Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*
  • *ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*
  • *ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*
  • *ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*
  • *ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*
  • *ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*
  • *ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*
  • *ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*
  • *ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ಜಗತ್ತಿಗೆ ಅಹಿಂಸಾ ಮಾರ್ಗ ರೂಪಿಸಿಕೊಟ್ಟ ಮಹಾನ್ ಚೇತನ ಗಾಂಧೀಜಿ : ಪ್ರೊ. ಗಂಗಾಧರ ಎಂ. ಆರ್. ಅಭಿಪ್ರಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ಜಗತ್ತಿಗೆ ಅಹಿಂಸಾ ಮಾರ್ಗ ರೂಪಿಸಿಕೊಟ್ಟ ಮಹಾನ್ ಚೇತನ ಗಾಂಧೀಜಿ : ಪ್ರೊ. ಗಂಗಾಧರ ಎಂ. ಆರ್. ಅಭಿಪ್ರಾಯ*

ಫೆಬ್ರವರಿ 16, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, NEWS DESK ಫೆ.16 : ಗಾಂಧೀಜಿ ಎಂದ ಕ್ಷಣ ನೆನಪಾಗುವುದು ಸ್ವತಂತ್ರ ಹೋರಾಟಗಾರ. ಗಾಂಧೀಜಿ ಚಿಂತಕರು, ಪತ್ರಕರ್ತರು, ಶಾಂತಿಧೂತ ಮತ್ತು ಜಗತ್ತಿಗೆ ಅಹಿಂಸಾ ಮಾರ್ಗ ರೂಪಿಸಿಕೊಟ್ಟ ಮಹಾನ್ ಚೇತನ. ಸ್ವತಂತ್ರ, ಸತ್ಯಾಗ್ರಹ, ಸ್ವರಾಜ್ಯ, ಸತ್ಯ, ನೈತಿಕತೆ, ಶಾಂತಿ, ಅಹಿಂಸೆ ಅವರ ತತ್ವಗಳು. ಸಮಾಜದಲ್ಲಿ ಹಿಂಸಾಚಾರಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಅತ್ಯಂತ ಸಮಂಜಸ ಎಂದು ಚಾಮರಾಜನಗರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಗಂಗಾಧರ ಎಂ. ಆರ್. ಅಭಿಪ್ರಾಯಪಟ್ಟರು.
ಕೊಡಗು ವಿಶ್ವವಿದ್ಯಾಲಯ, ಕೊಡಗು, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ರಾಷ್ಟ್ರೀಯ ಸೇವಾ ಯೋಜನೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಗಾಂಧೀಜಿಯವರ ಆತ್ಮಕಥೆ ನೂರರ ಸಂಭ್ರಮ ಹಾಗೂ ಭೂದಾನ ಚಳವಳಿಯ 75ನೇ ವಾರ್ಷಿಕೋತ್ಸವದ ಪ್ರಯುಕ್ತ ಸೋಮವಾರ ಹಮ್ಮಿಕೊಂಡಿದ್ದ ಒಂದು ದಿನದ ರಾಷ್ಟ್ರೀಯ ಸಮ್ಮೇಳನ ಹಾಗೂ ಪುಸ್ತಕ ದಾಸೋಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಇಂದು ಜಗತ್ತು ಒಂದು ಜಾಗತಿಕ ಹಳ್ಳಿಯಾಗಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಮೌಲ್ಯಗಳು ಕೂಡ ಮುಖ್ಯ. ಸಮಾಜದಲ್ಲಿ ದ್ವೇಷ ಭಾಷಣಗಳು, ಕೋಮುಗಲಭೆಗಳು ಹೆಚ್ಚುತ್ತಿವೆ. ಸತ್ಯ, ನೈತಿಕತೆ ಮತ್ತು ಪ್ರಾಮಾಣಿಕತೆಯನ್ನು ಕಾಣುವುದು ಅಪರೂಪ ಎಂಬಂತಾಗಿದೆ. ಹೀಗಿರುವಾಗ ಹಿಂಸೆ ಕ್ಷಣಿಕ, ಅಹಿಂಸೆ ಮತ್ತು ಶಾಂತಿ ಶಾಶ್ವ ಎಂಬ ಗಾಂಧೀಜಿಯವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ ಎಂಬುದನ್ನು ನಾವೆಲ್ಲರೂ ಮರೆಯಬಾರದು ಎಂದು ಅವರು ತಿಳಿಸಿದರು.
ಆಡಂಬರದ ಜೀವನದಲ್ಲಿ ಮುಳುಗಿಹೋಗಿರುವ ಯುವಜನತೆಗೆ ಅತ್ಯಂತ ಸರಳ ಸುಂದರ ಜೀವನ ನಡೆಸಿದ ಗಾಂಧೀಜಿಯವರು ಆದರ್ಶಪ್ರಾಯರಾಗಿದ್ದಾರೆ. ವಿದ್ಯಾರ್ಥಿಗಳು ಗಾಂಧೀಜಿಯವರು ಹಾಕಿ ಕೊಟ್ಟ ಮೌಲ್ಯಗಳನ್ನು ನಿಮ್ಮ ಬದುಕಿನ ಬುನಾದಿಯಾಗಿ ಮಾಡಿಕೊಂಡರೆ ಯಶಸ್ವಿ ಜೀವನದ ಜೊತೆಗೆ ಸುಸ್ಥಿರ ಸಮಾಜವನ್ನು ನಾವು ಕಾಣಬಹುದಾಗಿದೆ ಎಂದು ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.


