Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಂದಚೇರಿ ಗ್ರಾ.ಪಂ ನೂತನ ಕಟ್ಟಡ ಉದ್ಘಾಟನೆ : ರಾಜಕೀಯ ರಹಿತವಾಗಿ ಸೌಲಭ್ಯ ಒದಗಿಸಿ : ಶಾಸಕ ಎ.ಎಸ್.ಪೊನ್ನಣ್ಣ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಂದಚೇರಿ ಗ್ರಾ.ಪಂ ನೂತನ ಕಟ್ಟಡ ಉದ್ಘಾಟನೆ : ರಾಜಕೀಯ ರಹಿತವಾಗಿ ಸೌಲಭ್ಯ ಒದಗಿಸಿ : ಶಾಸಕ ಎ.ಎಸ್.ಪೊನ್ನಣ್ಣ ಕರೆ*

ಫೆಬ್ರವರಿ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.7 : ಗ್ರಾ.ಪಂ ಪ್ರತಿನಿಧಿಗಳು ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಬೇಕು ಮತ್ತು ರಾಜಕೀಯ ರಹಿತವಾಗಿ ಸಾರ್ವಜನಿಕರಿಗೆ ಸೌಲಭ್ಯಗಳನ್ನು ಒದಗಿಸಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಕರೆ ನೀಡಿದ್ದಾರೆ. ಕುಂದಚೇರಿ ಗ್ರಾ.ಪಂ ಚೆಟ್ಟಿಮಾನಿ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ಡಿಜಿಟಲ್ ಗ್ರಂಥಾಲಯ, ಅರಿವು ಕೇಂದ್ರ, ಅಂಚೆ ಕಚೇರಿ ಮತ್ತು ಸಂಜೀವಿನಿ ಒಕ್ಕೂಟದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು ಗ್ರಾ.ಪಂ ಪ್ರತಿನಿಧಿಗಳು ಅತ್ಯಂತ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು. ಕ್ಷೇತ್ರದಾದ್ಯAತ ನೂತನ ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ, ಎಲ್ಲಾ ಗ್ರಾ.ಪಂ ವ್ಯಾಪ್ತಿಯಲ್ಲು ಸರಕಾರಿ ಕಟ್ಟಡ ನಿರ್ಮಾಣಕ್ಕೆ ಅನುದಾನ ಒದಗಿಸಲಾಗುತ್ತಿದೆ. ಇದನ್ನು ಪಂಚಾಯಿತಿ ಪ್ರತಿನಿಧಿಗಳು ಸದುಪಯೋಗಪಡಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು. ತಾವು ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಗುರಿ ಹೊಂದಿದ್ದು, ಸರ್ವರೂ ಕೈಜೋಡಿಸಬೇಕೆಂದು ಎ.ಎಸ್.ಪೊನ್ನಣ್ಣ ಮನವಿ ಮಾಡಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ಕುಂದಚೇರಿ ಗ್ರಾ.ಪಂ ಯ ಹಿರಿಯ ಸದಸ್ಯ ಹ್ಯಾರಿಸ್ ಅವರು 1982 ರಲ್ಲಿ ಪಂಚಾಯ್ತಿಯ ಹಳೆಯ ಕಟ್ಟಡ ನಿರ್ಮಾಣಗೊಂಡಿತು, ಅಂದಿನಿAದ ಇಂದಿನವರೆಗೆ ನೂತನ ಕಟ್ಟಡದ ನಿರ್ಮಾಣಕ್ಕೆ ಸಹಕರಿಸಿದ ಸರ್ವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು. ಅಭಿವೃದ್ಧಿಗೆ ಮೊದಲ ಆದ್ಯತೆ ನೀಡುತ್ತಿರುವ ಹಾಲಿ ಶಾಸಕ ಎ.ಎಸ್.ಪೊನ್ನಣ್ಣ, ಮಾಜಿ ಶಾಸಕರು, ಗ್ರಾ.ಪಂ ನ ಉಪಾಧ್ಯಕ್ಷರು, ಆಡಳಿತ ಮಂಡಳಿ, ಸರ್ವ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಮಾಜಿ ಪ್ರತಿನಿಧಿಗಳು, ಈಗಿನ ಮತ್ತು ಹಿಂದಿನ ಜಿಲ್ಲಾಧಿಕಾರಿಗಳು, ದಾನಿಗಳು, ಜಿ.ಪಂ, ತಾ.ಪಂ, 1994ರಿಂದ ರಚನೆಗೊಂಡ ಆರು ಆಡಳಿತ ಮಂಡಳಿ ಸೇರಿದಂತೆ ಸರ್ವರ ಆಸಕ್ತಿಯಿಂದ ನೂತನ ಕಟ್ಟಡ ನಿರ್ಮಾಣಗೊಂಡು ಇಂದು ಉದ್ಘಾಟನೆಗೊಂಡಿದೆ ಎಂದರು. ಕುಂದಚೇರಿ ಗ್ರಾ.ಪಂ ಅಧ್ಯಕ್ಷ ಪಿ.ಬಿ.ದಿನೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
*ಸನ್ಮಾನ* ಶಾಸಕ ಎ.ಎಸ್.ಪೊನ್ನಣ್ಣ, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ತಾಲ್ಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ನೆರವಂಡ ಉಮೇಶ್, ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಮಂದ್ರೀರ ಮೋಹನ್ ದಾಸ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಶೇಖರ್, ಗ್ರಾ.ಪಂ ಅಧ್ಯಕ್ಷ ಪಿ.ಬಿ.ದಿನೇಶ್, ಉಪಾಧ್ಯಕ್ಷೆ ಬೇಬಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಎಂ.ಎಸ್.ಗAಗಮ್ಮ, ತಾಲ್ಲೂಕು ಎ.ಡಿ ಹೇಮಂತ್ ಹಾಗೂ ಗುತ್ತಿಗೆದಾರ ಇಸ್ಮಾಯಿಲ್ ಕಾನಾವು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪಂಚಾಯಿತಿ ಸದಸ್ಯರಾದ ವಿಶ್ವ ಪ್ರವೀಣ್ ಕುಮಾರ್, ಬಸಪ್ಪ, ಸವಿತ, ನಮಿತ, ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ಪುಷ್ಪ, ನೇತ್ರಾವತಿ, ರೂಪ, ಲಕ್ಷಿö್ಮ, ಹೇಮಲತ, ಅನುಜ, ನಯನ ಮತ್ತಿತರರು ಉಪಸ್ಥಿತರಿದ್ದರು. ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಹರೀಶ್ ಸ್ವಾಗತಿಸಿ ನಿರೂಪಿಸಿ, ವಂದಿಸಿದರು. ಚೆಟ್ಟಿಮಾನಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ನಾಡಗೀತೆಯನ್ನು ಹಾಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ…

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.