

ವಿರಾಜಪೇಟೆ NEWS DESK ಫೆ.15 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಟಿ ಶೆಟ್ಟಿಗೇರಿಯಲ್ಲಿರುವ ಸಿದ್ಧಾರೂಢ ಆಶ್ರಮಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಪತ್ನಿ ಕಾಂಚನ್ ಪೊನ್ನಣ್ಣ ಅವರು ಭೇಟಿ ನೀಡಿದರು. ಮಹಾಶಿವರಾತ್ರಿ ಪ್ರಯುಕ್ತ ಆಶ್ರಮದಲ್ಲಿ ಭಜನಾ ಕಾರ್ಯಕ್ರಮ ನಡೆಯಿತು. ಶಾಸಕರು ಮಹಾಶಿವರಾತ್ರಿಯ ಶುಭಾಶಯಗಳನ್ನು ಕೋರಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರೀರ ನವೀನ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ವಲಯ ಅಧ್ಯಕ್ಷ ತೀತಿರ ಪ್ರಭು, ಪ್ರಮುಖರಾದ ಮೋಟಯ್ಯ, ಸೋಮಣ್ಣ, ಉದಯ, ಪರ್ಮಲೆ ಗಣೇಶ್, ಕಾರ್ಯಕರ್ತರು ಹಾಗೂ ಭಕ್ತರು ಉಪಸ್ಥಿತರಿದ್ದರು.










