Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ

ಫೆಬ್ರವರಿ 12, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK  ಫೆ.12 : ದುಡಿಯುವ ವರ್ಗಕ್ಕೆ ಮಾರಕವಾಗಿರುವ ಕೇಂದ್ರ ಸರಕಾರದ ನಾಲ್ಕು ಕಾರ್ಮಿಕ ಕೋಡ್‌ಗಳನ್ನು ಹಿಂದಕ್ಕೆ ಪಡೆಯಬೇಕು, ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ಮತ್ತೆ ಆರಂಭಿಸಬೇಕೆAದು ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಮತ್ತು ಸ್ವತಂತ್ರ ಒಕ್ಕೂಟಗಳಿಂದ ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಯಿತು.
ಜಂಟಿ ಕ್ರಿಯಾ ಸಮಿತಿಯ ಪ್ರಮುಖರ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ನಗರದ ಹಳೇ ಖಾಸಗಿ ಬಸ್ ನಿಲ್ದಾಣದ ಬಳಿಯಿಂದ ವಿವಿಧ ಕಾರ್ಮಿಕ ಸಂಘಟನೆಗಳ ನೂರಾರು ಮಂದಿ ಘೋಷಣೆಗಳ ಸಹಿತ ನಗರದ ಮುಖ್ಯ ಬೀದಿಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಗಾಂಧಿ ಮೈದಾನದಲ್ಲಿ ಸಮಾವೇಶಗೊಂಡು, ಕೇಂದ್ರ‍್ರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಪಿ.ಆರ್.ಭರತ್ ಮಾತನಾಡಿ, ಹಲ ದಶಕಗಳ ಹೋರಾಟಗಳಿಂದ ಕಾರ್ಮಿಕರಿಗೆ ನ್ಯಾಯ ಒದಗಿಸುವ 41 ಕಾನೂನುಗಳನ್ನು ದುಡಿಯುವ ವರ್ಗ ಪಡೆದುಕೊಂಡಿದೆ. ಇಂತಹ ಕಾನೂನುಗಳಲ್ಲಿ 21 ಕಾನೂನುಗಳನ್ನು ಇಂದಿನ ಕೇಂದ್ರ ಸರಕಾರ ನಾಲ್ಕು ಲೇಬರ್ ಕೋಡ್‌ಗಳನ್ನಾಗಿ ಬದಲಿಸುವ ಮೂಲಕ, ಕಾರ್ಮಿಕ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ಆ ಮೂಲಕ ಬಂಡವಾಳಶಾಹಿಗಳಿಗೆ ಅನುಕೂಲತೆಯನ್ನು ಕಲ್ಪಿಸಲು ಮುಂದಾಗಿದೆ ಎಂದು ಆರೋಪಿಸಿದರು. ಕಾರ್ಮಿಕ ಕಾಯ್ದೆಗಳ ನಾಲ್ಕು ಕೋಡ್‌ಗಳ ವಿರುದ್ಧ ಕಾರ್ಮಿಕ ಸಂಘಟನೆಗಳಿಂದ ದೇಶವ್ಯಾಪಿ ದೊಡ್ಡ ಮಟ್ಟದ ಹೋರಾಟಗಳು ನಡೆದಿದೆ. ಹೀಗಿದ್ದೂ ಕೇಂದ್ರ ಸರ್ವಾಧಿಕಾರಿ ಧೋರಣೆಯಿಂದ ಇವುಗಳನ್ನು ಜಾರಿ ಮಾಡಿದೆ. ಇದು ಕೇವಲ ಬಂಡವಾಳಶಾಹಿ ವರ್ಗವನ್ನು ಓಲೈಸುವ ಮತ್ತು ಅವರನ್ನು ಮತ್ತಷ್ಟು ಶ್ರೀಮಂತರನ್ನಾಗಿಸುವ ಪ್ರಯತ್ನವಾಗಿದೆ ಎಂದು ಟೀಕಿಸಿದರು. ಜಿಲ್ಲಾ ಕಾಂಗ್ರೆಸ್ ಪಕ್ಷದ ಪ್ರಮುಖ ಹಾಗೂ ರೈತ ಸಂಘದ ಮುಖಂಡ ನೆರವಂಡ ಉಮೇಶ್ ಮಾತನಾಡಿ, 2005ರಲ್ಲಿ ಮಹಾತ್ಮಾ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಆಶಯದಂತೆ ಜಾರಿಗೆ ತರಲಾದ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಕೇಂದ್ರ ಸರ್ಕಾರ ಬಡ ವರ್ಗದ ಹಿತಕ್ಕೆ ಧಕ್ಕೆಯನ್ನುಂಟು ಮಾಡುವ ವಿಬಿ ರಾಮ್ ಜಿ ಯೋಜನೆಯನ್ನು ಏಕ ಪಕ್ಷೀಯವಾಗಿ ಜಾರಿಗೆ ತಂದಿದೆ. ಕೇಂದ್ರದ ಬಿಜೆಪಿ ನೇತೃತ್ವದ ಸರಕಾರಕ್ಕೆ ಮಹಾತ್ಮಾ ಗಾಂಧಿ ತತ್ವಗಳ ಬಗ್ಗೆ ಯಾವುದೇ ನಂಬಿಕೆ ಇಲ್ಲವಾದ್ದರಿಂದ, ಮಹಾತ್ಮಾ ಗಾಂಧಿ ನರೇಗಾ ಯೋಜನೆಯನ್ನು ಕೈಬಿಟ್ಟು ಹೊಸ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಆರೋಪಿಸಿದರು. ಕರ್ನಾಟಕ ಸರಕಾರ ಕಾರ್ಮಿಕ ಸಂಹಿತೆಗಳಿಗೆ ಸೇವಾ ನಿಯಮಾವಳಿಗಳನ್ನು ರಚಿಸಬಾರದು ಮತ್ತು ಉಳಿದ ಎಲ್ಲಾ ಜನ ವಿರೋಧಿ ಮಸೂದೆಗಳನ್ನು ಹಿಂದಕ್ಕೆ ಪಡೆಯಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯ ಸಂದರ್ಭ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರಿಗೆ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಪ್ರಮುಖರು ಮನವಿ ಪತ್ರ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಎಐಟಿಯುಸಿ ಜಿಲ್ಲಾಧ್ಯಕ್ಷ ಹೆಚ್.ಎಂ.ಸೋಮಪ್ಪ, ಸಿಐಟಿಯು ಜಿಲ್ಲಾಧ್ಯಕ್ಷ ಎ.ಸಿ.ಸಾಬು, ಜಂಟಿ ಕ್ರಿಯಾ ಸಮಿತಿಯ ಡಿ.ಎಸ್.ನಿರ್ವಾಣಪ್ಪ, ಕಾಂಗ್ರೆಸ್ ಮುಖಂಡರಾದ ಟಿ.ಪಿ.ರಮೇಶ್, ಜಿಲ್ಲಾ ಕಾಂಗ್ರೆಸ್‌ನ ಕಾರ್ಮಿಕ ವಿಭಾಗದ ಅಧ್ಯಕ್ಷ ಕೆ.ಆರ್.ದಿನೇಶ್, ಗೌರವ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷರಾದ ಮಣಿ, ಐಎನ್‌ಟಿಯುಸಿ ಜಿಲ್ಲಾಧ್ಯಕ್ಷ ಅಣ್ಣಯ್ಯ, ಕೊಡಗು ಜಿಲ್ಲಾ ಜನರಲ್ ವಕರ‍್ಸ್ ಯೂನಿಯನ್ ಕಾರ್ಯದರ್ಶಿ ಮಹದೇವ್, ಅಂಗನವಾಡಿ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷೆ ಸುಮಿತ್ರ, ಪ್ರಧಾನ ಕಾರ್ಯದರ್ಶಿ ಜಮುನ, ಬಿಸಿ ಊಟ ಕಾರ್ಮಿಕರ ಸಂಘದ ಅಧ್ಯಕ್ಷೆ ಕುಸುಮ, ಕಾಫಿ ಕ್ಯೂರಿಂಗ್ ವಕರ‍್ಸ್ ಯೂನಿಯನ್ ಅಧ್ಯಕ್ಷರಾದ ಮಂಜುನಾಥ್, ಆಸ್ಪತ್ರೆ ನೌಕರರ ಸಂಘದ ಅಧ್ಯಕ್ಷೆ ಜಾನಕಿ, ತೋಟ ಕಾರ್ಮಿಕ ಸಂಘದ ಪುಷ್ಪ, ಕಟ್ಟಡ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಶಾಜಿ ರಮೇಶ್, ರೈತ ಸಂಘದ ಮುಖಂಡರಾದ ಲಕ್ಷ್ಮಣ್, ಕರ್ನಾಟಕ ಪ್ರಾಂತ ರೈತ ಸಂಘÀದ ಪ್ರಮುಖ ಟಿ.ಟಿ.ಉದಯ ಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.‌

