Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”

ಫೆಬ್ರವರಿ 10, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK  ಫೆ.10 : ವಿರಾಜಪೇಟೆ ತಾಲ್ಲೂಕಿನ ಕಂಡಂಗಾಲ ಗ್ರಾಮದಲ್ಲಿ ಇದೇ ಪ್ರಥಮ ಬಾರಿಗೆ ಏ.2ರಿಂದ 4ರವರೆಗೆ ಕೊಡವ ಕುಟುಂಬಗಳ ನಡುವಣ “ಮುಲ್ಲೇಂಗಡ ಕಬಡ್ಡಿ ನಮ್ಮೆ”ಯನ್ನು ಆಯೋಜಿಸಲಾಗಿದೆ ಎಂದು ನಮ್ಮೆಯ ಸಂಚಾಲಕ ಮುಲ್ಲೇಂಗಡ ಮಧೋಶ್ ಪೂವಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಕಂಡಂಗಾಲ ಸರಕಾರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ, ಕರ್ನಾಟಕ ಕಬಡ್ಡಿ ಫೆಡರೇಷನ್ ನಿಯಮಾವಳಿಯಂತೆ ಮ್ಯಾಟ್ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ಸುಮಾರು 50 ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದರು. ಕಂಡಂಗಾಲ ಶಾಲಾ ಮೈದಾನದಲ್ಲಿ ಅಳವಡಿಸುವ ಮೂರು ಮ್ಯಾಟ್‌ಗಳಲ್ಲಿ ನಾಕ್ ಔಟ್ ಮಾದರಿಯಲ್ಲಿ ಪಂದ್ಯಗಳು ನಡೆಯಲಿವೆ. ಪ್ರತಿನಿತ್ಯ ಸುಮಾರು 15ರಿಂದ 20 ಪಂದ್ಯಗಳು ನಡೆಯಲಿದ್ದು, ಪಂದ್ಯಾವಳಿಯ ತಾಂತ್ರಿಕ ಸಮಿತಿಯಲ್ಲಿ ಕಬಡ್ಡಿ ಫೆಡರೇಷನ್‌ನ ತೀರ್ಪುಗಾರರು ಇರುತ್ತಾರೆ. ಕಬಡ್ಡಿ ಕ್ರೀಡೆಯನ್ನು ಉತ್ತೇಜಿಸುವ ಉದ್ದೇಶದಿಂದ ಪಂದ್ಯಾವಳಿಗೆ ಹೆಸರು ನೋಂದಾಯಿಸಿಕೊಳ್ಳುವ ಮೊದಲ ಹತ್ತು ತಂಡಗಳಿಗೆ ವಿಶೇಷ ನೆನಪಿನ ಕಾಣಿಕೆಯನ್ನು ನೀಡಲಾಗುತ್ತದೆ. ಪಂದ್ಯಾವಳಿಗೆ ಬಾಳೆಲೆಯ ಮಾಚಂಗಡ ತಂಡ ಪ್ರಥಮ ತಂಡವಾಗಿ ಮತ್ತು ಬಲ್ಯಮಂಡೂರುವಿನ ದೇಯಂಡ ತಂಡ ದ್ವಿತೀಯ ತಂಡವಾಗಿ ಈಗಾಗಲೆ ಹೆಸರನ್ನು ನೋಂದಾಯಿಸಿಕೊಂಡಿವೆ. ಆಸಕ್ತ ಕೊಡವ ಕುಟುಂಬಗಳು ಹತ್ತು ಆಟಗಾರರನ್ನು ಒಳಗೊಂಡ ತಮ್ಮ ತಂಡದ ಹೆಸರನ್ನು 1300 ರೂ. ಪ್ರವೇಶ ಶುಲ್ಕದೊಂದಿಗೆ ಮಾ.15ರ ಒಳಗಾಗಿ ನೋಂದಾಯಿಸಿಕೊಳ್ಳಬೇಕೆಂದು ಮನವಿ ಮಾಡಿದರು. ತಂಡಗಳ ನೋಂದಣಿಗೆ ಮಡಿಕೇರಿಯಲ್ಲಿ ಚೊಟ್ಟೆಯಂಡ ಸಂಜು ಕಾವೇರಪ್ಪ ಮೊ.9742728805, ಮೂರ್ನಾಡಿನಲ್ಲಿ ತೇಲಪಂಡ ಸುಬ್ಬಯ್ಯ ಮೊ.9591871957, ನಾಪೋಕ್ಲುವಿನಲ್ಲಿ ಶಿವಚಾಳಿಯಂಡ ಅಂಬಿ ಮೊ. 9448647337, ವಿರಾಜಪೇಟೆಯಲ್ಲಿ ತೂಕ್ ಬೊಳಕ್ ಪತ್ರಿಕಾ ಕಾರ್ಯಾಲಯ, ಮೂರ್ನಾಡು ರಸ್ತೆ, ವಿರಾಜಪೇಟೆ, ಪೊನ್ನಂಪೇಟೆಯಲ್ಲಿ ಐನಂಡ ಕೆ.ಬೋಪಣ್ಣ ಮೊ.9448607699, ದೇಯಂಡ ಸಂತೋಷ್ ಮೊ.8762694335, ಟಿ.ಶೆಟ್ಟಿಗೇರಿಯಲ್ಲಿ ಚೆಟ್ಟಂಗಡ ರವಿ ಸುಬ್ಬಯ್ಯ ಮೊ. 9880584732 ಇವರುಗಳನ್ನು ಸಂಪರ್ಕಿಸಬಹುದೆಂದು ತಿಳಿಸಿದರು. ಪಂದ್ಯಾವಳಿ ವಿಜೇತ ತಂಡಕ್ಕೆ 30 ಸಾವಿರ ರೂ. ನಗದು ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ 20 ಸಾವಿರ ರೂ.ನಗದು ಮತ್ತು ಆಕರ್ಷಕ ಟ್ರೋಫಿಯನ್ನು ಬಹುಮಾನವಾಗಿ ನೀಡಲಾಗುತ್ತದೆ. ಒಟ್ಟು ಪಂದ್ಯಾವಳಿಯನ್ನು ಸುಮಾರು 5 ಲಕ್ಷ ರೂ. ವೆಚ್ಚದಲ್ಲಿ ಆಯೋಜಿಸುತ್ತಿರುವುದಾಗಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮುಲ್ಲೇಂಗಡ ಕುಟುಂಬದ ಅಧ್ಯಕ್ಷರಾದ ಮುಲ್ಲೇಂಗಡ ಶಂಕರಿ ಪೊನ್ನಪ್ಪ, ಕ್ರೀಡಾ ನಿರ್ದೇಶಕರಾದ ಮುಲ್ಲೇಂಗಡ ರಘು ದೇವಯ್ಯ ಉಪಸ್ಥಿತರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ಸೋಮವಾರಪೇಟೆ ಮಾಸ್ಟರ್ ಪ್ಲಾನ್ ರಚನೆಗೆ ಸಾರ್ವಜನಿಕರಿಂದ ಸಲಹೆ ಆಹ್ವಾನ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ನಾಂಗಾಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿಪೂಜೆ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ನ.7: ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಭಾಗದ ನಾಂಗಾಲ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮಹಿಳಾ ಸಮಾಜದ ನೂತನ…

