Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
  • *ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*
  • *ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*
  • *ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಐ ಲವ್ ಕಾವೇರಿ ಸ್ವಚ್ಛತಾ ಅಭಿಯಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಐ ಲವ್ ಕಾವೇರಿ ಸ್ವಚ್ಛತಾ ಅಭಿಯಾನ*

ಫೆಬ್ರವರಿ 14, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, NEWS DESK ಫೆಬ್ರವರಿ 14: ಪ್ರೇಮಿಗಳ ದಿನಾಚರಣೆಯನ್ನು ಕುಶಾಲನಗರದಲ್ಲಿ ನದಿ ಸ್ವಚ್ಛತೆ ಮಾಡುವ ಮೂಲಕ ಐ ಲವ್ ಕಾವೇರಿ ಎಂಬ ಘೋಷ ವಾಕ್ಯದೊಂದಿಗೆ ಆಚರಿಸಲಾಯಿತು.
ಕುಶಾಲನಗರ ಗಡಿ ಭಾಗದಲ್ಲಿ ರೋಟರಿ ಕುಶಾಲನಗರ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ, ಕೊಪ್ಪ ಭಾರತ ಮಾತಾ ಪದವಿ ಕಾಲೇಜು, ತಾಲೂಕು ಮಕ್ಕಳ ಸಾಹಿತ್ಯ ಪರಿಷತ್ತು ಜಂಟಿ ಆಶ್ರಯದಲ್ಲಿ ಐ ಲವ್ ಕಾವೇರಿ ಘೋಷ ವಾಕ್ಯದೊಂದಿಗೆ ನಡೆದ ಮೂರನೇ ವರ್ಷದ ಕಾವೇರಿ ನದಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ ಉದ್ಯಮಿ ಎಸ್ ಎಲ್ ಎಲ್ ವಿಶ್ವನಾಥನ್ ಮಾತನಾಡಿ ಸ್ವಚ್ಛ ಕಾವೇರಿ ಸಂಬಂಧ ಪ್ರತಿಯೊಬ್ಬರು ಕಾಳಜಿ ವಹಿಸಬೇಕಾಗಿದೆ. ನೀರಿನ ಮಹತ್ವದ ಬಗ್ಗೆ ಅರಿವು ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದರು. ಸುವರ್ಣ ಮಹೋತ್ಸವದ ಅಂಗವಾಗಿ ಸ್ವಚ್ಛ ಕುಶಾಲನಗರ ಸ್ವಚ್ಛ ಕಾವೇರಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ರೋಟರಿ ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ನಿರಂತರವಾಗಿ ಕಾರ್ಯಕ್ರಮ ಚಟುವಟಿಕೆಗಳ ಮೂಲಕ ನದಿ ಸಂರಕ್ಷಣೆಯ ಬಗ್ಗೆ ಮುತುವರ್ಜಿ ವಹಿಸಿರುವ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು. ಶಾಲಾ ಕಾಲೇಜು ವಿದ್ಯಾರ್ಥಿಗಳು ಪರಿಸರ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮಾಹಿತಿ ಒದಗಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದರು.
ರೋಟರಿ ಅಧ್ಯಕ್ಷರಾದ ಮನು ಪೆಮ್ಮಯ್ಯ ಮಾತನಾಡಿ, ಕುಶಾಲನಗರ ರೋಟರಿ ಸಂಸ್ಥೆಯ ಸುವರ್ಣ ಮಹೋತ್ಸವ ಅಂಗವಾಗಿ ಒಂದು ತಿಂಗಳ ಕಾಲ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಶೇಷವಾಗಿ ಪಟ್ಟಣದ ಸ್ವಚ್ಛತೆ ಬಗ್ಗೆ ನಾಗರಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರಲ್ಲದೆ ಕೊಪ್ಪ ಕುಶಾಲನಗರ ಗಡಿಭಾಗದಲ್ಲಿರುವ ಪುರಾತನ ಕಾವೇರಿ ಸೇತುವೆಯ ಪುನಶ್ಚೇತನ ಕಾರ್ಯಕ್ರಮಕ್ಕೆ ಚಿಂತನೆ ಹರಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮ ಆಯೋಜಕರಾದ ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕ ಎಂ ಎನ್ ಚಂದ್ರಮೋಹನ್ ಮಾತನಾಡಿ, ಹಲವು ಕಾರಣಗಳಿಂದ ಜೀವನದಿ ಕಾವೇರಿ ನೇರವಾಗಿ ಮಲಿನಗೊಳ್ಳುತ್ತಿದ್ದು ಜನರಿಗೆ ನೀರಿನ ಬಳಕೆ ಮಾಡಲು ಅಸಾಧ್ಯವಾಗಿದೆ. ಈ ನಿಟ್ಟಿನಲ್ಲಿ ಸ್ವಚ್ಛ ಕಾವೇರಿಗಾಗಿ ಪ್ರತಿಯೊಬ್ಬರು ಪಣತೊಡಬೇಕೆಂದರು.
