Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಯುವನಿಧಿ ಯೋಜನೆ : ಕೊಡಗು ಜಿಲ್ಲೆಯಲ್ಲಿ 2116 ಮಂದಿ ಹೆಸರು ನೋಂದಣಿ : ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಯುವನಿಧಿ ಯೋಜನೆ : ಕೊಡಗು ಜಿಲ್ಲೆಯಲ್ಲಿ 2116 ಮಂದಿ ಹೆಸರು ನೋಂದಣಿ : ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಿ

ಫೆಬ್ರವರಿ 4, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ಫೆ.4 : ಸರ್ಕಾರದ ಪ್ರಮುಖ ಗ್ಯಾರಂಟಿಯಲ್ಲಿ ಒಂದಾದ ಯುವನಿಧಿ ಯೋಜನೆಯು ಜಾರಿಗೊಂಡು ಡಿಸೆಂಬರ್ ತಿಂಗಳಿಗೆ ಎರಡು ವರ್ಷ ಪೂರ್ಣಗೊಂಡಿದೆ. 2026 ಜನವರಿ ಅಂತ್ಯಕ್ಕೆ ಒಟ್ಟು 2,116 ಮಂದಿ ಹೆಸರು ನೋಂದಾಯಿಸಿದ್ದು, ಇವರಲ್ಲಿ 2,079 ಪದವಿ ಮತ್ತು 37 ಮಂದಿ ಡಿಪ್ಲೋಮಾ ಪದವೀದರರು ಒಳಗೊಂಡಿದ್ದಾರೆ. ಹಾಗೆಯೇ ಇವರಲ್ಲಿ 877 ಯುವಕರು ಹಾಗೂ 1239 ಮಂದಿ ಯುವತಿಯರು ಹೆಸರು ನೋಂದಾಯಿಸಿದ್ದಾರೆ. ಹೆಸರು ನೋಂದಾಯಿತ 2,116 ಯುವ ಜನರಲ್ಲಿ 1649 ಮಂದಿಗೆ ಡಿಬಿಟಿ ಮೂಲಕ ಪ್ರತೀ ತಿಂಗಳು ಹಣ ಪಾವತಿಯಾಗುತ್ತಿದೆ. ತಾಲ್ಲೂಕುವಾರು ಗಮನಿಸಿದಾಗ ಮಡಿಕೇರಿ 575 ಮಂದಿ ಹೆಸರು ನೋಂದಾಯಿಸಿದ್ದಾರೆ. ಕುಶಾಲನಗರ 339, ಪೊನ್ನಂಪೇಟೆ 237, ವಿರಾಜಪೇಟೆ 356 ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ 609 ಮಂದಿ ಹೆಸರು ನೋಂದಾಯಿಸಿದ್ದಾರೆ.
ಇವರಲ್ಲಿ ಮಡಿಕೇರಿ ತಾಲ್ಲೂಕಿನ 443 ಮಂದಿ, ಕುಶಾಲನಗರ 272, ಪೊನ್ನಂಪೇಟೆ 172, ಸೋಮವಾರಪೇಟೆ 480 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 282 ಮಂದಿಗೆ ಒಟ್ಟು 1649 ಮಂದಿಗೆ ಯುವನಿಧಿ ಯೋಜನೆ ಸೌಲಭ್ಯ ದೊರೆಯುತ್ತಿದೆ.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಜಾರಿಗೊಳಿಸಲಾಗಿರುವ ಯುವನಿಧಿ ಯೋಜನೆಯು ಯುವಜನತೆಯ ಉಜ್ವಲ ಭವಿಷ್ಯಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿಗೊಳಿಸಿದೆ.
ಪ್ರತಿ ತಿಂಗಳು ನಿರುದ್ಯೋಗಿ ಪದವೀದರರಿಗೆ ರೂ.3 ಸಾವಿರ ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1,500 ನ್ನು 2 ವರ್ಷಗಳವರೆಗೆ ನೀಡಲಾಗುತ್ತದೆ. 2023 ರಲ್ಲಿ ಪದವಿ, ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು, ಪದವಿ ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವವರು, ರಾಜ್ಯದಲ್ಲಿ ವಾಸವಿರುವ ಕನಿಷ್ಠ 6 ವರ್ಷದವರೆಗೆ ಪದವಿ, ಡಿಪ್ಲೋಮಾ ಉತ್ತೀರ್ಣರಾದವರಿಗೆ ಯುವನಿಧಿ ಸೌಲಭ್ಯ ಪಡೆಯಲು ಅರ್ಹರಿದ್ದಾರೆ. ಯಾವುದೇ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ http://sevasindhugs.karnataka.gov.inಗೆ ಭೇಟಿ ನೀಡಿ ಹಾಗೂ ಉಚಿತವಾಗಿ ಕರ್ನಾಟಕ ಒನ್, ಗ್ರಾಮ ಒನ್ ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳ ಮುಖಾಂತರ ಅರ್ಜಿ ಸಲ್ಲಿಸಬಹುದು. ‘ಸೇವಾ ಸಿಂಧು ಪೋರ್ಟಲ್ ಮುಖಪುಟದಲ್ಲಿರುವ ನ್ಯಾಡ್ ಲಿಂಕ್’ ಉಪಯೋಗಿಸಿಕೊಂಡು ತಮ್ಮ ದಾಖಲೆಗಳು ಅಪ್‌ಲೋಡ್ ಆಗುವುದನ್ನು ಖಚಿತಪಡಿಸಿಕೊಳ್ಳಬಹುದು. ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005999918 ಗೆ ಕರೆ ಮಾಡಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಸಿ.ಬಿ.ಮಂಜುನಾಥ್ ಅವರು ತಿಳಿಸಿದ್ದಾರೆ. ಮತ್ತಷ್ಟು ಮಾಹಿತಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಯಡಿ ನೋಂದವಣೆಯಾಗಿರುವ ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೋಮಾ ಹೊಂದಿರುವವರಿಗೆ ಆರ್ಥಿಕ ನೆರವು ನೀಡುವ ರೂಪದಲ್ಲಿ ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತಿದೆ. ಅದರಂತೆ ಪದವೀಧರರಿಗೆ ಮಾಸಿಕ ರೂ.3 ಸಾವಿರ ಮತ್ತು ಡಿಪ್ಲೋಮಾದವರಿಗೆ ಮಾಸಿಕ ರೂ.1500 ನೀಡಲಾಗುತ್ತಿದೆ.
ಯುವನಿಧಿ ಪ್ಲಸ್-ಕೌಶಲ್ಯ ತರಬೇತಿ ಕಾರ್ಯಕ್ರಮ: ಯುವನಿಧಿ ಫಲಾನುಭವಿಗಳು ಉಚಿತ ಕೌಶಲ್ಯ ತರಬೇತಿಯನ್ನು ಪಡೆಯಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವೆಬ್‌ಸೈಟ್ https://skillmission.Karnataka.gov.inಅನ್ನು ಕ್ಲಿಕ್ ಮಾಡಿ ನೋಂದಾಯಿಸಿಕೊಳ್ಳುವುದು. ಈ ಕೆಳಕಂಡ ತರಬೇತಿ ಸಂಸ್ಥೆಗಳ ಮುಖಾಂತರ ಅಒಏಏಙ ಯೋಜನೆಯಡಿಯಲ್ಲಿ ಉಚಿತ ತರಬೇತಿಯನ್ನು ನೀಡಲಾಗುವುದು. ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು. ಸಿಡಾಕ್. ಎಂ.ಎಸ್.ಪೊಸ್ಟರಿಟಿ ಕನ್ಸಲ್ಟಿಂಗ್ ಪ್ರೆöÊ.ಲಿ. ಶ್ರೀನಿಕೇತನ, ಹಳೆ ಖಾಸಗಿ ಬಸ್ ನಿಲ್ದಾಣದ ಹತ್ತಿರ, ಮಡಿಕೇರಿ Job Role: 1. IT Technica Support  Associate. IT Helpdesk Attendant. ಈ ತರಬೇತಿಯಿಂದ ಯುವನಿಧಿ ಯೋಜನೆಯ ಅಭ್ಯರ್ಥಿಗಳಿಗೆ ಕೌಶಲ್ಯದ ಬಗ್ಗೆ ಅರಿವು ಮೂಡಿಸಿ ಅವರ ಕೌಶಲ್ಯ ನೈಪುಣ್ಯತೆಯನ್ನು ಹೆಚ್ಚಿಸಿಕೊಳ್ಳುವುದರಿಂದ ಉದ್ಯೋಗ ಪಡೆಯಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ನ.7: ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಭಾಗದ ನಾಂಗಾಲ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಹಿಳಾ ಸಮಾಜದ ನೂತನ…