ಪುಸ್ತಕ ದಾಸೋಹ ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿದ ಹಾವೇರಿ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸುರೇಶ ಹೆಚ್ ಜಂಗಮಶೆಟ್ಟಿ ಅವರು ಮಾತನಾಡಿ, ಓದುವ ದಾಹ ವಿದ್ಯಾರ್ಥಿಗಳಿಗೆ ಅತ್ಯಗತ್ಯ. ಪುಸ್ತಕದ ಜ್ಞಾನ ಮಸ್ತಕಕ್ಕೆ ಅವಶ್ಯ ಎಂಬ ದೃಷ್ಟಿಯಿಂದ ಕೊಡಗು ವಿಶ್ವವಿದ್ಯಾಲಯ ಇಂದು ಪುಸ್ತಕ ದಾಸೋಹ ಆರಂಭಿಸಿರುವುದು ಅತ್ಯಂತ ಶ್ಲಾಘನೀಯ. ವಿದ್ಯಾರ್ಥಿಗಳೆಲ್ಲ ಈ ಪುಸ್ತಕ ದಾಸೋಹದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ನಮ್ಮ ಭಾರತ ದೇಶದಲ್ಲಿ ಆಯಾ ಕಾಲಘಟ್ಟದಲ್ಲಿ ತಮ್ಮ ಸುತ್ತಲಿನ ಯಾವುದಾದರೂ ಒಂದು ಅನಿಷ್ಟ ಪದ್ಧತಿಯ ವಿರುದ್ಧ ತಮ್ಮದೇ ವಿಚಾರಧಾರೆಗಳು ಮಾರ್ಗದಲ್ಲಿ ಜನರಲ್ಲಿ ಅರಿವು ಮೂಡಿಸಲೆಂದೇ ಮಹಾತ್ಮರು ಬಂದು ಹೋಗಿದ್ದಾರೆ. ಇಂದಿನ ಮಕ್ಕಳು ಆ ಮಹಾತ್ಮರ ಕುರಿತ ಪುಸ್ತಕಗಳನ್ನು ಓದಬೇಕು. ಅಷ್ಟೇ ಅಲ್ಲದೆ ಮಹಾತ್ಮರನ್ನು ಮತ್ತು ಅವರ ವಿಚಾರಧಾರೆಗಳನ್ನು ತಮ್ಮೊಳಗೆ ಹುಡುಕಬೇಕು.
ವಿದ್ಯಾರ್ಥಿಗಳು ಜಗತ್ತಿಗೆ ಅನ್ನ ನೀಡುವ ಅನ್ನದಾತರಾದ ರೈತ, ನಮ್ಮ ಸುರಕ್ಷತೆಗಾಗಿ ದೇಶದ ಗಡಿಯಲ್ಲಿ ಕಾಯುತ್ತಿರುವ ಸೈನಿಕ, ನಮಗೆ ಜನ್ಮ ನೀಡಿದ ತಂದೆ ತಾಯಿ ಮತ್ತು ಶಿಕ್ಷಣ ನೀಡುವ ಶಿಕ್ಷಕರನ್ನು ಎಂದಿಗೂ ಮರೆಯಬಾರದು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೊಡಗು ವಿಶ್ವವಿದ್ಯಾನಿಲಯದ ಕುಲಸಚಿವರು ಮೌಲ್ಯಮಾಪನ ಪ್ರೊ. ಸುರೇಶ, ಮತ್ತೋರ್ವ ಅತಿಥಿಗಳಾದ ಡಾ. ಆಬಿದ ಬೇಗಮ್ ಅವರು ಗಾಂಧೀಜಿ ವಿಚಾರಧಾರೆಗಳ ಹಾಗೂ ಶಿಕ್ಷಣದ ಮೌಲ್ಯವನ್ನು