


ಮಡಿಕೇರಿ NEWS DESK ಫೆ.16 : ಮಡಿಕೇರಿಯ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಪತ್ರ ಬಂದಿದೆ. ಇಂದು ಮಧ್ಯಾಹ್ನ 12:30ಕ್ಕೆ ನ್ಯಾಯಾಲಯವನ್ನು ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಇ ಮೇಲ್ ಗಮನಿಸಿದ ನ್ಯಾಯಾಲಯದ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದವರು ನ್ಯಾಯಾಲಯದಿಂದ ಹೊರಬಂದಿದ್ದಾರೆ. ಬಾಂಬ್ ನಿಗ್ರಹದಳ ಪರಿಶೀಲನೆ ನಡೆಸುತ್ತಿದೆ. ನ್ಯಾಯಾಲಯದ ಆವರಣದಲ್ಲಿ ಆತಂಕದ ವಾತಾವರಣ ಮೂಡಿದೆ.









