Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ*

ಫೆಬ್ರವರಿ 8, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.8 : ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು, ವಿಬಿ ರಾಮ್ ಜಿ ಯೋಜನೆಯನ್ನು ರದ್ದುಗೊಳಿಸಿ, ಹಿಂದಿನ ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ಆರಂಭಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು, ಸ್ವತಂತ್ರ ಒಕ್ಕೂಟಗಳಿಂದ ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಭಾಗವಾಗಿ ಫೆ.12 ರಂದು ಜಿಲ್ಲಾ ಕೇಂದ್ರ‍ ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಪಿ.ಆರ್.ಭರತ್ ಮಾತನಾಡಿ, ಕೇಂದ್ರ ಕಾರ್ಮಿಕ ಸಂಘಟನೆಗಳಿಂದ ನೀಡಲಾಗಿರುವ ಕರೆಯ ಹಿನ್ನೆಲೆಯಲ್ಲಿ ಅಂದು ಬೆಳಗ್ಗೆ 10.30 ಗಂಟೆಗೆ ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಆಯೋಜಿಸಲಾಗಿದೆ ಎಂದರು. ಕಾರ್ಮಿಕ ಸಂಘಟನೆಗಳ ಹೋರಾಟದ ಹಿನ್ನೆಲೆಯಲ್ಲಿ ಫೆ.12ರಂದು ಬಂದ್ ಎನ್ನುವ ತಪ್ಪು ಮಾಹಿತಿಯನ್ನು ಸಾರ್ವಜನಿಕವಾಗಿ ನೀಡಲಾಗುತ್ತಿದೆ. ಆದರೆ, ಅಂದು ಕಾರ್ಮಿಕರು ದಿನದ ಕೆಲಸದಿಂದ ಹೊರಗುಳಿದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ, ಹೋರಾಟದ ಹಿನ್ನೆಲೆಯಲ್ಲಿ ಬಂದ್ ಇರುವುದಿಲ್ಲವೆಂದು ಸ್ಪಷ್ಟಪಡಿಸಿದರು. ಹಲವು ದಶಕಗಳ ಹೋರಾಟಗಳಿಂದ ಕಾರ್ಮಿಕರಿಗೆ ನ್ಯಾಯ ಒದಗಿಸುವ 41 ಕಾನೂನುಗಳನ್ನು ದುಡಿಯುವ ವರ್ಗ ಪಡೆದುಕೊಂಡಿದೆ. ಇಂತಹ ಕಾನೂನುಗಳಲ್ಲಿ 21 ಕಾನೂನುಗಳನ್ನು ಇಂದಿನ ಕೇಂದ್ರ ಸರ್ಕಾರ ನಾಲ್ಕು ಲೇಬರ್ ಕೋಡ್‌ಗಳನ್ನಾಗಿ ಬದಲಿಸುವ ಮೂಲಕ, ಕಾರ್ಮಿಕ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುವ ಮೂಲಕ ಬಂಡವಾಳಶಾಹಿಗಳಿಗೆ ಅನುಕೂಲತೆಯನ್ನು ಕಲ್ಪಿಸಲು ಮುಂದಾಗಿದೆ. ಇಂತಹ ನಾಲ್ಕು ಕೋಡ್‌ಗಳನ್ನು ತಕ್ಷಣ ಕೇಂದ್ರ ಸರ್ಕಾರ ಹಿಂಪಡೆಯಬೇಕೆಂದು ಒತ್ತಾಯಿಸಿದರು. ಕೇಂದ್ರ ಸರ್ಕಾರ ತಂದಿರುವ ಕಾರ್ಮಿಕ ಕಾಯ್ದೆಗಳ ನಾಲ್ಕು ಕೋಡ್‌ಗಳ ವಿರುದ್ಧ ಕಾರ್ಮಿಕ ಸಂಘಟನೆಗಳಿಂದ ದೇಶವ್ಯಾಪಿ ದೊಡ್ಡ ಮಟ್ಟದ ಹೋರಾಟಗಳು ನಡೆದಿದೆ. ಹೀಗಿದ್ದೂ ಕೇಂದ್ರ ಸರ್ವಾಧಿಕಾರಿ ಧೋರಣೆಯಿಂದ ಇವುಗಳನ್ನು ಜಾರಿ ಮಾಡಿದೆ. ಈ ಬದಲಾದ ಕಾರ್ಮಿಕ ಕಾನೂನುಗಳಿಂದ ಕಾರ್ಮಿಕರ ದುಡಿಯುವ ಅವಧಿಯನ್ನು 8 ಗಂಟೆಗಳಿಂದ 12 ಗಂಟೆಗಳಿಗೆ ಹೆಚ್ಚಿಸಲಾಗಿದೆ. ಇದರಲ್ಲಿ ಕನಿಷ್ಟ ವೇತನಕ್ಕೆ ಯಾವುದೇ ಮಿತಿಯನ್ನು ಅಳವಡಿಸಿಯೇ ಇಲ್ಲ. ಇಡೀ ಜಗತ್ತಿನಲ್ಲೆ ಕಾರ್ಮಿಕರಿಗೆ ದುಡಿಯುವ ಕನಿಷ್ಟ ವೇತನವನ್ನು ನಿಗದಿಪಡಿಸಲಾಗಿದ್ದರೆ, ಇಲ್ಲಿ ಅದನ್ನು ತೆಗೆಯುವ ಕೆಲಸವಾಗಿದೆಯೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ಮುಖಂಡ ನೆರವಂಡ ಉಮೇಶ್, ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ, ಸಿಐಟಿಯು ಜಿಲ್ಲಾಧ್ಯಕ್ಷ ಎ.ಸಿ.ಸಾಬು ಮಾತನಾಡಿದರು. ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ನ ಕಾರ್ಮಿಕ ವಿಭಾಗದ ಗೌರವ ಕಾರ್ಯದರ್ಶಿ ಮಿನಾಜ್ ಪ್ರವೀಣ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ…

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.