ಮಡಿಕೇರಿ, NEWS DESK ಫೆ.12:-ಮಡಿಕೇರಿ ಪ್ರಾದೇಶಿಕ ವಿಭಾಗದ ಮಡಿಕೇರಿ ವಲಯದ ವ್ಯಾಪ್ತಿಯಲ್ಲಿ ಬರುವ ಮಾಂದಲ್ ಪಟ್ಟಿ ಪ್ರವಾಸಿ ತಾಣದಲ್ಲಿ ರಸ್ತೆ ದುರಸ್ತಿ ಮತ್ತು ಅಭಿವೃದ್ಧಿ ಕಾರ್ಯ ಕೈಗೊಳ್ಳುವುದರಿಂದ ಫೆಬ್ರವರಿ, 16 ರಿಂದ 28 ರವರೆಗೆ ಮಾಂದಲ್ ಪಟ್ಟಿ ಪ್ರವಾಸಿ ತಾಣದಲ್ಲಿ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಹಾಗೂ ಯಾವುದೇ ವಾಹನಕ್ಕೆ ಪ್ರವೇಶವಿರುವುದಿಲ್ಲ ಎಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಅವರು ತಿಳಿಸಿದ್ದಾರೆ.








