
ಮಡಿಕೇರಿ NEWS DESK ಫೆ.17 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹಾಗೂ ದಿವ್ಯಾ ದಂಪತಿಯ ವಿವಾಹ ವಾರ್ಷಿಕೋತ್ಸವದ ಸಂಭ್ರಮವನ್ನು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಸಮಿತಿ ನಗರದ ವಿಕಾಸ್ ಜನ ಸೇವಾ ಟ್ರಸ್ಟ್ ನ ಆಶ್ರಮದಲ್ಲಿ ಹಂಚಿಕೊಂಡಿತು. ಆಶ್ರಮದಲ್ಲಿ ನೆಲೆಸಿರುವ ಹಿರಿಯರಿಂದ ಕೇಕ್ ಕತ್ತರಿಸಿ ಸಿಹಿಹಂಚಿ ಸಂಭ್ರಮಿಸಿದ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಕಲ್ಪಿಸಿದರು. ಆಶ್ರಮವಾಸಿಗಳು ಶಾಸಕ ಡಾ.ಮಂತರ್ ಗೌಡ ಅವರ ಕುಟುಂಬದ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿ ಶುಭ ಹಾರೈಸಿದರು. ನಗರ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶಶಿಕಲಾ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದಯಚಂದ್ರಿಕ, ಪ್ರೇಮ, ಮುಮ್ತಾಜ್ ಬೇಗಂ, ಪವಿತ್ರ ನಗರಸಭೆಯ ನಾಮನಿರ್ದೇಶಿತ ಸದಸ್ಯೆ ಜುಲೇಕಾಬಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಚಂದ್ರಶೇಖರ್ ಆರ್.ಪಿ, ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಕೆ.ಆರ್, ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೋಳಿ, ಎನ್‌ಎಸ್‌ಯು ಮುಖಂಡ ಅರ್ಜುನ್, ಪ್ರಮುಖರಾದ ಕೋಚನ ಚೇತನ್, ವಿಕಾಸ್ ಜನ ಸೇವಾ ಟ್ರಸ್ಟ್ ನ ಆಶ್ರಮದ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.