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026

ಗೂಂಡಾ ಕಾಯ್ದೆಯಡಿ ಕಳ್ಳತನ ಪ್ರಕರಣಗಳ ಆರೋಪಿ ಬಂಧನ; 25 ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

ನವೆಂಬರ್ 6, 2026

ವಿರಾಜಪೇಟೆ ಕ್ಷೇತ್ರದಲ್ಲಿ ಕಾನೂನುಬಾಹಿರವಾಗಿ ಮತದಾನದ ಹಕ್ಕು ರದ್ದಾಗಿದ್ದರೆ ದಾಖಲೆ ಸಹಿತ ಸಾಬೀತುಪಡಿಸಿ: ಕಾಂಗ್ರೆಸ್‌ಗೆ ಬಿಜೆಪಿ ವಕ್ತಾರ ರಾಕೇಶ್ ದೇವಯ್ಯ ಸವಾಲು

ನವೆಂಬರ್ 6, 2026

ಕ್ರೀಡಾಕೂಟದಲ್ಲಿ ಸಾಧನೆ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಕೊಡಗಿನ ವಿದ್ಯಾರ್ಥಿಗಳು

ನವೆಂಬರ್ 6, 2026

ದೀಪಾವಳಿ ಹಬ್ಬಕ್ಕೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ಆಕರ್ಷಕ ಕೊಡುಗೆ

ನವೆಂಬರ್ 6, 2026

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಿಂಪಡೆಯಲು ವಿಮೆನ್ ಇಂಡಿಯಾ ಮೂವ್‌ಮೆಂಟ್ ಒತ್ತಾಯ

ನವೆಂಬರ್ 6, 2026

ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ: ರಾಜ್ಯ ಸರ್ಕಾರಕ್ಕೆ ಕೊಡಗು ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ ಸಿಎಂ, ಡಿಸಿಎಂ ಹಾಗೂ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರಿಗೆ ಅಭಿನಂದನೆ; ಸಲ್ಲಿಸಿದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಎಂ.ಸಿ.

ನವೆಂಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.