ಉದ್ಯಮಿ ಎಸ್ ಎಲ್ ಎನ್ ಸಾತಪ್ಪನ್, ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕರಾದ ಪ್ರದೀಪ್ ಕುಮಾರ್ ಕುಶಾಲನಗರ ಗಡಿಭಾಗದ 180 ವರ್ಷಗಳ ಇತಿಹಾಸದ ಹಳೆಯ ಸೇತುವೆಯ ಪುನಶ್ಚೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕಾರ್ಯಕ್ರಮಕ್ಕೆ ಶುಭ ಕೋರಿದರು.
ಭಾರತ ಮಾತಾ ಪದವಿ ತಾಲೂಕಿನ ನೂರಾರು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಬೋಧಕರು ರೋಟರಿ ಸಂಸ್ಥೆಯ ಪದಾಧಿಕಾರಿಗಳು ಸದಸ್ಯರು, ಕುಶಾಲನಗರ ತಾಲೂಕು ಮಕ್ಕಳ ಸಾಹಿತ್ಯ ಪರಿಷತ್ ಪ್ರಮುಖರು ಕಾವೇರಿ ಸೇತುವೆಯ ಕೆಳಭಾಗದಲ್ಲಿ ತುಂಬಿದ್ದ ತ್ಯಾಜ್ಯಗಳನ್ನು ತೆರವು ಮಾಡುವಲ್ಲಿ ತಮ್ಮನ್ನು ತೊಡಗಿಸಿಕೊಂಡರು.
ಕುಶಾಲನಗರ ಪುರಸಭೆ ಮತ್ತು ಕೊಪ್ಪ ಗ್ರಾಮ ಪಂಚಾಯಿತಿಯ ತ್ಯಾಜ್ಯ ವಿಲೇವಾರಿ ವಾಹನಗಳ ಮೂಲಕ ತ್ಯಾಜ್ಯಗಳನ್ನು ಭುವನಗಿರಿ ಕೇಂದ್ರಕ್ಕೆ ಸಾಗಿಸಲಾಯಿತು.
ಸ್ವಚ್ಛತಾ ಕಾರ್ಯಕ್ರಮ ಮುನ್ನ ಪುಲ್ವಾಮಾ ದಾಳಿಯಲ್ಲಿ ಬಲಿದಾನ ನೀಡಿದ ಯೋಧರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ನಡೆಸಲಾಯಿತು.
ಈ ಸಂದರ್ಭ ರೋಟರಿ ಕಾರ್ಯದರ್ಶಿ ಮಂಜುನಾಥ್ ಸಹಾಯಕ ರಾಜ್ಯಪಾಲರಾದ ಉಲ್ಲಾಸ್ ಕೃಷ್ಣ, ಎಸ್ ಕೆ ಸತೀಶ್ ಡಾ ಹರಿ ಎ ಶೆಟ್ಟಿ ಮತ್ತು ರೋಟರಿ ಸದಸ್ಯರು ಭಾರತ ಮಾತಾ ಕಾಲೇಜಿನ ಪ್ರಾಂಶುಪಾಲರಾದ ಫಾ ಅಭಿನ್, ಫಾ ಟಿಟ್ಟೋ ಥಾಮಸ್, ಎನ್ಎಸ್ಎಸ್ ಶಿಬಿರ ಅಧಿಕಾರಿ ದಿನೇಶ್ ಕುಮಾರ್, ಅಭಿಷೇಕ್, ಮಕ್ಕಳ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷೆ ಚೈತನ್ಯ, ಕಾವ್ಯ ಗೌಡ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ವನಿತಾ ಚಂದ್ರಮೋಹನ್, ಧರಣಿ ಸೋಮಯ್ಯ, ಕೆ ಪಿ ನಾಗರಾಜ್ ಮತ್ತಿತರರು ಇದ್ದರು. ಭಾರತ ಮಾತಾ ಕಾಲೇಜು ವಿದ್ಯಾರ್ಥಿಗಳು ಮುಖ್ಯರಸ್ತೆಯಲ್ಲಿ ಮೆರವಣಿಗೆಯ ಮೂಲಕ ತೆರಳಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಫಲಕಗಳನ್ನು ಹೊತ್ತು ಪರಿಸರ ಜಾಗೃತಿಯ ಬಗ್ಗೆ ಘೋಷಣೆಗಳನ್ನು ಕೂಗಿ ಜನರಲ್ಲಿ ನದಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.27 NEWS DESK : ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯಲ್ಲಿ…

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026

*ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*

ಆಗಷ್ಟ್ 27, 2026

*ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*

ಆಗಷ್ಟ್ 27, 2026

*ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.