ಮಡಿಕೇರಿ NEWS DESK ಫೆ.12 : ಎನ್.ಸತೀಶ್ ಕುಮಾರ್, ಐಪಿಎಸ್, ಪೊಲೀಸ್ ಮಹಾ ನಿರೀಕ್ಷಕರು, ಕೇಂದ್ರಸ್ಥಾನ-1, ಬೆಂಗಳೂರು ಇವರು ಇಂದು ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ ಕಚೇರಿಯ ಪರಿಶೀಲನೆ ನಡೆಸಿದರು. ನಂತರ ಜಿಲ್ಲೆಯ ಅಧಿಕಾರಿಗಳ ಸಭೆ ನಡೆಸಿ ಅಪರಾಧ ಪತ್ತೆ, ತನಿಖೆ ಮತ್ತು ಕಾನೂನು ಸುವ್ಯವಸ್ಥೆ ವಿಚಾರಗಳಲ್ಲಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಎನ್.ಬಿಂದುಮಣಿ ಇದ್ದರು.








