ್ತೀಚಿನ ಸುದ್ದಿಗಳು

*ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಮಲೆತಿರಿಕೆ ಬೆಟ್ಟಕ್ಕೆ ಚಾರಣ : ಸತತ ಪರಿಶ್ರಮದಿಂದ ಮಾತ್ರ ಜೀವನದ ಗುರಿ ಸಾಧನೆ ಸಾಧ್ಯ : ಈರಮಂಡ ಹರಿಣಿ ವಿಜಯ್ ಅಭಿಮತ*

February 2, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.2 : ದೃಢ ನಿರ್ಧಾರ ಹಾಗೂ ಸತತ ಪರಿಶ್ರಮದಿಂದ ಮಾತ್ರ ಜೀವನದ ಗುರಿಯನ್ನು ಸಾಧಿಸಲು ಸಾಧ್ಯ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ನ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್ ಅವರು ತಿಳಿಸಿದ್ದಾರೆ. ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಮೂರ್ನಾಡುವಿನ ಕೋಡಂಬೂರು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ವತಿಯಿಂದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗಾಗಿ ವಿರಾಜಪೇಟೆಯ ಮಲೆತಿರಿಕೆ ಬೆಟ್ಟದಲ್ಲಿ ನಡೆದ ಚಾರಣ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಲ್ಲಿ ಶಿಸ್ತು, ಸಂಯಮವನ್ನು ಕಲಿಸುವುದರ ಜೊತೆಗೆ ಸೇವಾ ಮನೋಭಾವವನ್ನು ವೃದ್ಧಿಸುತ್ತದೆ. ಧೈರ್ಯ, ಸಾಹಸ, ನಿಷ್ಠೆ, ಪ್ರಾಮಾಣಿಕತೆ, ದೇಶಪ್ರೇಮವನ್ನು ಬೆಳೆಸುತ್ತದೆ. ಪರಿಶ್ರಮದಿಂದ ಗುರಿ ಸಾಧಿಸುವ ಚಾರಣವು ಜೀವನದ ಪಾಠವನ್ನು ಹೇಳುತ್ತದೆ. ಸಾಧನೆಗೆ ದೃಢ ನಿರ್ಧಾರ ಅಗತ್ಯ, ಚಾರಣ ಮಾಡುವ ಸಂದರ್ಭ ದೇಹಕ್ಕೆ ಆಯಾಸವಾಗಬಹುದು. ಆದರೆ ಸುತ್ತಮುತ್ತಲ ಹಸಿರ ಪರಿಸರ, ಬೆಟ್ಟಗುಡ್ಡ, ಮರಗಿಡಗಳು, ಸುಂದರವಾದ ಹೂವುಗಳು ಮತ್ತು ಪಕ್ಷಿಗಳನ್ನು ಕಂಡಾಗ ಮನಸ್ಸಿನಲ್ಲಿ ಹೊಸ ಚೈತನ್ಯ ಮೂಡುತ್ತದೆ. ಸಹಪಾಠಿಗಳೊಂದಿಗೆ ಬೆಟ್ಟದ ತುದಿಗೇರಿದಾಗ ಆಗುವ ಅದ್ಭುತ ಅನುಭವ ಹಾಗೂ ಸಂತೋಷವೇ ಬೇರೆ ಎಂದು ತಿಳಿಸಿದರು.  ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸ್ಕೌಟ್ಸ್ ಮತ್ತು ಗೈಡ್ಸ್ ನ ನಿಯಮಗಳನ್ನು ಪಾಲಿಸುವಂತೆ ಹರಿಣಿ ವಿಜಯ್ ಕರೆ ನೀಡಿದರು. ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಶಿಲ್ಪಾ ಪೊನ್ನಮ್ಮ ಅವರು ಶಾಲೆಯ ಮುಖ್ಯದ್ವಾರದಲ್ಲಿ ಚಾರಣವನ್ನು ಉದ್ಘಾಟಿಸಿದರು. ದಂತ ಕಾಲೇಜ್ ಗೆ ಭೇಟಿ ನೀಡಿದ ವಿದಾರ್ಥಿಗಳಿಗೆ ಹರಿಣಿ ವಿಜಯ್ ಅವರು ಸೂಕ್ತ ಮಾಹಿತಿಯನ್ನು ನೀಡಿದರು. ನಂತರ ವಿದ್ಯಾರ್ಥಿಗಳು ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಾರ್ಥನೆ ಹಾಗೂ ಧ್ವಜಗೀತೆಯ ನಂತರ ವಿದ್ಯಾರ್ಥಿಗಳಿಗೆ ದೀಕ್ಷಾ ಸಮಾರಂಭ ನಡೆಯಿತು. ಶಾಲಾ ಸ್ಕೌಟ್ಸ್ ಶಿಕ್ಷಕಿ ಸುನೀತ ಸ್ವಾಗತಿಸಿದರು, ಗೈಡ್ಸ್ ಶಿಕ್ಷಕಿ ಸ್ವರ್ಣಲತಾ ವಂದಿಸಿದರು. ಮಡಿಕೇರಿ ಸ್ಥಳೀಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಆರ್.ಪಿ, ಸದಸ್ಯ ಸೂರಜ್ ತಿಮ್ಮಯ್ಯ, ಚಾರಣಕ್ಕೆ ಸಹಕಾರ ನೀಡಿದ ಹಿಮಾಲಯನ್ ವುಡ್ ಬ್ಯಾಡ್ಜ್ ನ ಗುಲ್ಶನ್ ಮತ್ತಿತರರು ಉಪಸ್ಥಿತರಿದ್ದರು.

 

 

Share. Facebook Twitter Pinterest LinkedIn Tumblr Email WhatsApp
Previous Article*ಫೆ.4ರಂದು ಕುಶಾಲನಗರದಲ್ಲಿ ಎಸ್‌ಡಿಟಿಯು ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಕಾರ್ಮಿಕ ಮಾಹಿತಿ ಶಿಬಿರ*
Next Article *ಯುವ ಆಪತ್ ಮಿತ್ರ ಯೋಜನೆ : ವಿಪತ್ತು ನಿರ್ವಹಣಾ ತರಬೇತಿ ವಸತಿ ಸಹಿತ ಶಿಬಿರಕ್ಕೆ ಅರ್ಜಿ ಆಹ್ವಾನ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.