Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಶ್ರೀ ಕೋದಂಡ ರಾಮೋತ್ಸವ ಸಮಿತಿಯಿಂದ ಮಾ.25, 26 ಮತ್ತು 27ರಂದು ಅದ್ದೂರಿ ರಾಮೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಶ್ರೀ ಕೋದಂಡ ರಾಮೋತ್ಸವ ಸಮಿತಿಯಿಂದ ಮಾ.25, 26 ಮತ್ತು 27ರಂದು ಅದ್ದೂರಿ ರಾಮೋತ್ಸವ*

ಫೆಬ್ರವರಿ 14, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.14 : ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ ಮಾ.25, 26 ಮತ್ತು 27ರಂದು ಮಡಿಕೇರಿ ನಗರದಲ್ಲಿ ಶ್ರೀ ರಾಮನವಮಿ ಪ್ರಯುಕ್ತ 36ನೇ ವರ್ಷದ ರಾಮೋತ್ಸವ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಲಿದೆ. ಈ ಕುರಿತು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶ್ರೀ ಕೋದಂಡ ರಾಮೋತ್ಸವ ಸಮಿತಿಯ ಅಧ್ಯಕ್ಷ ಕೆ.ಎಂ.ಗಣೇಶ್ ಅವರು “ಸರ್ವೇಜನಾ: ಸುಖಿನೋಭವಂತು” ಆದರ್ಶದಡಿ ಸರ್ವ ಸಮುದಾಯಗಳು ಒಗ್ಗೂಡಿ ಮೂರು ದಿನಗಳ ರಾಮೋತ್ಸವ ಕಾರ್ಯಕ್ರಮಗಳನ್ನು ಶ್ರದ್ಧಾಭಕ್ತಿ ಮತ್ತು ವಿಜೃಂಭಣೆಯಿಂದ ಯಶಸ್ವಿಗೊಳಿಸುವುದಾಗಿ ತಿಳಿಸಿದರು. ಕಳೆದ ವರ್ಷ ಶ್ರೀರಾಮನ ಆದರ್ಶಗಳನ್ನು ಪಾಲನೆ ಮಾಡುತ್ತಾ ಸಾವಿರಾರು ಭಕ್ತರು ರಾಮೋತ್ಸವವನ್ನು ಸಂಭ್ರಮಿಸಿದ್ದಾರೆ, ನಗರದಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸಿದ್ದಾರೆ. ಈ ಬಾರಿ ಕೂಡ ದಾನಿಗಳು ಸೇರಿದಂತೆ ಸರ್ವರ ಸಹಕಾರದಿಂದ ರಾಮೋತ್ಸವ ಸಡಗರದಿಂದ ನಡೆಯಲಿದ್ದು, ಸುಮಾರು 30ಲಕ್ಷ ರೂ. ಖರ್ಚಾಗಲಿದೆ ಎಂದರು. ಮಾ.25 ರಂದು ಸಂಜೆ 6 ಗಂಟೆಗೆ ನಗರದಲ್ಲಿ ಶ್ರೀರಾಮನ ಪಲ್ಲಕ್ಕಿ ಮತ್ತು ಕಳಸದೊಂದಿಗೆ ಭಕ್ತರ ಬೃಹತ್ ಮೆರವಣಿಗೆ ನಡೆಯಲಿದೆ. ಶ್ರೀಕೋದಂಡರಾಮ ದೇವಾಲಯದಲ್ಲಿ ರಾತ್ರಿ ಭಕ್ತರಿಗೆ ಅನ್ನಸಂತರ್ಪಣೆಯಾಗಲಿದೆ. ಮಾ.26 ರಂದು ಶ್ರೀಕೋದಂಡರಾಮ ದೇವಾಲಯದಲ್ಲಿ ಬೆಳಿಗ್ಗೆಯಿಂದ ದೈವ ನೃತ್ಯ, ಮಹಾಪೂಜೆ, ಪ್ರತಿಷ್ಠಾಪನಾ ವಾರ್ಷಿಕೋತ್ಸವ, ರಾಮನವಮಿ ಕಾರ್ಯಕ್ರಮಗಳು ಹಾಗೂ ಭಜನೆ ಶ್ರದ್ಧಾಭಕ್ತಿಯಿಂದ ಜರುಗಲಿದೆ. ಮಾ.27 ರಂದು ಸಂಜೆ 6.30 ಗಂಟೆಗೆ ನಗರದ ಬನ್ನಿ ಮಂಟಪದ ಬಳಿಯಿಂದ ದೇವಾನುದೇವತೆಗಳ ಸ್ತಬ್ಧಚಿತ್ರಗಳು ಮತ್ತು ಜಾನಪದ ಕಲಾತಂಡಗಳ ಬೃಹತ್ ಶೋಭಾಯಾತ್ರೆ ಸಾಗಲಿದೆ. ಈ ಶೋಭಾಯಾತ್ರೆಗೆ ಮಕ್ಕಳ ಮಂಟಪಗಳ ಮೆರಗು ಜೊತೆಯಾಗಲಿದೆ. ಒಂದು ಟ್ರಾö್ಯಕ್ಟರ್ ಮಾತ್ರ ಬಳಸಬಹುದಾಗಿದ್ದು, 20 ಸ್ತಬ್ಧಚಿತ್ರಗಳಿಗೆ ಅವಕಾಶ ಕಲ್ಪಿಸಲಾಗುವುದು. ಶೋಭಾಯಾತ್ರೆಯಲ್ಲಿ ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲು ಆಸಕ್ತಿ ಇರುವವರು 9880778047 ನ್ನು ಸಂಪರ್ಕಿಸಬಹುದಾಗಿದೆ. ನಗರದ ಗಾಂಧಿ ಮೈದಾನದಲ್ಲಿ ಸಂಜೆ 6 ಗಂಟೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆಯಲಿವೆ. ರಾಜ್ಯ ಮಟ್ಟದ ಹಾಗೂ ಕೊಡಗು ಜಿಲ್ಲೆಯ ಕಲಾತಂಡಗಳಿಂದ, ಕಲಾವಿದರಿಂದ ವಿವಿಧ ಸಾಂಸ್ಕೃತಿಕ ವೈಭವ ವಿಜೃಂಭಿಸಲಿದೆ. ಎಲ್ಲಾ ಕಾರ್ಯಕ್ರಮಗಳು ಮಿನಿ ದಸರಾದಂತೆ ನಡೆಯಲಿದ್ದು, ಶಾಸಕರಾದಿಯಾಗಿ ಹಲವು ದಾನಿಗಳು ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು. ಶೋಭಾಯಾತ್ರೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು 5 ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ. ಕಳೆದ ವರ್ಷ ಸರ್ವ ಭಕ್ತರ, ಎಲ್ಲಾ ಸಮುದಾಯದ ಜನರ, ಸಂಘ ಸಂಸ್ಥೆಗಳ ಪ್ರಮುಖರ, ಜನಪ್ರತಿನಿಧಿಗಳ, ಅಧಿಕಾರಿಗಳ, ಪೊಲೀಸ್ ಇಲಾಖೆಯ ಹಾಗೂ ದಾನಿಗಳ ಸಹಕಾರದಿಂದ ಶ್ರದ್ಧಾಭಕ್ತಿಯ ರಾಮೋತ್ಸವ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಮತ್ತು ಅತ್ಯಂತ ಯಶಸ್ವಿಯಾಗಿ ನಡೆಸಲು ಸಾಧ್ಯವಾಯಿತು. ಈ ಬಾರಿಯೂ ಸರ್ವರ ಸಹಕಾರವನ್ನು ಕೋರುತ್ತಿದ್ದೇವೆ ಎಂದರು. ಶ್ರೀಕೋದಂಡ ರಾಮೋತ್ಸವ ಸಮಿತಿಯ ಅಧ್ಯಕ್ಷರಾಗಿ ಕೆ.