ಕುರಿತು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಮಾತನಾಡಿ, ತಮ್ಮದೇ ಆದ ತತ್ವಸಿದ್ದಾಂತಗಳ ಮೂಲಕ ವಿಶ್ವಖ್ಯಾತಿ ಹೊಂದಿದ ಮಹಾತ್ಮ ಗಾಂಧೀಜಿ ಅವರ ಚಿಂತನೆಗಳನ್ನು ಸರ್ವ ಕಾಲಕ್ಕೂ ಸ್ಮರಿಸುವ ಉದ್ದೇಶದಿಂದ ಕೊಡಗು ವಿಶ್ವವಿದ್ಯಾಲಯವು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಗಾಂಧೀಜಿಯ ಕನಸುಗಳು ಹಾಗೂ ಆಲೋಚನೆಗಳನ್ನು ಬಿತ್ತಲು ಇಂತಹ ಸಮ್ಮೇಳನಗಳನ್ನು ಹಮ್ಮಿಕೊಳ್ಳಲಾಗಿದೆ.
ಗಾಂಧೀಜಿ ತಮ್ಮ ಹೋರಾಟದಲ್ಲಿ ಕೋಪದ ಬದಲು ಸಹನೆಯನ್ನು, ದ್ವೇಷದ ಬದಲು ಪ್ರೀತಿಯನ್ನು
ಹಿಂಸೆಯ ಬದಲು ಶಾಂತಿಯನ್ನು ಅಳವಡಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಜಗತ್ತಿಗೆ ಮಾರ್ಗದರ್ಶಕರಾದರು. ಜಗತ್ತು ಬದಲಾದರೂ ಕೂಡ ಗಾಂಧಿಯಂತಹ ಮಹಾತ್ಮರು ಸಾರಿದ ತತ್ವಗಳು ಬದಲಾಗದ ಕಾರಣ ಇಂದಿನ ಮಕ್ಕಳಲ್ಲಿ ಗಾಂಧಿಯವ ಕನಸುಗಳನ್ನು ಬಿತ್ತಬೇಕಿದೆ ಎಂದರು.
ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ರಾಜ್ಯಶಾಸ್ತ್ರ ವಿಭಾಗದ ಉಪನ್ಯಾಸಕ ಸುದರ್ಶನ ಕುಮಾರ್ ಎನ್.ಕೆ. ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ಮತ್ತು ಕನ್ನಡ ಅಧ್ಯಯನ ವಿಭಾಗ ಉಪನ್ಯಾಸಕ ಡಾ. ಜಮೀರ್ ಅಹಮದ್ ಪ್ರಾಸ್ತಾವಿಕ ನುಡಿಗಳನ್ನಾಡಿ ಕಾರ್ಯಕ್ರಮ ನಿರೂಪಿಸಿದರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕಿ ಡಾ. ಸುವರ್ಣ ಕಂಬಿ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ : ಗಣೇಶ ವಿಸರ್ಜನೆ ಶೋಭಾಯಾತ್ರೆ ಸಂದರ್ಭ ವಿದ್ಯುತ್ ಅವಘಡ : ಐವರಿಗೆ ಗಾಯ : ಇಬ್ಬರ ಸ್ಥಿತಿ ಗಂಭೀರ*