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026

ಗೂಂಡಾ ಕಾಯ್ದೆಯಡಿ ಕಳ್ಳತನ ಪ್ರಕರಣಗಳ ಆರೋಪಿ ಬಂಧನ; 25 ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

ನವೆಂಬರ್ 6, 2026

ವಿರಾಜಪೇಟೆ ಕ್ಷೇತ್ರದಲ್ಲಿ ಕಾನೂನುಬಾಹಿರವಾಗಿ ಮತದಾನದ ಹಕ್ಕು ರದ್ದಾಗಿದ್ದರೆ ದಾಖಲೆ ಸಹಿತ ಸಾಬೀತುಪಡಿಸಿ: ಕಾಂಗ್ರೆಸ್‌ಗೆ ಬಿಜೆಪಿ ವಕ್ತಾರ ರಾಕೇಶ್ ದೇವಯ್ಯ ಸವಾಲು

ನವೆಂಬರ್ 6, 2026

ಕ್ರೀಡಾಕೂಟದಲ್ಲಿ ಸಾಧನೆ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಕೊಡಗಿನ ವಿದ್ಯಾರ್ಥಿಗಳು

ನವೆಂಬರ್ 6, 2026

ದೀಪಾವಳಿ ಹಬ್ಬಕ್ಕೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ಆಕರ್ಷಕ ಕೊಡುಗೆ

ನವೆಂಬರ್ 6, 2026

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಿಂಪಡೆಯಲು ವಿಮೆನ್ ಇಂಡಿಯಾ ಮೂವ್‌ಮೆಂಟ್ ಒತ್ತಾಯ

ನವೆಂಬರ್ 6, 2026

ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ: ರಾಜ್ಯ ಸರ್ಕಾರಕ್ಕೆ ಕೊಡಗು ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ ಸಿಎಂ, ಡಿಸಿಎಂ ಹಾಗೂ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರಿಗೆ ಅಭಿನಂದನೆ; ಸಲ್ಲಿಸಿದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಎಂ.ಸಿ.

ನವೆಂಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.