ಎಂ.ಗಣೇಶ್, ಪ್ರಧಾನ ಕಾರ್ಯದರ್ಶಿಯಾಗಿ ಬೊಳ್ಳಜಿರ ಬಿ.ಅಯ್ಯಪ್ಪ, ಉಪಾಧ್ಯಕ್ಷರುಗಳಾಗಿ ಅಂಬೆಕಲ್ ನವೀನ್, ಸವಿತಾ ರಾಕೇಶ್, ಡಾ.ಎಸ್.ಎಂ.ಧನಂಜಯ್, ಗೌರವ ಅಧ್ಯಕ್ಷರಾಗಿ ಕೋಲೆಯಂಡ ನಿಶಾ ಮೋಹನ್, ಖಜಾಂಚಿಯಾಗಿ ಕೋಲೆಯಂಡ ಡಾ.ಮೋಹನ್ ಅಪ್ಪಾಜಿ, ಮುಖ್ಯ ಸಲಹೆಗಾರರಾಗಿ ಜಿ.ರಾಜೇಂದ್ರ, ಶ್ರೀಕೋದಂಡರಾಮ ಟ್ರಸ್ಟ್ ನ ಅಧ್ಯಕ್ಷರಾಗಿ ಹೆಚ್.ಎನ್.ಹೆಚ್.ಎನ್.ನಂಜುಂಡ ಹಾಗೂ ಜ್ಯೋತಿ ಯುವಕ ಸಂಘದ ಅಧ್ಯಕ್ಷರಾಗಿ ಹೆಚ್.ಎನ್.ವಿಶ್ವ ಕಾರ್ಯನಿರ್ವಹಿಸುತ್ತಿದ್ದಾರೆ. ರಾಮೋತ್ಸವ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ಮತ್ತು ಅತ್ಯಂತ ಯಶಸ್ವಿಯಾಗಿ ನಡೆಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಅಲಂಕಾರ ಸಮಿತಿಯ ಅಧ್ಯಕ್ಷರಾಗಿ ಹೆಚ್.ವಿ.ರವೀಂದ್ರ, ಮಹಿಳಾ ಸಮಿತಿಯ ಅಧ್ಯಕ್ಷರಾಗಿ ಭಾರತಿ ರಮೇಶ್ ಹಾಗೂ ಕಾರ್ಯಾಧ್ಯಕ್ಷರಾಗಿ ಡಾ.ಜಯಂತಿ ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷರಾಗಿ ಹೆಚ್.ಎನ್.ಮಹೇಶ್ ಹಾಗೂ ಕಾರ್ಯಾಧ್ಯಕ್ಷರಾಗಿ ಅನಿಲ್ ಹೆಚ್.ಟಿ, ಆಹಾರ ಸಮಿತಿಯ ಅಧ್ಯಕ್ಷರಾಗಿ ಹೆಚ್.ವಿ.ಸುಧಾಕರ್, ಮೆರವಣಿಗೆ ಸಮಿತಿಯ ಅಧ್ಯಕ್ಷರಾಗಿ ಎನ್.ಪರಮೇಶ್, ಉಪಾಧ್ಯಕ್ಷರಾಗಿ ದಶಮಂಟಪದ ಅಧ್ಯಕ್ಷ ಬಿ.ಎಂ.ಹರೀಶ್, ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಜಿ.ಆರ್.ಪ್ರಜ್ವಲ್, ವೇದಿಕೆ ಸಮಿತಿಯ ಅಧ್ಯಕ್ಷರಾಗಿ ಜಿ.ಆರ್.ಪ್ರಜ್ಞಾ, ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ವಿ.ಎಸ್.