Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಕಂಡು ಬಿಜೆಪಿ ಭ್ರಮನಿರಸನಗೊಂಡಿದೆ : ಸೋಮವಾರಪೇಟೆ ಕಾಂಗ್ರೆಸ್ ಟೀಕೆ*
ಇತ್ತೀಚಿನ ಸುದ್ದಿಗಳು

*ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಕಂಡು ಬಿಜೆಪಿ ಭ್ರಮನಿರಸನಗೊಂಡಿದೆ : ಸೋಮವಾರಪೇಟೆ ಕಾಂಗ್ರೆಸ್ ಟೀಕೆ*

February 4, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸೋಮವಾರಪೇಟೆ NEWS DESK ಫೆ.4 : ಬಿಜೆಪಿ ಶಾಸಕರು 25 ವರ್ಷಗಳಲ್ಲಿ ಮಾಡದ ಅಭಿವೃದ್ಧಿ ಕಾಮಗಾರಿಗಳನ್ನು ಹಾಲಿ ಶಾಸಕರಾದ ಡಾ.ಮಂತರ್‌ಗೌಡ ಅವರು ಎರಡೂವರೆ ವರ್ಷಗಳಲ್ಲಿ ಮಾಡಿದ್ದಾರೆ ಎಂದು ಬ್ಲಾಕ್ ಅಧ್ಯಕ್ಷ ಬಿ.ಬಿ.ಸತೀಶ್ ಹೇಳಿದರು. ಡಾ.ಮಂತರ್‌ಗೌಡ ಅವರ ಅಭಿವೃದ್ಧಿ ಕೆಲಸವನ್ನು ಕಂಡು ಬಿಜೆಪಿ ಭ್ರಮನಿರಸನಗೊಂಡು, ಪ್ರತಿಭಟನೆ ನೆಪದಲ್ಲಿ ಶಾಸಕರ ವಿರುದ್ಧ ಧಿಕ್ಕಾರ ಕೂಗಿ ಸಂತೋಷ ಪಡುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಬಿಜೆಪಿ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿಬೇಕು, ಚುನಾವಣೆ ಸಂದರ್ಭದಲ್ಲಿ ಮಾತ್ರ ಅವಶ್ಯಕತೆ ಇದ್ದಷ್ಟು ರಾಜಕೀಯ ಮಾಡಿದರೆ, ವ್ಯವಸ್ಥೆಗೂ ಒಳ್ಳೆಯದು ಎಂದು ಹೇಳಿದ ಅವರು, ಕ್ಷೇತ್ರದ ಜನರು ಬಿಜೆಪಿಯನ್ನು ಮರೆಯುತ್ತಿದ್ದಾರೆ ಎಂಬ ಆತಂಕದಿAದ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ ಎಂದು ದೂರಿದರು. ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿಯ ಹೆಚ್ಚಿನ ಬೂತ್‌ಗಳಲ್ಲಿ ಬಿಜೆಪಿಗೆ ಹೆಚ್ಚಿನ ಮತಗಳು ಬೀಳುತ್ತಿವೆ ಎಂಬುದು ಎಲ್ಲರಿಗೂ ತಿಳಿದಿರುವ ಸತ್ಯವಾಗಿದೆ. ಆದರೂ ಕಳೆದ 25 ವರ್ಷಗಳಿಂದ ತೋಳೂರುಶೆಟ್ಟಳ್ಳಿ, ಕೂತಿ ಮಾರ್ಗದ ರಸ್ತೆ ಅಭಿವೃದ್ಧಿಗೆ ಅಂದಿನ ಬಿಜೆಪಿ ಶಾಸಕರು ಅನುದಾನ ಕೊಡಲಿಲ್ಲ. ರಸ್ತೆ ಮಾಡಲು ಕಾಂಗ್ರೆಸ್ ಶಾಸಕರು ಗೆದ್ದು ಬರಬೇಕಾಯಿತು ಎಂದು ಟೀಕಿಸಿದರು. ಡಾ.ಮಂತರ್‌ಗೌಡ ಅವರು, ಅಲೇಕಟ್ಟೆ ರಸ್ತೆಯಿಂದ ಹರಪಳ್ಳಿ ಗ್ರಾಮದ ವರೆಗೆ ರಸ್ತೆ ಕಾಮಗಾರಿಗೆ 20 ಕೋಟಿ ರೂ.