Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
ಇತ್ತೀಚಿನ ಸುದ್ದಿಗಳು

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮೈಸೂರು, NEWS DESK ಫೆ. 11: ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿ ಹೊರಹೊಮ್ಮುತ್ತಿದೆ. ಇಲ್ಲಿಂದ ದೇಶ-ವಿದೇಶಗಳಿಗೆ ತೆರಳುವವರ ಸಂಖ್ಯೆಯೂ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಮೈಸೂರಿನಲ್ಲಿ ಈಗಿರುವ ಪಾಸ್‌ಪೋರ್ಟ್‌ ಸೇವಾ ಕೇಂದ್ರವನ್ನು ತತ್ಕಾಲ್‌ ಸೇವೆಯನ್ನೂ ಒಳಗೊಂಡಂತೆ ಪೂರ್ಣ ಪ್ರಮಾಣದ ಕೇಂದ್ರವನ್ನಾಗಿ ಮೇರ್ಲರ್ಜೆಗೇರಿಸಬೇಕು ಎಂದು *ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌* ಮನವಿ ಮಾಡಿದ್ದಾರೆ.

ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ನಂತರ ಸಂಸದ ಯದುವೀರ್‌ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮೈಸೂರಿನಲ್ಲಿರುವ ಅಂಚೆ ಕಚೇರಿ ಪಾಸ್‌ಪೋರ್ಟ್ ಸೇವಾ ಕೇಂದ್ರ (POPSK)ವನ್ನು ತತ್ಕಾಲ್ ಸೇವೆಗಳೊಂದಿಗೆ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್ ಸೇವಾ ಕೇಂದ್ರ (PSK)ವನ್ನಾಗಿ ಮೇಲ್ದರ್ಜೆಗೇರಿಸಬೇಕಾದ ಅಗತ್ಯವಿದೆ. ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ಪಾಸ್‌ಪೋರ್ಟ್ ಕಚೇರಿ ಆವರಣಕ್ಕೆ ಸ್ಥಳಾಂತರಿಸಲು ಮನವಿ ಸಲ್ಲಿಸಲಾಗಿದೆ ಎಂದರು.

ಮೈಸೂರಿನಲ್ಲಿ ಉನ್ನತ ಶಿಕ್ಷಣ, ಐಟಿ ವಲಯ, ಪ್ರವಾಸೋದ್ಯಮ ಮತ್ತು ವಿದೇಶಗಳಲ್ಲಿ ಉದ್ಯೋಗ ಕ್ಷೇತ್ರ ವಿಸ್ತರಣೆಯಾಗಿದೆ. ಮೈಸೂರು-ಕೊಡಗು ಕ್ಷೇತ್ರದಲ್ಲಿ ಪಾಸ್‌ಪೋರ್ಟ್ ಸೇವೆಗಳಿಗೆ ಬೇಡಿಕೆ ತೀವ್ರವಾಗಿದೆ ಎಂದರು

*ಬೆಂಗಳೂರಿಗೆ ಹೋಗಬೇಕಾದ ಅನಿವಾರ್ಯವಿದೆ*
ಸೀಮಿತ ಸಾಮರ್ಥ್ಯ ಮತ್ತು ತತ್ಕಾಲ್ ಸೇವೆ ಇಲ್ಲದಿರುವುದರಿಂದ ಪ್ರಸ್ತುತ ಅಂಚೆ ಕಚೇರಿ ಪಾಸ್‌ಪೋರ್ಟ್ ಸೇವಾ ಕೇಂದ್ರವು ಸಾರ್ವಜನಿಕ ಅಗತ್ಯಗಳನ್ನು ಪೂರೈಸಲು ಸಾಕಾಗುವುದಿಲ್ಲ, ಎಲ್ಲದ್ದಕ್ಕೂ ಬೆಂಗಳೂರಿಗೆ ತೆರಳಬೇಕಾದ ಅಗತ್ಯವಿದೆ, ಈ ನಿಟ್ಟಿನಲ್ಲಿ ಮೈಸೂರಿನಲ್ಲಿ ಪೂರ್ಣ ಕೇಂದ್ರವಾಗಿ ಮಾಡಬೇಕಿದೆ ಎಂದು ಮನವರಿಕೆ ಮಾಡಲಾಗಿದೆ ಎಂದು ಸಂಸದರು ವಿವರಿಸಿದರು.

ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಸ್ಥಾಪಿಸುವುದರಿಂದ ಈ ಪ್ರದೇಶದ ಜನರಿಗೆ ಸೇವಾ ವಿತರಣೆಯನ್ನು ಗಮನಾರ್ಹವಾಗಿ ಸುಧಾರಿಸುತ್ತದೆ ಮತ್ತು ಬೆಂಗಳೂರು ಪಾಸ್‌ಪೋರ್ಟ್ ಸೇವಾ ಕೇಂದ್ರಗಳ ಮೇಲೆ ಅವಲಂಬಿತವಾಗುವುದು ಕಡಿಮೆಯಾಗಲಿದೆ ಎಂದರು ಯದುವೀರ್‌ ತಿಳಿಸಿದರು.

ಈ ಮನವಿಯನ್ನು ಸ್ವೀಕರಿಸಿದ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್‌ ಒಡೆಯರ್‌ ಮಾಹಿತಿ ನೀಡಿದ್ದಾರೆ

*ಕೊಡಗಿನಲ್ಲಿ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಮನವಿ*

ನನ್ನ ಲೋಕಸಭಾ ಕ್ಷೇತ್ರವಾದ ಕೊಡಗಿನಲ್ಲಿ ಪಾಸ್‌ಪೋರ್ಟ್‌ ಪಡೆಯಬೇಕಾದದವರು ಮೈಸೂರು ಅಥವಾ ಬೆಂಗಳೂರಿಗೆ ತೆರಳಬೇಕಾದ ಅನಿವಾರ್ಯವಿದೆ. ಈ ನಿಟ್ಟಿನಲ್ಲಿ ಕೊಡಗಿನಲ್ಲಿ ಮೆಗಾ ಪಾಸ್‌ಪೋರ್ಟ್‌ ಮೇಳವನ್ನು ಆಯೋಜಿಸಬೇಕು ಎಂದು ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿಗಳಿಗೆ ಯದುವೀರ್‌ ಮನವಿ ಮಾಡಿದ್ದಾರೆ.

ಇದಕ್ಕೆ ಸ್ಪಂದಿಸಿರುವ ಅಧಿಕಾರಿಗಳು ಅತಿ ಶೀಘ್ರದಲ್ಲೇ ಪಾಸ್‌ಪೋರ್ಟ್‌ ಮೇಳ ಆಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಯದುವೀರ್‌ ಒಡೆಯರ್‌ ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
Next Article *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

Recommended: Website design development company services in Mangalore Forex Trading Teacher in India

Related Posts

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.