Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
  • *ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*
  • *ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*
  • *ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನಾದ್ಯಂತ ಶ್ರದ್ಧಾಭಕ್ತಿಯ “ಶಿವ”ನ ಆರಾಧನೆ : ಆಕರ್ಷಕ ಮೆರವಣಿಗೆ-ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನಾದ್ಯಂತ ಶ್ರದ್ಧಾಭಕ್ತಿಯ “ಶಿವ”ನ ಆರಾಧನೆ : ಆಕರ್ಷಕ ಮೆರವಣಿಗೆ-ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ*

ಫೆಬ್ರವರಿ 16, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ, NEWS DESK ಫೆ.16 : ಕೊಡಗು ಜಿಲ್ಲೆಯಾದ್ಯಂತ  ಶಿವರಾತ್ರಿ ಉತ್ಸವವನ್ನು ವಿವಿಧ ದೇಗುಲಗಳಲ್ಲಿ ವಿವಿಧ ಪೂಜಾ ಕಾರ್ಯ ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಶ್ರದ್ಧಾಭಕ್ತಿಗಳಿಂದ ಆಚರಿಸಲಾಯಿತು. ಶಿವರಾತ್ರಿಯ ಪ್ರಯುಕ್ತ ಭಾನುವಾರ ಬೆಳಗ್ಗಿನಿಂದಲೆ ಆಯಾ ಗ್ರಾಮ ದೇವಾಲಯಗಳಲ್ಲಿ, ತಲಕಾವೇರಿ ಕ್ಷೇತ್ರದಲ್ಲಿ ವಿಶೇಷ ಪೂಜೆಗಳು ಜರುಗಿದವು. ಭಕ್ತರು ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುತ್ತಿದ್ದುದು ಎಲ್ಲೆಡೆಯೂ ಕಂಡು ಬರುತಿತ್ತು.
ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಮುಂಜಾನೆಯಿAದಲೇ ವಿಶೇಷ ಸೇವೆ, ರುದ್ರಹೋಮ  ಶ್ರದ್ಧಾಭಕಿಯಿಂದ ಜರುಗಿತು.ಮುಂಜಾನೆಯಿಂದಲೇ  ವಿವಿಧ ಪೂಜಾ ವಿಧಿವಿಧಾನಗಳು ಜರುಗಿದವು. ಮಧ್ಯಾಹ್ನ  ಮಹಾಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಿಸಲಾಯಿತು.   ಕಾವೇರಿ ಕ್ಷೇತ್ರ-  ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಸಂಪ್ರದಾಯದAತೆ  ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮಗಳನ್ನು ಅತ್ಯಂತ ಶ್ರದ್ಧಾ ಭಕ್ತಿಯಿಂದ ನೂರಾರು ಭಕ್ತಾದಿಗಳ ಸಮ್ಮೂಕದಲ್ಲಿ ನಡೆಸಲಾಯಿತು.
ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಬೆಳಗ್ಗೆ  ಶತರುದ್ರಾಭಿಷೇಕ,  ರುದ್ರಹೋಮ, ಮಧ್ಯಾಹ್ನ ಮಹಾಮಂಗಳಾರತಿ, ದೇವರ ಉತ್ಸವ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ಸಂಜೆ  ಭಜನೆ ಮತ್ತು ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ.  ತಾಯಂಬಕ ಸೇವೆ,  ರಾತ್ರಿ ಲಕ್ಷದೀಪೋತ್ಸವ, ಏಕಾದಶ ರುದ್ರಾಭಿಷೇಕ.  ದೇವರ ನೃತ್ಯ ಉತ್ಸವ ನಡೆಯಿತು. ರಾತ್ರಿ ಯಕ್ಷ ಕಾವ್ಯ ತರಂಗಿಣಿ ಭಾಗವತ ದಿ. ಚಂದಪ್ಪ ಪೂಜಾರಿ ಪ್ರತಿಷ್ಠಾನ ದರ್ಬೆ ಬಂಟ್ವಾಳ ದಕ್ಷಿಣ ಕನ್ನಡ ಇವರಿಂದ ಸ್ವರ ಮಾಧುರಿ ಕಾವ್ಯ ಕನ್ನಿಕೆ ಬಿರುದಾಂಕಿತ ಸಂದ್ಯಾ ಪೂಜಾರಿ ದರ್ಬೆ ಇವರ ದಕ್ಷ ನಿರ್ದೇಶನದಲ್ಲಿ ಯಕ್ಷಗಾನ ಬಯಲಾಟ- ಪ್ರಸಂಗ “ಓಂ ನಮಃ ಶಿವಾಯ” ಪ್ರದರ್ಶಿಸಲ್ಪಟ್ಟಿತು.
ಶ್ರೀ ತಲಕಾವೇರಿ ದೇವಾಲಯದಲ್ಲಿ ಬೆಳಗ್ಗೆ ಶತರುದ್ರಾಭಿಷೇಕ. ಮಧ್ಯಾಹ್ನ ಮಹಾ ಮಂಗಳಾರತಿ, ಪ್ರಸಾದ ವಿತರಣೆ. ಸಾಯಂಕಾಲ  ಏಕಾದಶ ರುದ್ರಾಭಿಷೇಕ ಮಹಾ ಮಂಗಳಾರತಿ ನಡೆಯಿತು. ಬೊಟ್ಲಪ್ಪ ದೇವಸ್ಥಾನ- ಮಡಿಕೇರಿ ತಾಲ್ಲೂಕಿನ ಐತಿಹಾಸಿಕ ಹಿನ್ನೆಲೆಯ ಕಡಗದಾಳು ಸಮೀಪದ ಉದ್ಭವ ಲಿಂಗವನ್ನು ಹೊಂದಿರುವ ಬೊಟ್ಲಪ್ಪ ದೇವಸ್ಥಾನದಲ್ಲಿ ಅಭಿಷೇಕ ಪೂಜೆಗಳು, ಮಧ್ಯಾಹ್ನ ಅನ್ನದಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ನಡೆಯಿತು.