ಸೆಪ್ಟೆಂಬರ್ 26, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕೊಡಗಿನಲ್ಲಿ ಜನಜಾಗೃತಿ : 50 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಹನ ಜಾಥಾ*

ಸೆಪ್ಟೆಂಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.25 NEWS DESK : ದೇಶದ ಅಖಂಡತೆ, ಏಕತೆ ಹಾಗೂ ಆಂತರಿಕ ಸುರಕ್ಷತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ…

*ಪ್ರತಾಪ್ ಸಿಂಹ ಹೇಳಿಕೆ ವಿರುದ್ಧ ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಗುತ್ತಿಗೆ ನೌಕರರನ್ನು ಖಾಯಂಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹ : ಮಡಿಕೇರಿಯಲ್ಲಿ ಪ್ರತಿಭಟನೆ*

ಸೆಪ್ಟೆಂಬರ್ 25, 2026

*ಕಡಿಯತನಾಡ್‌ನ ಕುರಿತು ಬೃಹತ್ ಅಧ್ಯಯನ ಕೃತಿ ಬಿಡುಗಡೆ : ಮೊದಲ ಬಾರಿಗೆ ನಾಡಿನ ಸಮಗ್ರ ಅಧ್ಯಯನ : ಬೆಂಗಳೂರಿನಲ್ಲಿ ಸೆ.27 ರಂದು ಲೋಕಾರ್ಪಣೆ*

ಸೆಪ್ಟೆಂಬರ್ 25, 2026

*ಸೆ.27ರಂದು ಸ್ವಚ್ಛತಾ ಕಾರ್ಯಕ್ರಮ*

ಸೆಪ್ಟೆಂಬರ್ 25, 2026

*ಸುಂದರನಗರದಲ್ಲಿ ಬೀದಿ ನಾಯಿಗಳ ಹಾವಳಿ : ವೃದ್ಧರ ಮೇಲೆ ದಾಳಿ : ಕ್ರಮಕ್ಕೆ ಒತ್ತಾಯ*

ಸೆಪ್ಟೆಂಬರ್ 25, 2026

*ಮಡಿಕೇರಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಮಗ್ರ ಉಚಿತ ಆರೋಗ್ಯ ಶಿಬಿರ*

ಸೆಪ್ಟೆಂಬರ್ 25, 2026

*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆ.28ರಿಂದ ದೈಹಿಕ ಪರೀಕ್ಷೆ ಆರಂಭ*

ಸೆಪ್ಟೆಂಬರ್ 25, 2026

*ಮಡಿಕೇರಿ ನಗರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ*

ಸೆಪ್ಟೆಂಬರ್ 25, 2026

*ವಿರಾಜಪೇಟೆ ಅರಣ್ಯ ಇಲಾಖೆಗೆ ನೂತನ ಬೊಲೆರೋ ವಾಹನ ಹಸ್ತಾಂತರ*

ಸೆಪ್ಟೆಂಬರ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.