
ಮಡಿಕೇರಿ NEWS DESK ಫೆ.5 : ಮಾಯಮುಡಿ ಗ್ರಾಮ ಪಂಚಾಯಿತಿಯ ಗಾಂಧಿ ಗ್ರಾಮ ಪುರಸ್ಕಾರದ ಸಭಾಂಗಣ ಉದ್ಘಾಟನಾ ಸಮಾರಂಭ ಫೆ.7 ರಂದು ನಡೆಯಲಿದೆ. ಕೊಡಗು ಜಿ.ಪಂ, ಪೊನ್ನಂಪೇಟೆ ತಾ.ಪಂ ಮತ್ತು ಮಾಯಮುಡಿ ಗ್ರಾ.ಪಂ ಸಹಯೋಗದಲ್ಲಿ ಬೆಳಿಗ್ಗೆ 10.30 ಗಂಟೆಗೆ ಮಾಯಮುಡಿ ಗ್ರಾ.ಪಂ ಕಚೇರಿ ಕಟ್ಟಡದಲ್ಲಿ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಭಾಂಗಣವನ್ನು ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಾಕನ್, ವಿಧಾನ ಪರಿಷತ್ ಸದಸ್ಯರಾದ ಮಂಡೇಪAಡ ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ ಪಾಲ್ಗೊಳ್ಳಲಿದ್ದಾರೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಮಾಯಮುಡಿ ಗ್ರಾ.ಪಂ ಉಪಾಧ್ಯಕ್ಷರಾದ ಪಿ.ಎಸ್.ಶಾಂತ, ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ ಮುಖ್ಯ ಕಾರ್ಯನಿರ್ವಹಾಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಜಿ.ಪಂ ಉಪಕಾರ್ಯದರ್ಶಿ ಎಂ.ಸಿ.ಚAದ್ರಶೇಖರ್, ಪೊನ್ನಂಪೇಟೆ ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಕೆ.ಸಿ.ಅಪ್ಪಣ್ಣ ಮತ್ತಿತರರು ಉಪಸ್ಥಿತರಿರುವರು ಎಂದು ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.