ಗಳ ಅನುದಾನ ಕಲ್ಪಿಸಿದ್ದಾರೆ. ಬಹುತೇಕ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಗುಣಮಟ್ಟದ ಕಾಮಗಾರಿ ನಡೆದಿರುವ ಬಗ್ಗೆ ಗ್ರಾಮಸ್ಥರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. ಅಲೇಕಟ್ಟೆ ರಸ್ತೆಯಲ್ಲಿ ಸ್ವಲ್ಪ ಭಾಗ ಕಾಂಕ್ರೀಟಿಕರಣವಾಗಬೇಕಿದೆ. ಕಳೆದ ಮೇ ಯಿಂದ ನವೆಂಬರ್ ತನಕ ಮಳೆಗಾಲವಿತ್ತು. ರಸ್ತೆ ಬದಿಯಲ್ಲಿ ಮರ ತೆರವುಗೊಳಿಸಲು ಅರಣ್ಯ ಇಲಾಖೆಯಿಂದ ಸಿಗಬೇಕಾದ ಅನುಮತಿ ವಿಳಂಬವಾಗಿರುವುದರಿಂದ ಒಂದೆರಡು ಕಿ.ಮಿ.ಕಾಮಗಾರಿ ವಿಳಂಬವಾಗಿದೆ. ಮಾರ್ಚ್ ಒಳಗೆ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಇಂಜಿನಿಯರ್‌ಗಳು ತಿಳಿಸಿದ್ದಾರೆ. ಈ ಸಮಸ್ಯೆಗಳು ಬಿಜೆಪಿ ಮುಖಂಡರಿಗೂ ಗೊತ್ತಿರುವ ವಿಷಯವಾಗಿದೆ. ಆದರೂ ಪ್ರತಿಭಟನೆ ನೆಪದಲ್ಲಿ ರಸ್ತೆಯಲ್ಲಿ ಬಾಳೆಗಿಡ ನೆಟ್ಟು, ಶಾಸಕರಿಗೆ ಧಿಕ್ಕಾರ ಕೂಗುವುದು ಖಂಡನೀಯ ಎಂದು ಹೇಳಿದರು. ಪ್ರತಿಭಟನೆಯಲ್ಲಿದ್ದ ಅನೇಕರು ಬಿಜೆಪಿ ಶಾಸಕರಿದ್ದ ಸಂದರ್ಭ ಗುತ್ತಿಗೆದಾರರಾಗಿ ಸಾಧನೆ ಮಾಡಿದವರು. ಕೆಲವರನ್ನು ಕಪ್ಪುಪಟ್ಟಿಗೆ ಸೇರಿಸುತ್ತೇನೆ ಎಂದು ಮಾಜಿ ಶಾಸಕರಾದ ಅಪ್ಪಚ್ಚು ರಂಜನ್ ಅವರು ಅಂದೇ ಎಚ್ಚರಿಕೆ ನೀಡಿದ್ದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗಿತ್ತು. ಈಗ ಅವರುಗಳು ರಸ್ತೆಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಎರಡೂವರೆ ವರ್ಷಗಳಲ್ಲಿ ಮಡಿಕೇರಿ ಕ್ಷೇತರೆ 1700 ಕೋಟಿ ರೂ.ಗಳಷ್ಟು ಅನುದಾನ ಹಾಲಿ ಶಾಸಕರು ತಂದಿದ್ದಾರೆ. ಬಿಜೆಪಿ ಮುಖಂಡರಿಗೆ ಅನುಮಾನವಿದ್ದರೆ, ಇಲಾಖೆಗಳ ಮೂಲಕ ಮಂಜೂರಾದ ಕಾಮಗಾರಿಗಳು, ಪ್ರಗತಿಯಲ್ಲಿರುವ ಕಾಮಗಾರಿಗಳು ಹಾಗು ಪೂರ್ಣಗೊಂಡ ಕಾಮಗಾರಿಗಳ ಬಗ್ಗೆ ಮಾಹಿತಿ ಹಕ್ಕಿನಲ್ಲಿ ವಿವರ ಪಡೆದುಕೊಳ್ಳಬಹುದು ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಮಹಿಳಾ ಘಟಕ ಅಧ್ಯಕ್ಷೆ ಜಾನಕಿ ವೆಂಕಟೇಶ್, ಬ್ಲಾಕ್ ಕಾರ್ಯದರ್ಶಿ ಕೆ.ಎಸ್.ಸುನಿಲ್, ಪ್ರಮುಖರಾದ ಬಿ.ಬಿ.ಬಸವರಾಜ್, ವಿ.ಎ.ಲಾರೆನ್ಸ್ ಹಾಗೂ ಎಸ್.ಐ.ಚೇತನ್ ಇದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಶಾಂತಳ್ಳಿಯಲ್ಲಿ ಹಿಂದೂ ಸಂಗಮ : ಕೇವಲ ಹಣ ಗಳಿಸುವ ಶಿಕ್ಷಣ ನೀಡಿದರಷ್ಟೇ ಸಾಲದು, ಸಂಸ್ಕಾರಯುತ ಶಿಕ್ಷಣ ನೀಡಬೇಕು*
Next Article *ಹೇಮಲತ ಜಿ.ಎಂ. ಗೆ ಪಿಎಚ್ ಡಿ ಪದವಿ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.