ವಿನೋದ್ ಕುಮಾರ್, ಉಪಾಧ್ಯಕ್ಷರಾಗಿ ಪೂರ್ಣಿಮ, ಭಜನಾ ಸಮಿತಿಯ ಅಧ್ಯಕ್ಷರಾಗಿ ವಿಶಾಲಾಕ್ಷಿ ಸುಕುಮಾರ್, ಕಳಸ ಸಮಿತಿಯ ಅಧ್ಯಕ್ಷರಾಗಿ ಎಸ್.ಲಿಖಿತ, ಪ್ರಸಾದ ಸಮಿತಿಯ ಅಧ್ಯಕ್ಷರಾಗಿ ವಿದ್ಯಾ ವೆಂಕಟರಮಣ, ಹಣಕಾಸು ಸಮಿತಿಯ ಸಂಚಾಲಕರುಗಳಾಗಿ ಹೆಚ್.ಹೆಚ್.ಮಂಜುನಾಥ್ ಹಾಗೂ ಪುದಿಯನೆರವನ ರೇವತಿ ರಮೇಶ್, ವೈದಿಕ ಸಮಿತಿಯ ಅಧ್ಯಕ್ಷರಾಗಿ ರಾಮಸೇವಾ ಸಮಿತಿಯ ಅಧ್ಯಕ್ಷರಾದ ಹೆಚ್.ಎಸ್.ಗೋಪಿನಾಥ್ ಕಾರ್ಯನಿರ್ವಹಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಉಪಸಮಿತಿಗಳನ್ನು ರಚಿಸಲಾಗುವುದು ಎಂದು ಕೆ.ಎಂ.ಗಣೇಶ್ ಮಾಹಿತಿ ನೀಡಿದರು. ಖಜಾಂಚಿ ಕೋಲೆಯಂಡ ಡಾ.ಮೋಹನ್ ಅಪ್ಪಾಜಿ ಮಾತನಾಡಿ ಕಳೆದ ವರ್ಷ 20 ಲಕ್ಷ ರೂ. ವೆಚ್ಚದಲ್ಲಿ ಅತ್ಯಂತ ವಿಜೃಂಭಣೆಯಿಂದ ರಾಮೋತ್ಸವ ಆಚರಿಸಲಾಗಿದೆ. ಈ ಬಾರಿಯ ರಾಮೋತ್ಸವಕ್ಕೆ 30ಲಕ್ಷ ರೂ. ಖರ್ಚಾಗಲಿದೆ. ಎಲ್ಲಾ ವ್ಯವಹಾರಗಳು ಪಾರದರ್ಶಕವಾಗಿದ್ದು, ದಾನಿಗಳು ವಂತಿಗೆಯನ್ನು ಚೆಕ್ ರೂಪದಲ್ಲಿ ನೀಡುವಂತೆ ಮನವಿ ಮಾಡುವುದಾಗಿ ತಿಳಿಸಿದರು. ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷೆ ಡಾ.ಜಯಂತಿ ಶೆಟ್ಟಿ ಮಾತನಾಡಿ ರಾಜಕೀಯ ರಹಿತವಾಗಿ ಎಲ್ಲರೂ ಒಗ್ಗಟ್ಟಿನಿಂದ ರಾಮೋತ್ಸವವÀನ್ನು ಆಚರಿಸುತ್ತಿದ್ದು, ಸರ್ವರೂ ಕೈಜೋಡಿಸುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಶ್ರೀಕೋದಂಡ ರಾಮೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಉಪಾಧ್ಯಕ್ಷ ಅಂಬೆಕಲ್ ನವೀನ್, ಮಹಿಳಾ ಸಮಿತಿಯ ಕಾರ್ಯಾಧ್ಯಕ್ಷೆ ಡಾ.ಜಯಂತಿ ಶೆಟ್ಟಿ ಹಾಗೂ ಶ್ರೀಕೋದಂಡರಾಮ ಟ್ರಸ್ಟ್ ನ ಅಧ್ಯಕ್ಷ ಹೆಚ್.ಎನ್.ನಂಜುಂಡ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ…

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.