Follow us Follow us
Share. WhatsApp Facebook Twitter Email Telegram Copy Link

Related Posts

ಕಕ್ಕಬೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣರಿಂದ ಭೂಮಿಪೂಜೆ; ₹3 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ

ನವೆಂಬರ್ 6, 2026

ನಾಪೋಕ್ಲು ಕೆಪಿಎಸ್ ಶಾಲೆಯ ಎಸ್.ಡಿ.ಎಂ.ಸಿ ಸಭೆಯಲ್ಲಿ ಶಾಸಕ ಪೊನ್ನಣ್ಣ ಭಾಗಿ

ನವೆಂಬರ್ 6, 2026

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಜಿಲ್ಲಾಡಳಿತ ಮನವಿ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ; ಹಸಿರು ಪಟಾಕಿಗಳ ಬಳಕೆ ಕಡ್ಡಾಯ

ನವೆಂಬರ್ 5, 2026

ನಾಪೋಕ್ಲು ಕೆಪಿಎಸ್ ಶಾಲೆಯ ಎಸ್.ಡಿ.ಎಂ.ಸಿ ಸಭೆಯಲ್ಲಿ ಶಾಸಕ ಪೊನ್ನಣ್ಣ ಭಾಗಿ

ನವೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ನ.6: ನಾಪೋಕ್ಲು ಕೆಪಿಎಸ್ ಶಾಲೆಯಲ್ಲಿ ನಡೆದ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್.ಡಿ.ಎಂ.ಸಿ) ಸಭೆಯಲ್ಲಿ…

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಜಿಲ್ಲಾಡಳಿತ ಮನವಿ; ರಾತ್ರಿ 8ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ; ಹಸಿರು ಪಟಾಕಿಗಳ ಬಳಕೆ ಕಡ್ಡಾಯ

ನವೆಂಬರ್ 5, 2026

ಮಡಿಕೇರಿಯಲ್ಲಿ ಗಮನ ಸೆಳೆದ ಕಲಾ ಪ್ರತಿಭೋತ್ಸವ; ಸಾಂಸ್ಕೃತಿಕ ಶ್ರೀಮಂತಿಕೆ ಕೊಡಗಿನ ಹೆಗ್ಗಳಿಕೆ: ಟಿ.ಪಿ.ರಮೇಶ್

ನವೆಂಬರ್ 5, 2026

ವನ್ಯಜೀವಿ ಹೆಜ್ಜೆ ಗುರುತು ಪತ್ತೆ

ನವೆಂಬರ್ 5, 2026

ರಾಜ್ಯ ಸರ್ಕಾರದಿಂದ ಬೆಲೆ ಏರಿಕೆಯ ಬರೆ: ಜನಸಾಮಾನ್ಯರು ಸಂಕಷ್ಟದಲ್ಲಿ – ರಾಷ್ಟ್ರಪತಿ ಆಳ್ವಿಕೆಗೆ ಕೊಡಗು ಬಿಜೆಪಿ ಎಸ್‌ಟಿ ಮೋರ್ಚಾ ಆಗ್ರಹ

ನವೆಂಬರ್ 5, 2026

ಸುಂಟಿಕೊಪ್ಪದಲ್ಲಿ ದಿವಂಗತ ಬಿ.ಜಿ. ರಘುನಾಥ್ ನಾಯ್ಕ ಸ್ಮಾರಕ ದತ್ತಿ ನಿಧಿ ಕಾರ್ಯಕ್ರಮ

ನವೆಂಬರ್ 5, 2026

ಸುಂಟಿಕೊಪ್ಪದಲ್ಲಿ ಸಮಸ್ಯೆಗಳ ಸರಮಾಲೆ: ವೇವ್ ಸಂಸ್ಥೆ ಅಸಮಾಧಾನ; ತ್ಯಾಜ್ಯ ವಿಲೇವಾರಿ, ಹದಗೆಟ್ಟ ರಸ್ತೆಗಳು, ವೈದ್ಯರ ಕೊರತೆಗೆ ಆಕ್ರೋಶ – ಸಮಸ್ಯೆ ಪರಿಹಾರವಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ

ನವೆಂಬರ್ 5, 2026

ಐದು ದಶಕಗಳ ಭತ್ತದ ಕೃಷಿ ಅನುಭವಕ್ಕೂ ಈ ಬಾರಿ ಕೈಕೊಟ್ಟ ಫಸಲು; ಆರ್‌ಎನ್‌ಆರ್ ಭತ್ತದ ತಳಿಯ ಇಳುವರಿ ಕುಸಿತ: ರೈತ ಪಟ್ಟೆಮನೆ ಉದಯಕುಮಾರ್ ಅಳಲು

ನವೆಂಬರ್ 5, 2026

ಪನ್ಯ ತೋಟದಲ್ಲಿ ಹುಲಿ ಅಥವಾ ಚಿರತೆ ಹೆಜ್ಜೆ ಗುರುತು ಪತ್ತೆ : ಸಾರ್ವಜನಿಕರಲ್ಲಿ ಆತಂಕ

ನವೆಂಬರ್ 5, 2026

ಮಡಿಕೇರಿ ಲಯನ್ಸ್ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವದ ಅಮೃತ ಮಹೋತ್ಸವ ಆಚರಣೆ; ಕೃತಕ ಬುದ್ಧಿಮತ್ತೆಯ ವ್ಯವಸ್ಥೆ ನಮಗೇ ಬುದ್ಧಿ ಕಲಿಸುವಂತಾಗಿದೆ: ಅನಿಲ್ ಹೆಚ್.ಟಿ. ಆತಂಕ

ನವೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.