ಶ್ರೀರಾಜರಾಜೇಶ್ವರಿ ದೇವಾಲಯ -ನಗರದಂಚಿನಲ್ಲಿರುವ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಜರುಗಿತು.
ಮುಂಜಾನೆಯಿಂದ ಕಾಶಿಯಿಂದ ತಂದು ಪ್ರತಿಷ್ಠಾಪಿಸಲಾಗಿರುವ ಶಿವ ಲಿಂಗಕ್ಕೆ ಕ್ಷೀರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ ಜರುಗಿದವು. ಮಧ್ಯಾಹ್ನ ಮಹಾಮಂಗಳಾರತಿ ನಂತರ ಭಕಾದಿಗಳಿಂದ ಪಂಚಲಿಂಗಕ್ಕೆ ಪವಿತ್ರ ಗಂಗಾಜಲ ಅಭಿಷೇಕ ಮತ್ತು ಶಿವನ ಮೂರ್ತಿಗೆ ಪುಷ್ಪಾರ್ಚನೆ ಸೇವೆ ಸಲ್ಲಿಸಲಾಯಿತು.ಸಂಜೆ ಭಕ್ತಾಧಿಗಳು ದೀಪಲಂಕಾರ ನೆರವೇರಿಸಿ ತಾಯಿಯ ದರ್ಶನ ಪಡೆದರು.ರಾತ್ರಿ ಭಕ್ತಿ ಪ್ರಧಾನ ಸಾಂಸ್ಕ್ರತಿಕ ಕಾರ್ಯಕ್ರಮ ನೆರವೇರಿತು.
ಶ್ರೀವೀರಭದ್ರ ಮುನೇಶ್ವರ ದೇವಾಲಯ-ಮಡಿಕೇರಿ ನಗರದ ದಾಸವಾಳ ಬಡಾವಣೆಯಲ್ಲಿರುವ ಶ್ರೀವೀರಭದ್ರ ಮುನೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಮಹಾಶಿವರಾತ್ರಿ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಉತ್ಸವದ ಪ್ರಯುಕ್ತ ನಗರದಲ್ಲಿ ಮೆರವಣಿಗೆ ನಡೆಯಿತು.
ಮೇಕೇರಿ ಗೌರಿ ಶಂಕರ ದೇಗುಲ- ಮೇಕೇರಿ ಶ್ರೀ ಗೌರಿ ಶಂಕರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಉತ್ಸವ ಅತ್ಯಂತ ಸಮಭ್ರಮ ಸಡಗರಗಳಿಂದ ನೆರವೇರಿತು. ಭಾನುವಾರ ಬೆಳಗ್ಗೆ  ಮೇಕೇರಿ ಸುತ್ತಮುತ್ತಲ ಶಕ್ತಿನಗರ, ನವಗ್ರಾಮ, ಕಾವೇರಿ ಬಡಾವಣೆ, ಸುಭಾಷ್‌ನಗರ ಮತ್ತು ಮೇಕೇರಿ-ಬಿಳಿಗೇರಿ ಕೂಡು ರಸ್ತೆಯ ಬಳಿಯಿಂದ ಆಯಾ ವ್ಯಾಪ್ತಿಯ ನಿವಾಸಿಗಳು “ಹೊರೆ ಕಾಣಿಕೆ”ಯೊಂದಿಗೆ ಮೆರವಣಿಗೆಯೊಂದಿಗೆ ದೇವಸ್ಥಾನಕ್ಕೆ ಆಗಮಿಸಿ ಹೊರೆ ಕಾಣಿಕೆಯನ್ನು ದೇವರಿಗೆ ಅರ್ಪಿಸಿದರು.ಮೆರವಣಿಗೆಯಲ್ಲಿ ಧ್ವಜ, ಚಂಡೆಮೇಳ, ಭಜನಾ ಕುಣಿತ ತಂಡಗಳು ಪಾಲ್ಗೊಂಡು ಗಮನ ಸೆಳೆದವು. ಉತ್ಸವದ ಅಂಗವಾಗಿ ಶ್ರೀ ಗೌರಿ ಶಂಕರ ದೇಗುಲದಲ್ಲಿ ಬೆಳಗ್ಗೆ ಗಣಪತಿ ಹೋಮ, ಶ್ರೀ ಮೃತ್ಯುಂಜಯ ಹೋಮ, ರುದ್ರಾಭಿಷೇಕ, ಮಹಾಪೂಜೆಯ ಬಳಿಕ ಅನ್ನದಾನ ನqಯಿತು. ರಾತ್ರಿ ದೇಗುಲದಲ್ಲಿ ರಂಗಪೂಜೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಶಿವರಾತ್ರಿಯ ಜಾಗರಣೆ ಪ್ರಯುಕ್ತ “ಯಕ್ಷಗಾನ” ಪ್ರದರ್ಶನ ನಡೆಯಿತು.
ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕಿನ ವಿವಿಧ ದೇಗುಲಗಳಲ್ಲಿ ಶಿವರಾತ್ರಿಯ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿತು.
Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.27 NEWS DESK : ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯಲ್ಲಿ…

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026

*ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*

ಆಗಷ್ಟ್ 27, 2026

*ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*

ಆಗಷ್ಟ್ 27, 2026

*ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.